ತುಮಕೂರು

ಕ್ವಾರಿ ಕಾರ್ಮಿಕರ ಸಂಘದಿಂದ ಪ್ರತಿಭಟನೆ

Published On :

ಗುಬ್ಬಿ: ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ, ಎಐಟಿಯುಸಿ ವತಿಯಿಂದ ಪಟ್ಟಣದ ಬಸ್‌ನಿಲ್ದಾಣದ ಬಳಿ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು.  ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕಾರ್ಮಿಕರು ಕಳೆದ ಹಲವಾರು ವರ್ಷಗಳಿಂದ ಹಲವಾರು ಸಮಸ್ಯೆಗ ನ್ನು ಎದುರಿಸುತ್ತಿದ್ದಾರೆ. ಸರ್ಕಾರ ಕೂಡಲೇ ಕಾರ್ಮಿಕರ ಬಹುದಿನಗಳ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸುವತ್ತ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಚಿನ್ನಪ್ಪ ಮನವಿ ಮಾಡಿದರು.
ಸರ್ಕಾರ ಕಾರ್ಮಿಕರಿಗೆ ನಿಯಮಾನುಸಾರ ನೀಡಬೇಕಾದ ಸವಲತ್ತುಗಳನ್ನು ನೀಡುತ್ತಿಲ್ಲ. ಕಾರ್ಮಿಕರಿಗೆ ಮಂಡಳಿಯಿಂದ ರು. 2 ಲಕ್ಷದವರೆಗೆ ಸಾಲ ಸೌಲಭ್ಯ ನೀಡುತ್ತಿದೆ. ವಯಸ್ಸಾದ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ  ನೀಡುತ್ತಿದೆ. ಆದರೆ ಕಟ್ಟಡ ಕಟ್ಟುವ ಮತ್ತು ಕಲ್ಲು ಕ್ವಾರಿ ಕಾರ್ಮಿಕರಿಗೆ ಯಾವುದೇ ಸೌಲಭ್ಯಗಳನ್ನು ಒದಗಿಸುತ್ತಿಲ್ಲ. ಕಾರ್ಮಿಕರಿಗೆ ಕನಿಷ್ಟ ಮಾಸಿಕ ಪಿಂಚಣಿಯನ್ನು ರು. 300 ಹೆಚ್ಚಿಸಬೇಕು. ಇಎಸ್‌ಐ ಸೌಲಭ್ಯ ಜಾರಿಗೊಳಿಸಿ, ಗುರುತಿನ ಚೀಟಿ ನೀಡಬೇಕು. ಅನಾರೋಗ್ಯ ಪೀಡಿತರಿಗೆ ಧನಸಹಾಯ ಅಗತ್ಯ. ಅಪಘಾತ ಮತ್ತು ಮರಣಕ್ಕೀಡಾದ ಕಾರ್ಮಿಕರಿಗೆ ಕನಿಷ್ಟ ರು. 5 ಲಕ್ಷ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು. ಪಟ್ಟಣದ ಬಸ್ ನಿಲ್ದಾಣದಿಂದ ಸಾಗಿದ ಪ್ರತಿಭಟನಾ ರ್ಯಾಲಿ, ನಂತರ ತಹಸೀಲ್ದಾರ್ ಕಚೇರಿಗೆ ತೆರಳಿ ಮನವಿ ಕಾರ್ಮಿಕರು ಪತ್ರ ಸಲ್ಲಿಸಿದರು. ಪ್ರತಿಭಟನಾ ರ್ಯಾಲಿಯಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಯೋಗೇಶ್, ತಾಲೂಕು ಸಂಚಾಲಕರಾದ ನಾಗರಾಜು,ಶ್ರೀಧರ್, ಗಂಗರಾಜ ಅರಸ್, ಸೀನಪ್ಪ, ರಾಜಪ್ಪ, ರಂಗಸ್ವಾಮಿ, ಭಾಗ್ಯಮ್ಮ, ಶಶಿಕಲಾ, ನಾಗಣ್ಣ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.