ತುಮಕೂರು

ಬರ ಅಧ್ಯಯನ ತಂಡ ಕೆರೆ, ಬೆಳೆ ಮಾಹಿತಿ ಸಂಗ್ರಹ

Published On :

ಗುಬ್ಬಿ: ತಾಲೂಕು ಕಡಬ ಗ್ರಾಮಕ್ಕೆ ಭೇಟಿ ನೀಡಿದ ಬಿಜೆಪಿ ರೈತಮೋರ್ಚಾ ಬರ ಅಧ್ಯಯನ ತಂಡ ಕೆರೆ ಹಾಗೂ ಬೆಳೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಮಾಜಿ ಸಂಸದ ಜಿ.ಎಸ್. ಬಸವರಾಜು, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್, ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ಸಿದ್ದರಾಮಣ್ಣ, ಕಾರ್ಯದರ್ಶಿಗಳಾದ ಹರಪ್ರಸಾದ್, ಮೃತ್ಯುಂಜಯ, ತಾಲೂಕು ಬಿಜೆಪಿ ಅಧ್ಯಕ್ಷ ಎಚ್.ಟಿ. ಬೈರಪ್ಪ, ಮುಖಂಡರಾದ ಜಿ.ಎನ್. ಬೆಟ್ಟಸ್ವಾಮಿ, ಹುಚ್ಚವೀರೇಗೌಡ, ಮಂಜುನಾಥ್, ಪಾರ್ಥಸಾರಥಿ ಮುಂತಾದವರು ಭಾಗವಹಿಸಿದ್ದರು.
ಬಿಜೆಪಿ ರೈತ ಮೋರ್ಚಾ ವತಿಯಿಂದ ಜು. 21ರಿಂದ 28ರವರೆಗೆ ರಾಜ್ಯದಾದ್ಯಂತ ಸಂಚರಿಸಿ ಬರಗಾಲದ ಬಗ್ಗೆ ಅಧ್ಯಯನ ನಡೆಸಿ ಕೇಂದ್ರ ಹಾಗೂ ರಾಜ್ಯಕ್ಕೆ ಬರಪರಿಸ್ಥಿತಿ ಬಗ್ಗೆ ಮಾಹಿತಿ ನೀಡಲಾಗುವುದು. ಬರ ಅಧ್ಯಯನ ತಂಡದ ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್, ಮಾಜಿ ಸಂಸದ ಜಿ.ಎಸ್.ಬಸವರಾಜು ನೇತೃತ್ವದ ತಂಡ ಕಡಬಾ ಹೋಬಳಿಯ ವ್ಯಾಪ್ತಿಯ ಗ್ರಾಮಗಳಿಗೆ ತೆರಳಿ ಅಂತರ್ಜಲ ಕುಸಿತದಿಂದ ಒಣಗುತ್ತಿರುವ ತೆಂಗು ಹಾಗೂ ಅಡಿಕೆ ತೋಟಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜ್ಯದಲ್ಲಿ ಬರಗಾಲ ಉಂಟಾಗಿದ್ದರೂ, ಸಹ ರಾಜ್ಯಸರ್ಕಾರ ಯಾವುದೇ ಬರ ಪರಿಹಾರ ಕಾರ್ಯಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು. ಮಾಜಿ ಸಂಸದ ಜಿ.ಎಸ್. ಬಸವರಾಜು ಮಾತನಾಡಿ, ಜಿಲ್ಲೆಯ ಕೆರೆಗಳಿಗೆ ಸಮರ್ಪಕವಾಗಿ ಹೇಮಾವತಿ ನೀರು ಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ  ಎಂದರು. ಅಧ್ಯಯನ ತಂಡದಲ್ಲಿ ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ಸಿದ್ದರಾಮಣ್ಣ, ಕಾರ್ಯದರ್ಶಿಗಳಾದ ಹರಪ್ರಸಾದ್, ಮೃತ್ಯುಂಜಯ, ತಾಲೂಕು ಬಿಜೆಪಿ ಅಧ್ಯಕ್ಷ ಎಚ್.ಟಿ. ಬೈರಪ್ಪ, ಮುಖಂಡರಾದ ಜಿ.ಎನ್. ಬೆಟ್ಟಸ್ವಾಮಿ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.