ಅತ್ಯಾಚಾರ ತಡೆಗಟ್ಟಿ: ಗೀತಾ

Updated on: 

ತುಮಕೂರು: ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಜಾಸ್ತಿಯಾಗಿದ್ದು, ಆತಂಕಕಾರಿ ಬೆಳವಣಿಗೆಯಾಗಿದೆ. ಇದನ್ನು ತಡೆಗಟ್ಟಲು ದೃಢ ನಿರ್ಧಾರವನ್ನು ಸರ್ಕಾರ ಕೈಗೊಳ್ಳಬೇಕೆಂದು ಬಿಜೆಪಿ ತುಮಕೂರು ನಗರ ಮಹಿಳಾ ಮೋರ್ಚಾ ನಗರ ಅಧ್ಯಕ್ಷೆ ಗೀತಾ ಶಿವಣ್ಣ ಒತ್ತಾಯಿಸಿದ್ದಾರೆ.
ಶನಿವಾರ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ತುಮಕೂರು ನಗರ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳೆಯರು ತಮ್ಮ ಸ್ವಂತ ಬಲದಿಂದ ಸ್ವಾವಲಂಬಿ, ಸ್ವಾಭಿಮಾನದಿಂದ ಬದುಕನ್ನು ರೂಪಿಸಿಕೊಂಡು ಸಮಾಜದ ಮುಖ್ಯವಾಹಿನಿಯಲ್ಲಿ ಬೆಳೆಯಬೇಕು ಎಂದರು.
ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಪ್ರೇಮಾ ಹೆಗ್ಡೆ, ಮಹಿಳೆಯರು ವ್ಯಕ್ತಿತ್ವ ವಿಕಸನಗೊಳಿಸಿಕೊಂಡು, ಸಮಾಜ ಮುಖಿಯಾಗಿ ಕಾರ್ಯ ನಿರ್ವಹಿಸಿಕೊಳ್ಳುವ ಸ್ವಸಾಮರ್ಥ್ಯದಿಂದ ಬೆಳೆಯಬೇಕು. ಮಹಿಳೆಯರು, ಮಕ್ಕಳ ಮೇಲಿನ ಇತ್ತೀಚಿನ ಬೆಳವಣಿಗೆಗಳು ಅತಂಕಕಾರಿಯಾಗಿದೆ. ಆಡಳಿತದ ಚುಕ್ಕಾಣಿ ಹಿಡಿದಿರುವವರು ತಮ್ಮ ಕರ್ತವ್ಯದಿಂದ ವಿಮುಖರಾಗದೆ, ಎಲ್ಲರ ರಕ್ಷಣೆ ಹೊರೆ ಹೊತ್ತು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಲಿ ಎಂದರು.
ಬಿಜೆಪಿ ತುಮಕೂರು ನಗರಾಧ್ಯಕ್ಷ ಕೆ.ಪಿ.ಮಹೇಶ. ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅನಿತಾ ನಂಜುಂಡಯ್ಯ ಜಿಲ್ಲಾ ಉಪಾಧ್ಯಕ್ಷೆ ವಿಜಯಭಾಸ್ಕರ್, ಜಿಲ್ಲಾ ಕಾರ್ಯದರ್ಶಿ ಕೋಮಲ, ಮಾಲತಿರಾವ್, ಹಿಂದುಳಿದ ವರ್ಗಗಳ ಜಿಲ್ಲಾ ಕಾರ್ಯದರ್ಶಿ ಪ್ರೇಮಲತಾ, ಎಸ್‌ಟಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷೆ ವರಮಹಾಲಕ್ಷ್ಮೀ, ಲತಾ ಶ್ರೀನಿವಾಸ್, ಅನಸೂಯಮ್ಮ, ಭಾರತೀ ರಾಜ್, ಶಿವಲಕ್ಷಮ್ಮ, ಪಲ್ಲವಿ, ಪ್ರೀತಿ, ವಿಮಲ ಕರಿಬಸಪ್ಪ, ವೀಣಾ ಮಂಜುನಾಥ್ ಮುಂತಾದವರು ಭಾಗವಹಿಸಿದ್ದರು. ತುಮಕೂರು ನಗರ ಮಹಿಳಾ ಮೋರ್ಚಾ ಖಜಾಂಚಿ ಮಮತಾಶಿವಕುಮಾರ್ ಸ್ವಾಗತಿಸಿ, ನಿರೂಪಿಸಿದರು, ನಗರ ಮಹಿಳಾ ಮೋರ್ಚಾ ಕಾರ್ಯದರ್ಶಿ ಮಂಜುಳರಾಮ್ ವಂದಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com