ತುಮಕೂರು

ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ: ಶಾಸಕ ಪಿ.ಆರ್. ಸುಧಾಕರ್ ಅಭಿಪ್ರಾಯ

Published On :

ಕೊರಟಗೆರೆ: ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಬೇಕು. ಪೋಷಕರೊಂದಿಗೆ ಮಕ್ಕಳು ಇರಬೇಕು ಎಂದು ಶಾಸಕ ಪಿ.ಆರ್. ಸುಧಾಕರ್ ತಿಳಿಸಿದರು. ಪಟ್ಟಣದ ಪಾಂಡುರಂಗ ಕಲ್ಯಾಣ ಮಂಟಪದಲ್ಲಿ ಒಕ್ಕಲಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಡೆದ ನಿವೃತ್ತಚ ನೌಕರರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳ ಉಜ್ವಲ ಭವಿಶ್ಯಕ್ಕಾಗಿ ಶ್ರಮಿಸುವ ಪೋಷಕರನ್ನು ಬದುಕಿಗೊಂದು ದಾರಿ ಸಿಕ್ಕ ನಂತರ ಕಡೆಗಣಿಸಿ ವೃದ್ಧಾಶ್ರಮಕ್ಕೆ ಕಳುಹಿಸುವುದು ಖೇದಕರ ಎಂದರು. ಬೆಂಗಳೂರಿನ ಆಕ್ಸ್‌ಫರ್ಡ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಜಿ.ಆರ್ ಶಿವರಾಮಯ್ಯ, ತಾಲೂಕು ಜೆಡಿಎಸ್ ಕಾರ್ಯಾಧ್ಯಕ್ಷ ನರಸಿಂಹರಾಜು ಮಾತನಾಡಿದರು. ಕಾರ್ಯಕ್ರಮದಲ್ಲಿ ನೌಕರರ ಸಂಘದ ಅಧ್ಯಕ್ಷ ಬಿ.ಆರ್. ನಾಗರಾಜು,  ಹಾಲಪ್ಪ ಪ್ರತಿಷ್ಠಾನ ಅಧ್ಯಕ್ಷ ಮುರುಳೀಧರ್ ಹಾಲಪ್ಪ, ರಾಜ್ಯ ವಕ್ಕಲಿಗರ ಸಂಘದ ನಿರ್ದೇಶಕ ಶಶಿಕಿರಣ್, ನರೇಂದ್ರಬಾಬು, ತಾಪಂ ಅಧ್ಯಕ್ಷ ರಾಜಮ್ಮ, ಸದಸ್ಯ ಎಲ್.ವಿ ಪ್ರಕಾಶ್, ತಾಲೂಕು ಕಸಾಪ ಅಧ್ಯಕ್ಷ ಎಸ್.ಕೆ ನಾಗರಾಜು, ಮುಖಂಡರಾದ ಹನುಮಂತಾಯಪ್ಪ, ಎಲ್. ರಾಜಣ್ಣ, ತಿಮ್ಮಪ್ಪ, ಗೋವಿಂದಸ್ವಾಮಿ, ಬಿ.ಜಿ ಹನುಮಂತರಾಯಪ್ಪ, ಮಲ್ಲೇಶಯ್ಯ, ಪರಮೇಶ್,ವೆಂಕಟೇಶ್ ಸೇರಿದಂತೆ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.