ವಿದ್ಯಾಭ್ಯಾಸದ ಜೊತೆಗೆ ಜೀವನ ಕೌಶಲ್ಯದ ತರಬೇತಿ ಅಗತ್ಯ
ತುಮಕೂರು: ವಿದ್ಯಾಭ್ಯಾಸದ ಜೊತೆಗೆ ಜೀವನ ಕೌಶಲ್ಯದ ತರಬೇತಿ ಇಂದಿನ ವಿದ್ಯಾರ್ಥಿಗಳಿಗೆ ಬಹಳ ಮುಖ್ಯವಾಗಿ ಬೇಕು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ಎ.ಎ. ಡೋನಿ ಅಭಿಪ್ರಾಯಪಟ್ಟರು.
ಗೂಳೂರಿನ ಸೂಫ್ಹಾ ಇನ್ಸಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ಕಾಲೇಜು ಸಭಾಂಗಣದಲ್ಲಿ ಕೇಂದ್ರ ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಹಾಗೂ ಸೂಫ್ಹಾ ಇನ್ಸಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ವತಿಯಿಂದ ಆಯೋಜಿಸಿದ್ದ 7 ದಿನಗಳ ಜೀವನ ಕೌಶಲ್ಯ ತರಬೇತಿ ಶಿಬಿರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು ಇಂದಿನ ದಿನದಲ್ಲಿ ವಿದ್ಯಾಭ್ಯಾಸಕ್ಕೆ ಕೊರತೆ ಕಾಣುತ್ತಿಲ್ಲ.
ಆದರೆ ವಿದ್ಯಾರ್ಥಿಗಳಿಗೆ ಕೆಲವೊಂದು ಜೀವನವನ್ನು ಉತ್ತಮ ಮಾರ್ಗದೆಡೆಗೆ ಕರೆದೊಯ್ಯುವ ಕೌಶಲ್ಯ ತರಬೇತಿ ಮುಖ್ಯವಾಗಿರುತ್ತದೆ. ಕೌಶಲ್ಯ ತರಬೇತಿ ಕಲಿಯುವುದರಲ್ಲಿ ಆಸಕ್ತಿ ತೊರಬೇಕಿದೆ ಎಂದು ಕರೆ ನೀಡಿದರು. ವಿದ್ಯಾರ್ಥಿಗಳು ಯಾವ ಸಂದರ್ಭದಲ್ಲಿ ಯಾವ ರೀತಿ ನಡೆದುಕೊಳ್ಳಬೇಕು ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕಿದೆ. ವಿದ್ಯಾರ್ಥಿ ಜೀವನದಲ್ಲಿ ಸಾಕಷ್ಟು ತಪ್ಪುಗಳು ಬರುತ್ತವೆ. ಆದರೆ ಆ ತಪ್ಪುಗಳನ್ನು ಮುಂದುವರೆಸಿಕೊಂಡು ಹೋಗದೆ ಉತ್ತಮ ಮಾರ್ಗದರ್ಶನ ಪಡೆದು ತಮ್ಮ- ತಮ್ಮ ಸಾಧನೆಯ ದಾರಿಯನ್ನು ನೊಡಬೇಕಾಗುತ್ತದೆ ಎಂದರು.
ಸೂಫ್ಹಾ ಶಿಕ್ಷಣಸಂಸ್ಥೆಯ ಸಂಸ್ಥಾಪ ಕಾರ್ಯದರ್ಶಿ ಡಾ. ಇಂತಿಯಾಜ್ ಅಹಮದ್ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಅನುಕೂಲಕರವಾಗುವಂತೆ ನಮ್ಮ ಕಾಲೇಜಿನಲ್ಲಿ ಜೀವನ ಕೌಶಲ್ಯ ತರಬೇತಿಗಳನ್ನು ನೀಡಲಾಗುತ್ತದೆ. ಉತ್ತಮ ಸಾಧನೆ ಮಾಡುವ ಉದ್ದೇಶದಿಂದ ಇಂಥ ತರಬೇತಿಗಳನ್ನು ಮಾಡಲಾಗುತ್ತದೆ ಎಂದು ತಿಳಿಸಿದರು. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ತರಬೇತಿಗಳನ್ನು ನೀಡಿದಾಗ ಅವರು ವಿದ್ಯಾಭ್ಯಾಸ ಮುಗಿಸಿ ಮಂದಿನ ದಿನಗಳಲ್ಲಿ ಉತ್ತಮ ಸ್ಥಾನ ಪಡೆಯಲು ಸಹಕಾರಿಯಾಗುತ್ತದೆ. ಎಷ್ಟೇ ಓದಿದರು ಕೌಶಲ್ಯ ತರಬೇತಿ ಮುಖ್ಯವಾಗಿರುತ್ತದೆ ಎಂದು ಪ್ರತಿಯೊಬ್ಬ ವಿದ್ಯಾರ್ಥಿಯು ಗಮದಲ್ಲಿಟ್ಟುಕೊಂಡಿರಬೇಕು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

