ವಾಲ್ಮೀಕಿ ಯಾರು? ಕೃತಿ ಮುಟ್ಟುಗೋಲಿಗೆ ಶ್ಲಾಘನೆ
ತುಮಕೂರು: ವಾಲ್ಮೀಕಿ ಯಾರು ಕೃತಿ ಮುಟ್ಟುಗೋಲು ಬೆಂಬಲಿಸಿ ತುಮಕೂರು ಜಿಲ್ಲಾ ವಾಲ್ಮೀಕಿ ಸಮುದಾಯ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿತು. ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ಕೆ.ಎಸ್.ನಾರಾಯಣಾಚಾರ್ಯ ಅವರ ವಾಲ್ಮೀಕಿ ಯಾರು ಕೃತಿ ಮುಟ್ಟುಗೋಲು ಹಾಕುವಂತೆ ಈ ಹಿಂದೆ ರಾಜ್ಯಾದ್ಯಾಂತ ವಾಲ್ಮೀಕಿ ಸಮುದಾಯದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಇದಕ್ಕೆ ಸ್ಪಂದಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಶ್ಲಾಘನೀಯ ಎಂದು ಜಿಲ್ಲಾ ವಾಲ್ಮೀಕಿ ಸಮುದಾಯಯ ಮುಖಂಡರು ತಿಳಿಸಿದ್ದಾರೆ. ಈ ಸಂಬಂಧ ವಿಧಾನಸಭೆ ಹಾಗೂ ವಿಧಾನಪರಿಷತ್ನಲ್ಲಿ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿದ್ದರು. ಮನವಿಗೆ ಸ್ಪಂದಿಸಿದ ಸಭಾನಾಯಕರು ಕೃತಿಯನ್ನು ಮುಟ್ಟುಗೋಲು ಹಾಕುವುದಾಗಿ ತಿಳಿಸಿರುವುದು ಸಂತೋಷವನ್ನುಂಟು ಮಾಡಿದೆ ಎಂದು ತಿಳಿಸಿದರು. ಇದೇ ವೇಳೆ ಕೃತಿ ಮುಟ್ಟುಗೋಲಿಗೆ ಮುಂದಾದ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕ ಜನಾಂಗದ ಶಾಸಕರಿಗೆ ವಾಲ್ಮೀಕಿ ಸಮುದಾಯದ ಪರ ಧನ್ಯವಾದಗಳನ್ನು ಅರ್ಪಿಸಿರುವುದಾಗಿ ತಿಳಿಸಿದರು. ವಾಲ್ಮೀಕಿ ಜನಾಂಗದ ಮುಖಂಡರು ಟೌನ್ ಹಾಲ್ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭಧಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಲಕ್ಷ್ಮೀನಾರಾಯಣ್, ಭೀಮಾನಾಯಕ್, ಜಯರಾಮ್ ನಾಯಕ್, ಎಸ್.ಕೆ. ರಾಜಣ್ಣ, ಜಗದೀಶ್, ಮಂಜುಳಮ್ಮ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

