ತುಮಕೂರು

ಅನುತ್ಪಾದಕ ಸಾಲ ನಿಯಂತ್ರಿಸಿ

Published On :

ತುಮಕೂರು: ಅನುತ್ಪಾದಕ ಸಾಲವನ್ನು ಯುದ್ಧೋಪಾದಿಯಲ್ಲಿ ನಿಯಂತ್ರಿಸುವ ಜವಾಬ್ದಾರಿ ಬ್ಯಾಂಕ್‌ನ ಎಲ್ಲಾ ಅಧಿಕಾರಿಗಳ ಮೇಲೆ ಇದೆ. ಇದನ್ನು ಮನಗೊಂಡು ಇಂದಿನ ಅವಶ್ಯಕತೆಗಳಿಗೆ ಅನುಗುಣವಾಗಿ ಎಲ್ಲಾ ಸದಸ್ಯರು ಕರ್ತವ್ಯ ನಿರ್ವಹಿಸಬೇಕೆಂದು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟದ ಅಧ್ಯಕ್ಷರು ಹಾಗೂ ಅಖಿಲ ಭಾರತೀಯ ಸ್ಟೇಟ್ ಬ್ಯಾಂಕ್ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ವೈ. ಸುದರ್ಶನ್ ಕರೆ ನೀಡಿದರು.
ತುಮಕೂರಿನಲ್ಲಿ ಏರ್ಪಾಟಾಗಿದ್ದ ಭಾರತೀಯ ಸ್ಟೇಟ್ ಬ್ಯಾಂಕ್ ಅಧಿಕಾರಿಗಳ ಸಂಘದ ವಲಯ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವೇತನ ಪರಿಷ್ಕರಣೆಯ ಕುರಿತಂತೆ ಸವಿಸ್ತಾರವಾಗಿ ತಿಳಿಸಿ, ಇನ್ನು ಹೆಚ್ಚಿನ ಸವಲತ್ತುಗಳನ್ನು ಹಾಗೂ ಪಾರದರ್ಶಕ ವರ್ಗಾವಣೆಯ ನೀತಿಯನ್ನು ತರಲು ಬ್ಯಾಂಕಿನ ಉನ್ನತ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುವುದಾಗಿ ಆಶ್ವಾಸನೆ ನೀಡಿದರು.
ಸಮ್ಮೇಳನ ಸಹಕಾರಿ: ಕಾರ್ಯಕ್ರಮ ಉದ್ಘಾಟಿಸಿದ ಸಂಘದ ಅಧ್ಯಕ್ಷ ಡಿ. ಶಾಮಸುಂದರ್ ರಾವ್, ವಲಯ ಸಮ್ಮೇಳನಗಳ ಉದ್ದೇಶಗಳ ಬಗ್ಗೆ ವಿವರಿಸಿ, ಸಂಘಟನೆ ಬಲಪಡಿಸಲು ಹಾಗೂ ಸದಸ್ಯರ ಸಮಸ್ಯೆಗಳ ಬಗ್ಗೆ ಹೆಚ್ಚು ಗಮನಹರಿಸಲು ಇಂತಹ ಸಮ್ಮೇಳನಗಳು ಸಹಕಾರಿ ಎಂದರು. ಭಾರತೀಯ ಸ್ಟೇಟ್ ಬ್ಯಾಂಕ್ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ನಾಯಕ್ ಪ್ರಾಸ್ತಾವಿಕ ನುಡಿಗಳನ್ನಾಡಿ, ವೇತನ ತಾರತಮ್ಯ ಮತ್ತು ವರ್ಗಾವಣೆ ಗೊಂದಲ ಪರಿಹರಿಸುವ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಸನ್ಮಾನ: ಅಖಿಲ ಭಾರತ ಎಸ್‌ಬಿಐ ಅಧಿಕಾರಿಗಳ ಒಕ್ಕೂಟದ ನಿವೃತ್ತ ಕಾರ್ಯದರ್ಶಿ ನಾಗರಾಜಶಾಸ್ತ್ರಿಯವರನ್ನು ಸನ್ಮಾನಿಸಲಾಯಿತು. ವಲಯ ಕಾರ್ಯದರ್ಶಿಗಳಾದ ಕೆ.ಎನ್. ವಾದಿರಾಜ್ ವರದಿ ಮಂಡಿಸಿದರು. ಡಿ.ಬಿ. ಸಾವಂತ್ ಪ್ರಾದೇಶಿಕ ಕಾರ್ಯದರ್ಶಿ, ಬೆಂಗಳೂರು ವಲಯ ಇವರು ಸದಸ್ಯರ ಸಮಸ್ಯೆಗಳಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಬಿ.ಪಿ. ಸಿಂಗ್ ಸ್ವಾಗತಿಸಿ, ಸುರೇಶ್ ರಾವ್ ವಂದಿಸಿ, ಮಾಧುರಿ ತಂಡದವರು ಪ್ರಾರ್ಥಿಸಿ, ಲತಾ ಕಾರ್ಯಕ್ರಮ ನಿರೂಪಿಸಿದರು. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದ ಎಲ್ಲಾ ಶಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ರಾಷ್ಟ್ರಮಟ್ಟದ ಹಾಗೂ ರಾಜ್ಯಮಟ್ಟದ ಸಂಘಟನೆಯ ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.