ತುಮಕೂರು

ಶಾಶ್ವತ ಕುಡಿವ ನೀರಿನ ಯೋಜನೆ ಜಾರಿಗೆ ಬದ್ಧ

Published On :

ಶಾಸಕ ಬಿ.ಸುರೇಶ್ ಗೌಡ ಭರವಸೆ ್ಣ ಡಾ.ಶಿವಯೋಗಿಸ್ವಾವು ಪರ ಮತಯಾಚನೆ
ಪಾವಗಡ: ನದಿ ಮೂಲದ ಶಾಶ್ವತ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಬಿಜೆಪಿ ಬದ್ಧವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಬಿ.ಸುರೇಶ್ ಗೌಡ ಅವರು ಭರವಸೆ ನೀಡಿದರು.
ಚುನಾವಣೆ ಹಿನ್ನೆಲೆಯಲ್ಲಿ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಶಿವಯೋಗಿಸ್ವಾವು ಅವರ ಪರ ಮತಯಾಚನೆಗೆ ಬುಧವಾರ ಪಾವಗಡಕ್ಕೆ ಆಗಮಿಸಿದ್ದ ಅವರು ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಕುಡಿಯುವ ನೀರು ಸೇರಿದಂತೆ ರೇಲ್ವೆ ಯೋಜನೆ, ಶೈಕ್ಷಣಿಕ ಪ್ರಗತಿ ಇನ್ನಿತರೆ ಜ್ವಲಂತ ಸಮಸ್ಯೆಗಳ ಬಗ್ಗೆ ಒಂದೇ ವರ್ಷದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ತೀರ್ಮಾನ ಕೈಗೊಂಡಿದ್ದು ತಾಲೂಕಿನಲ್ಲಿ ಕುಡಿಯವ ನೀರಿನ ಸಮಸ್ಯೆ ನಿವಾರಣೆಗೆ ಭದ್ರಾ ಮೇಲ್ದಂಡೆ ನದಿ ಯೋಜನೆ ಅನುಷ್ಠಾನಕ್ಕೆ ಬಿಜೆಪಿ  ನೇತೃತ್ವದ ಕೇಂದ್ರ ಸರ್ಕಾರ ಬದ್ಧವಾಗಿದೆ. ಇದರ ಜೊತೆಗೆ ರಾಜ್ಯ ಸರ್ಕಾರ ಕೈಜೋಡಿಸಬೇಕಿದೆ ಎಂದರು.
ಜಿಲ್ಲೆಗೆ ಡಿವಿಎಸ್, ಬಿಎಸ್‌ವೈ -  ಧ್ವನಿ ಎತ್ತಲಿ: ನದಿ ಮೂಲದ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ತಾಲೂಕಿನ ಜ್ವಲಂತ ಸಮಸ್ಯೆಗಳ ಬಗ್ಗೆ ಶಾಸಕರು ವಿಧಾನ ಸಭೆಯಲ್ಲಿ ಧ್ವನಿ ಎತ್ತಬೇಕು ಎಂದ ಅವರು ರಾಜ್ಯದ ಅಭಿವೃದ್ಧಿ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಯ ಬಗ್ಗೆ ಪ್ರಕ್ರಿಯೆಗಳು ನಡೆಯುತ್ತಿದ್ದು ಯುವಕರು ಮುಂದೆ ಬರಬೇಕು. ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಜೂ.14ರಂದು ಸಂಸದ, ಕೇಂದ್ರ ರೇಲ್ವೆ ಸಚಿವ ಸದಾನಂದಗೌಡ ಅವರು ತುಮಕೂರು ನಗರಕ್ಕೆ ಆಗಮಿಸಲಿದ್ದು ಪಕ್ಷದ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಲಿರುವುದಾಗಿ ಅವರು ತಿಳಿಸಿದರು. ಅವರ ಜೊತೆಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಪಕ್ಷದ ಹಿರಿಯ  ಮುಖಂಡರು ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಶಿಕ್ಷಕರ ಸಮಸ್ಯೆ ಮತ್ತು ಶೈಕ್ಷಣಿಕ ಪ್ರಗತಿ ಹಿನ್ನೆಲೆಯಲ್ಲಿ ಮತ್ತು ವಿದ್ಯಾವಂತ ಯುವಕರು ಜಾಗೃತರಾಗಬೇಕು. ತಾಲೂಕಿನ ಎಲ್ಲಾ ಗ್ರಾಪಂಗಳಿಗೆ ಭೇಟಿ ನೀಡಿ ಪದವೀಧರ ಯುವಕರನ್ನು ಮನವೊಲಿಸಿ ಮತಗಳನ್ನು ಸೆಳೆಯುವ ಮೂಲಕ ಅಭಿವೃದ್ಧಿ ಚಿಂತಕ, ಆಗ್ನೇಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಶಿವಯೋಗಿಸ್ವಾವು ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕು ಎಂದು ಕರೆ ನೀಡಿದರು.
ಸದಾನಂದಗೌಡರು ಕೇಂದ್ರ ರೇಲ್ವೆ ಸಚಿವರಾದ ಕಾರಣ ಚರ್ಚಿಸಿ ಈ ಭಾಗದಲ್ಲಿ ನೆನಗುದ್ದಿಗೆ ಬಿದ್ದ  ರೇಲ್ವೆ ಯೋಜನೆ ಕಾಮಗಾರಿಯನ್ನು ಪೂರ್ಣ ಗೊಳಿಸಲು ಸಹಕರಿಸಬೇಕೆಂದು ಮನವಿ ಸಲ್ಲಿಸಲಾಗುವುದು. ಜಿಲ್ಲೆಯ ಕೊರಟಗೆರೆ, ಶಿರಾ, ಮಧುಗಿರಿ ಮತ್ತು ಪಾವಗಡ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು ಈಗಾಗಲೇ ಹೇಮಾವತಿ ನದಿ ಯೋಜನೆ ಅನುಷ್ಠಾನದಿಂದ ತುಮಕೂರು ಮತ್ತು ಶಿರಾ ತಾಲೂಕಿಗೆ ನದಿ ನೀರು ಸರಬರಾಜು ಆಗುತ್ತಿದೆ ಎಂದರು.
ಮತ ನೀಡಿ: ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಮಾತನಾಡಿ, ಶಿಕ್ಷಕರು ಸಂಘಟಿತರಾಗಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಡಾ. ಶಿವಯೋಗಿ ಸ್ವಾಮಿ ಅವರನ್ನು ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲಿಸುವಂತೆ ಮನವಿ ಮಾಡಿದರು.
ರಾಜ್ಯ ಘಟಕದ ಎಸ್. ಶಿವಪ್ರಸಾದ್, ಪಕ್ಷದ ತಾ. ಅಧ್ಯಕ್ಷ  ಎಸ್.ಎನ್. ಮುರಳೀಧರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಟಿ. ಗಿರೀಶ್, ಹಿರಿಯ ಮುಖಂಡರಾದ ವಕೀಲ ನರಸಿಂಹರೆಡ್ಡಿ, ಚಂದ್ರನಾಯ್ಕ್, ಶಿವಕುಮಾರ್ ಸಾಕೇಲ್, ರೈತ ಸಂಘದ ನರಸಿಂಹರೆಡ್ಡಿ, ಕಾರ್ಯದರ್ಶಿ ರವಿ, ನವೀನ್, ಯರಪ್ಪ, ರಂಗಸಮುದ್ರ ಮಹಾಲಿಂಗಪ್ಪ ಜಯರಾಮ್ ಇತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.