'ನನ್ನ ವಿರುದ್ಧ ಇಲ್ಲದ ಅಪಪ್ರಚಾರ'
ಗುಬ್ಬಿ: ನಾನು ಜೆಡಿಎಸ್ ನಿಷ್ಠಾವಂತ ಜಿಲ್ಲಾ ಪಂಚಾಯ್ತಿ ಸದಸ್ಯೆ. ಮುಂಬರುವ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾನು ಸಹಕಾರ ನೀಡಲಿದ್ದೇನೆಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ ನಾನು ಶಾಸಕ ಎಸ್.ಆರ್.ಶ್ರೀನಿವಾಸ್ ಅವರ ಮಾರ್ಗದರ್ಶನದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಕಡಬ ಜಿಲ್ಲಾ ಪಂಚಾಯ್ತಿ ಸದಸ್ಯೆ ನಾಗಮ್ಮ ಲಕ್ಷ್ಮೀನಾರಾಯಣಪ್ಪ ಸ್ಪಷ್ಟಪಡಿಸಿದ್ದಾರೆ.ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಂಬರುವ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಪಕ್ಷದಿಂದ ಯಾರನ್ನು ನಿಲ್ಲಿಸಿದರು ನಾನು ಅವರಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು. ನಾನು ಜೆಡಿಎಸ್ ನಿಷ್ಠಾವಂತ ಸದಸ್ಯೆಯಾಗಿದ್ದು ಯಾವುದೇ ಕಾರಣಕ್ಕೂ ಪಕ್ಷ ವಿರೋಧಿ ನೀತಿ ಅನುಸರಿಸುವುದಿಲ್ಲ. ಅನಗತ್ಯವಾಗಿ ನನ್ನ ಬಗ್ಗೆ ಗೊಂದಲ ಸೃಷ್ಟಿಸುತ್ತಿದ್ದಾರೆಂದು ತಿಳಿಸಿದರು. ಕಡಬ ಜಿಲ್ಲಾ ಪಂಚಾಯ್ತಿ ಸದಸ್ಯೆಯಾಗಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡುವುದರ ಜೊತೆಗೆ ಜೆಡಿಎಸ್ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವುದಾಗಿ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಪ ಪಂ ಸದಸ್ಯ ಜಿ.ಸಿ. ನರಸಿಂಹಮೂರ್ತಿ, ಮುಖಂಡರಾದ ಜಿ.ವಿ.ಮಂಜುನಾಥ್, ಜಿ.ಸಿ.ದುರ್ಗೇಶ್, ಲಕ್ಷ್ಮೀನಾರಾಯಣಪ್ಪ ಉಪಸ್ಥಿತರಿದ್ದರು.
ರೈತಸಂಘ ಧರಣಿ ನಾಳೆಯಿಂದ
ತುಮಕೂರು: ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಜೂನ್ 4 ರಿಂದ ರೈತರಿಂದ ಅಹೋ ರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.
ಕೈಗಾರಿಕೆಗಳ ಸ್ಥಾಪನೆಗೆ ಕಾನೂನು ತಿದ್ದುಪಡಿ ತರಲು ಹೊರಟಿರುವುದು ಕೂಡ ಬಡ ಸಾಗುವಳಿದಾರರಿಗೆ ಬೀದಿಗೆ ತಳ್ಳಿದಂತಾಗುತ್ತದೆ. ಜೊತೆಗೆ ದೇಶದಲ್ಲಿ ಆಹಾರ ಉತ್ಪಾದನೆ ಕುಂಟಿತಗೊಳ್ಳುತ್ತಿರುವ ಇಂತಹ ಸಂದರ್ಭದಲ್ಲಿ ರೈತ-ಕೃಷಿ ಕೂಲಿಕಾರರಿಂದ ಭೂಮಿಯನ್ನು ಕಸಿಯುವುದರಿಂದಾಗಿ ಆಹಾರ ಉತ್ಪದನೆಯಲ್ಲೂ ಭಾರಿ ವ್ಯತ್ಯಾಸ ಉಂಟಾಗಲಿದೆ. ಕೃಷಿ ಮೇಲಿನ ದ್ವಂದ್ವ ನೀತಿ ಕೈಬಿಡಬೇಕು ಎಂದು ಜಿಲ್ಲಾ ಸಂಚಾಲಕ ಅಜ್ಜಪ್ಪ ತಿಳಿಸಿದ್ದಾರೆ. ಪ್ರಾಂತ ರೈತ ಸಂಘ ಜೂ.2 ರಿಂದ ರಾಜ್ಯಾದ್ಯಂತ ಅಹೋರಾತ್ರಿ ಧರಣಿ ನಡೆಸುತ್ತಿದ್ದು ಇದರ ಭಾಗವಾಗಿ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಜೂನ್ 4 ರಿಂದ ಧರಣಿ ಸತ್ಯಾಗ್ರಹ ನಡೆಸಲಿದೆ. ಜಿಲ್ಲೆಯ ಬಗರ್ ಹುಕುಂ ಸಾಗುವಳಿದಾರರು, ಕೃಷಿ ಕೂಲಿಕಾರರು, ನಿವೇಶನ ರಹಿತರು ಭಾಗವಹಿಸಿ ಅಹೋರಾತ್ರಿ ಧರಣಿಯನ್ನು ಯಶಸ್ವಿಗೊಳಿಸಲು ಕೋರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

