ತುಮಕೂರು

ವೈದ್ಯ ಕಾಲೇಜು ಹಣ ಬಿಡುಗಡೆಗೆ ಒತ್ತಾಯ

Published On :

ತುಮಕೂರು: ತುಮಕೂರಿಗೆ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಮಂಜೂರಾಗಿದ್ದು, ಕಾಲೇಜಿನ ಕಟ್ಟಡ ನಿರ್ಮಿಸುವುದಕ್ಕೆ ಹಾಗೂ ಇತರೆ ಮೂಲಸೌಕರ್ಯ ಒದಗಿಸುವ ಸಲುವಾಗಿ ಹಣ ಬಿಡುಗಡೆ ಮಾಡುವಂತೆ ತುಮಕೂರು  ಶಾಸಕ ಡಾ. ರಫೀಕ್ ಅಹಮದ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ವಿಧಾನಸಭೆಯ ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಶಾಸಕ ಡಾ. ರಫೀಕ್ ಅವರ ಒತ್ತಾಯಕ್ಕೆ ಸರ್ಕಾರ ಹಾಗೂ ವೈದ್ಯಕೀಯ ಶಿಕ್ಷಣ ರಾಜ್ಯ ಸಚಿವ ಡಾ.ಶರಣ ಪ್ರಕಾಶ ಆರ್. ಪಾಟೀಲ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಈ ಕುರಿತಂತೆ ವೈದ್ಯಕೀಯ ಶಿಕ್ಷಣ ಸಚಿವರು ನೀಡಿರುವ ಉತ್ತರದಂತೆ, ತುಮಕೂರಿನಲ್ಲಿ 2015-16ನೇ ಸಾಲಿನಿಂದ 150  ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರವೇಶ ಮಿತಿಯೊಂದಿಗೆ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಪ್ರಾರಂಭಿಸಲು ಮಂಜೂರಾತಿ ನೀಡಲಾಗಿದ್ದು, ಸದರಿ ವೈದ್ಯಕೀಯ ಕಾಲೇಜಿನ ಹೆಸರನ್ನು ತುಮಕೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಎಂಬ ಹೆಸರಿನೊಂದಿಗೆ ಸ್ವಾಯತ್ತ ಸಂಸ್ಥೆಯನ್ನಾಗಿ ಘೋಷಿಸಲಾಗಿದೆ ಎಂದು ಸರ್ಕಾರ ಉತ್ತರಿಸಿದೆ. ಅಲ್ಲದೆ ವೈದ್ಯಕೀಯ ಕಾಲೇಜಿನ ಕಟ್ಟಡ ನಿರ್ಮಾಣಕ್ಕಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಜಮೀನನ್ನು ತುಮಕೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಹೆಸರಿಗೆ ವರ್ಗಾಯಿಸಲು ಅನುಮತಿ ನೀಡಲಾಗಿದೆ. ವೈದ್ಯಕೀಯ ಕಾಲೇಜಿನ ಕಟ್ಟಡ ನಿರ್ಮಾಣಕ್ಕಾಗಿ ಅಗತ್ಯವಿರುವ ಜಮೀನು ಲಭ್ಯವಾದ ಕೂಡಲೇ(ವರ್ಗವಾದ ಕೂಡಲೇ) ಸವಿವರ ಅಂದಾಜು ಪಟ್ಟಿ ಹಾಗೂ ನೀಲನಕ್ಷೆಗೆ ಪ್ರಾಧಿಕಾರಗಳ ಅನುಮೋದನೆ ಪಡೆದು, ಕಟ್ಟಡ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಹಾಗೂ ಇತರೆ ಮೂಲ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವುದಾಗಿ ವೈದ್ಯಕೀಯ ಶಿಕ್ಷಣ ಸಚಿವರು ಶಾಸಕರಿಗೆ ಉತ್ತರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.