ತುಮಕೂರು

ಹಿರಿಯ ವಿದ್ಯಾರ್ಥಿ ಸಂಘದಿಂದ ಜಿವಿಪಿ ಕಾಲೇಜಿಗೆ ನೆರವು

Published On :

ಹುಳಿಯಾರು: ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಒಟ್ಟಾಗಿ ತಮ್ಮ ಶಾಲೆಗಳಲ್ಲಿ ಹಿರಿಯ ವಿದ್ಯಾರ್ಥಿ ಸಂಘಗಳನ್ನು ರಚಿಸುವ ಮೂಲಕ ತಾವು ಓದಿದ ಶಾಲೆಗೆ ಸೇವೆ ಮಾಡಲು ಮುಂದಾಗಬೇಕೆಂದು ಹಂದನಕೆರೆ ಪಿಎಸೈ ಸುನಿಲ್ ತಿಳಿಸಿದರು.
ಹುಳಿಯಾರು ಸಮೀಪದ ಹಂದನಕೆರೆ ಜಿವಿಪಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ನೂತನವಾಗಿ ಹಿರಿಯ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಮಾತನಾಡಿ, ಓದು ಮುಗಿದ ನಂತರ ಪ್ರತಿಯೊಬ್ಬರು ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಹಣ ಸಂಪಾದನೆಗೆ ಮುಂದಾಗುತ್ತಾರೆ. ನಂತರ ತಾವು ಓದಿದ ಶಾಲೆಗೆ ಏನಾದರೂ ಕೊಡುಗೆ ನೀಡುವ ಮನೋಭಾವ ಮೈಗೂಡಿಸಿಕೊಳ್ಳಬೇಕು ಎಂದರು.
ಸಂಸ್ಥೆಯ ಕಾರ್ಯದರ್ಶಿ ಕೆ.ಎಸ್. ತಮ್ಮಯ್ಯ ಮಾತನಾಡಿ, ತಮ್ಮ ಶಾಲೆಯ ಹಿರಿಯ ವಿದ್ಯಾರ್ಥಿಗಳು ಸಂಘ ಸ್ಥಾಪನೆ ಮಾಡಿ ಶಾಲೆಗೆ ನೆರವಾಗಲು ಹೊರಟಿರುವುದು ಶ್ಲಾಘನೀಯ ಎಂದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ, ಎನ್. ಮೂರ್ತಿ ಮಾತನಾಡಿದರು. ಸಂಘಕ್ಕೆ ಸದಸ್ಯರಾಗಲು ಬಯಸುವ ಹಿರಿಯ ವಿದ್ಯಾರ್ಥಿಗಳು ಸಂಘದ ಕಾರ್ಯದರ್ಶಿ ಶರತ್(9632300369) ಸಂಪರ್ಕಿಸಲು ಕೋರಿದೆ.
ಪ್ರಾಂಶುಪಾಲ ಚಂದ್ರಪ್ಪ ಅಧ್ಯಕ್ಷತೆ ವಹಿಸಿದ್ದು, ಸಂಘದ ಉಪಾಧ್ಯಕ್ಷ ಸಯ್ಯದ್ ಇಸ್ರಾರ್ ಆಲಿ, ಸಹಕಾರ್ಯದರ್ಶಿ ದರ್ಶನ್, ಸಯ್ಯದ್ ವಾಯಿದ್, ಪದಾಧಿಕಾರಿಗಳಾದ ಲಕ್ಷ್ಮಿಕಾಂತ, ಮುತ್ತುರಾಜ್, ಅರ್ಪಿತ, ತೇಜಸ್, ಭವ್ಯಶ್ರೀ, ರಾಕೇಶ್, ಅನಿಲ್, ಸುನಿಲ್‌ಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.