ತುಮಕೂರು

ಬಸವೇಶ್ವರ ಕೋ ಆಪರೇಟಿವ್ ಹೊಸ ಶಾಖೆ ಉದ್ಘಾಟನೆ ಆ.1ಕ್ಕೆ

Published On :

ತುಮಕೂರು: ನಗರದ ಬಸವೇಶ್ವರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು ಆ.1ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ರಾಜಾಜಿನಗರದ 19ನೇ ಮುಖ್ಯರಸ್ತೆ, ಮೊದಲ ಹಂತದ ನಂ.176 ಇಲ್ಲಿ ಸೊಸೈಟಿಯ ನೂತನ ಮೂರನೇ ಶಾಖೆಯ ಪ್ರಾರಂಭೋತ್ಸವವನ್ನು ಹಮ್ಮಿಕೊಂಡಿರುವುದಾಗಿ ಸೊಸೈಟಿ ಅಧ್ಯಕ್ಷ ಟಿ.ಸಿ. ಓಹಿಲೇಶ್ವರ್ ತಿಳಿಸಿದ್ದಾರೆ.
ತುಮಕೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನೂತನ ಶಾಖೆ ಪ್ರಾರಂಭೋತ್ಸವ ಸಮಾರಂಭದ ಸಾನಿಧ್ಯವನ್ನು ಕೊಳದಮಠದ ಡಾ. ಶಾಂತವೀರ ಸ್ವಾಮೀಜಿ, ಸಿದ್ಧಗಂಗಾ ಮಠದ ಕಿರಿಯ ಶ್ರೀ ಸಿದ್ಧಲಿಂಗ ಸ್ವಾಮೀಜಿ ಹಾಗೂ ಬೇಲಿಮಠದ ಶಿವಾನುಭವ ಚರಮೂರ್ತಿ ಶಿವರುದ್ರ ಸ್ವಾಮೀಜಿ ವಹಿಸಲಿದ್ದು, ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ನೂತನ ಶಾಖೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಶಾಸಕ ಎಸ್. ಸುರೇಶ್‌ಕುಮಾರ್ ಅವರು ಕಂಪ್ಯೂಟರ್ ಉದ್ಘಾಟನೆ ಮಾಡಲಿದ್ದು, ಬಿಬಿಎಂಪಿ ಮಾಜಿ ಉಪಮೇಯರ್ ಎಸ್.ಹರೀಶ್ ಅವರು ಭದ್ರತಾ ಕೊಠಡಿಯನ್ನು ಉದ್ಘಾಟನೆ ಮಾಡುವರು. ಮಾಜಿ ಸಚಿವ ವಿ.ಸೋಮಣ್ಣ ಅವರು ಠೇವಣಿ ಪತ್ರ ಬಿಡುಗಡೆ ಮಾಡುವರು.
ಮುಖ್ಯಅತಿಥಿಗಳಾಗಿ ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಡಿ.ಪಾಂಡುರಂಗ ಗರಗ್, ಮಾಜಿ ಸಂಸದ ಜಿ.ಎಸ್. ಬಸವರಾಜು, ಮಾಜಿ ಸಚಿವ ಶಿವಣ್ಣ, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಬಿ.ಎಸ್. ಪರಮಶಿವಯ್ಯ, ಶರಣಸೇವಾ ಸಮಾಜದ ಕಾರ್ಯದರ್ಶಿ ಎಚ್.ಎಸ್. ಶಿವಲಿಂಗಯ್ಯ ಆಗಮಿಸಲಿದ್ದಾರೆ ಎಂದರು. ಸೊಸೈಟಿ ಉಪಾಧ್ಯಕ್ಷ ಎಸ್.ಎಂ. ರಾಜು, ನಿರ್ದೇಶಕರಾದ ಬಿ.ರುದ್ರಶೆಟ್ಟಿ, ಕೆ.ಆರ್. ಮಹದೇವಯ್ಯ, ಟಿ.ಕೆ. ಕುಮಾರಸ್ವಾಮಿ, ಜಿ.ಮಲ್ಲಿಕಾರ್ಜುನಯ್ಯ, ಟಿ.ಆರ್. ನಾಗಪ್ರಸಾದ್, ಬಿ.ಎಸ್.ವೀಣಾ ನಾಗೇಶ್, ಟಿ.ಎಸ್. ಸುಮಿತ್ರ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.