ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

Updated on: 

ತಿಪಟೂರು: ತಾಲೂಕು ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 2013-14ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವ ವೀರಶೈವ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದೆಂದು ಸಂಘದ ಅಧ್ಯಕ್ಷರಾದ ಪ್ರಸನ್ನಕುಮಾರ್ ತಿಳಿಸಿದ್ದಾರೆ.
ಅರ್ಹ ವಿದ್ಯಾರ್ಥಿಗಳು ನಕಲು ಅಂಕಪಟ್ಟಿ ಹಾಗೂ ವರ್ಗಾವಣೆ ಪ್ರಮಾಣ ಪತ್ರಗಳೊಂದಿಗೆ ಆಗಸ್ಟ್ 5ರೊಳಗೆ ಪ್ರಸನ್ನಕುಮಾರ್, ಭೌತಶಾಸ್ತ್ರ ಉಪನ್ಯಾಸಕರು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಇವರನ್ನು ಸಂಪರ್ಕಿಸಬೇಕು. ಹೆಚ್ಚಿನ ಮಾಹಿತಿಗಾಗಿ 9482679699 ಅಥವಾ 99729 72409 ಸಂಪರ್ಕಿಸಬಹುದಾಗಿದೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com