ತಂಬಾಕಿನ ದುಷ್ಪರಿಣಾಮಗಳ ಅರಿವು ಆಗತ್ಯ
ಡಿವೈಎಸ್ಪಿ ಗಣೇಶ್ ಅಭಿಮತ ಕಾನೂನು ಅರಿವು ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ ಕುಣಿಗಲ್ ಜೂ 1
ತಂಬಾಕು ಮುಕ್ತ ಸ್ವಾಸ್ತ್ಯ ಸಮಾಜ ನಿರ್ಮಾಣಕ್ಕಾಗಿ ನಾವು ಯಾವ ರೀತಿಯ ಕೊಡುಗೆ ನೀಡುತ್ತೇವೆಂದು ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ತಂಬಾಕಿನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವಿದ್ದವರು ಅದನ್ನು ಇತರರಿಗೆ ತಿಳಿಹೇಳದಂತಹ ಪ್ರಜ್ಞಾವಂತರೂ ಸಮಾಜದ ಪಾಲಿಗೆ ಇದ್ದರೂ ಇಲ್ಲದಂತೆ ಎಂದು ಡಿವೈಎಸ್ಪಿ ಗಣೇಶ್ ಅಭಿಪ್ರಾಯಪಟ್ಟರು.
ಶನಿವಾರ ಪಟ್ಟಣದ ಪುರಸಭೆ ಬಸ್ ನಿಲ್ದಾಣದ ಆವರಣದಲ್ಲಿ ತಾಲೂಕು ವಕೀಲರ ಸಂಘ, ಪೊಲೀಸ್ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾದ ತಂಬಾಕು ಸೇವನೆಯಿಂದಾಗುವ ಹಾನಿಗಳ ಬಗ್ಗೆ ಕಾನೂನು ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ತಂಬಾಕು ಮತ್ತು ತಂಬಾಕಿನ ಉತ್ಪನ್ನಗಳ ಸೇವನೆಯಿಂದಾಗಿ ಸಮಾಜದಲ್ಲಿ ಹಲವು ಸಮಸ್ಯೆ ಉಂಟಾಗುವುದರ ಜೊತೆಯಲ್ಲಿ ಬಳಸುವ ವ್ಯಕ್ತಿಯು ಅನಾರೋಗ್ಯಕ್ಕೆ ಒಳಗಾಗುತ್ತಾನೆ. ಜೊತೆಯಲ್ಲಿ ಆತನ ಸುತ್ತಮುತ್ತ ಪರಿಸರದಲ್ಲಿನ ಹಲವು ಅಮಾಯಕರು ಅನಾರೋಗ್ಯಕ್ಕೆ ಒಳಗಾಗಲು ಕಾರಣೀ ಭೂತನಾಗುತ್ತಾನೆ ಎಂದರು.
ಮಾರಾಣಾಂತಿಕ ರೋಗ: ತಾಲೂಕು ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಬಿಂದುಮಾಧವ ಮಾತನಾಡಿ, ಸಾಂಕ್ರಾಮಿಕ ರೋಗಗಳಿಂದ ಸಾವನ್ನಪ್ಪುತ್ತಿರುವ ಸಂಖ್ಯೆ ಕಡಿಮೆಯಾಗುತ್ತಿದ್ದು ತಂಬಾಕು ಉತ್ಪನ್ನಗಳ ಬಳಕೆಯಿಂದ ಸಾವನ್ನಪ್ಪುವ ಸಂಖ್ಯೆ ಹೆಚ್ಚಾಗುವ ಜೊತೆಯಲ್ಲಿ ಮಾರಾಣಾಂತಿಕ ರೋಗಗಳಿಂದ ಬಳಲುವವರು ಹೆಚ್ಚಾಗುತ್ತಿರುವುದು ಕಳವಳಕಾರಿಯಾಗಿದೆ. ಧೂಮಪಾನ ಸಮಸ್ಯೆಯಲ್ಲಿ ಧೂಮಪಾನಿಗಳಿಗಿಂತ ಪರೋಕ್ಷ ಧೂಮಪಾನಕ್ಕೆ ಒಳಗಾಗಿ ಅನಾರೋಗ್ಯಕ್ಕೆ ಈಡಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರಸ್ತುತ ದಿನಗಳಲ್ಲಿ ಶಾಲಾ ಕಾಲೇಜುಗಳ ಸಮೀಪದಲ್ಲಿ ನಿರ್ಬಂಧ ಇದ್ದರೂ ತಂಬಾಕು ಮತ್ತು ತಂಬಾಕಿನ ಉತ್ಪನ್ನಗಳನ್ನು ಮಾರಾಟ ಮಾಡುವಂತಹದು ನಿಜಕ್ಕೂ ಆತಂಕಕಾರಿಯಾಗಿದ್ದು, ಸಂಬಂಧಪಟ್ಟ ಇಲಾಖೆಯವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಮೂಲಕ ದೇಶದ ಮುಂದಿನ ಪ್ರಜೆಗಳು ದುಶ್ಚಟಕ್ಕೆ ಬಲಿಯಾಗದ ರೀತಿಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಿದೆ ಎಂದರು.
ತಂಬಾಕು ಉತ್ಪನ್ನಗಳಿಂದಾಗುವ ಹಾನಿಗಳು ಮತ್ತು ಕಾನೂನಿನಡಿಯಲ್ಲಿ ತಂಬಾಕು ಮಾರಾಟಕ್ಕೆ, ಸೇವನೆಗೆ ಇರುವ ಶಿಕ್ಷೆಗಳ ಬಗ್ಗೆ ವಕೀಲ ಎ.ಆರ್. ರಂಗಸ್ವಾಮಿ, ಸುರೇಶ್ ಉಪನ್ಯಾಸ ನೀಡಿದರು. ನ್ಯಾಯಾಧೀಶೆ ಆರ್. ಶಾರದ ಕಾರ್ಯಕ್ರಮ ಉದ್ಘಾಟಿಸಿ, ವಕೀಲರ ಸಂಘದ ಅಧ್ಯಕ್ಷ ಚಂದ್ರೇಗೌಡ ಅಧ್ಯಕ್ಷತೆ ವಹಿಸಿದ್ದರು.ನ್ಯಾಯಾಧೀಶರಾದ ಸಾಗರ್ ಪಾಟೀಲ್, ಜಿ.ಕೆ.ದಾಕ್ಷಾಯಿಣಿ, ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

