ಗೋಡೇಕೆರೆಯಲ್ಲಿ ಗ್ರಾ.ಪಂ.ನಿಂದ ಕೃಷಿ ಮಾಹಿತಿ ಆಂದೋಲನ
ಚಿಕ್ಕನಾಯನಹಳ್ಳಿ: ತಾಲೂಕಿನ ಗೋಡೇಕೆರೆ ಗ್ರಾಮಪಂಚಾಯ್ತಿವತಿಯಿಂದ ಗುಚ್ಛಗ್ರಾಮ ಕಾರ್ಯಕ್ರಮದ ಅಂಗವಾಗಿ ಕೃಷಿ ಮಾಹಿತಿ ಆಂದೋಲನದ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂಬಂಧ ಪಂಚಾಯ್ತಿ ವ್ಯಾಪ್ತಿಯಲ್ಲಿ ಕರಪತ್ರ, ಡಂಗುರ ಹಾಕಿಸುವ ಮೂಲಕ ಪ್ರಚಾರ ಕಾರ್ಯವನ್ನು ಕೈಗೊಳ್ಳಲಾಗಿತ್ತು. ಅದರಂತೆ ಗ್ರಾಮಪಂಚಾಯ್ತಿ ವ್ಯಾಪ್ತಿಯ ರೈತರು ಗೋಡೇಕೆರೆಯಲ್ಲಿ ಕಲೆತು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯ ಮೂಲಕ ಜನರಲ್ಲಿ ಕೃಷಿ ಮಾಹಿತಿಯ ಬಗ್ಗೆ ಜಾಗೃತಿ ಮೂಡಿಸುವ ಇಲಾಖೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ನಂತರ ಪಂಚಾಯ್ತಿ ಕಚೇರಿಯ ಆವರಣದಲ್ಲಿ ಗ್ರಾಪಂ ಅಧ್ಯಕ್ಷ ಮಲ್ಲಿಕಾರ್ಜುನಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೃಷಿ ಅಧಿಕಾರಿಗಳಾದ ಬಸವರಾಜು ಮತ್ತು ಹನೀಫ್, ನಾಗರಾಜು ಅವರು ರೈತರಿಗೆ ಗುಚ್ಛಗ್ರಾಮದ ಯೋಜನೆಯ ಮಹತ್ವ ಮತ್ತು ಸವಲತ್ತುಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು. ಇದೇ ಸಂದರ್ಭದಲ್ಲಿ ಭೂಚೇತನ ಯೋಜನೆಯ ಬಗ್ಗೆಯು ಕೃಷಿ ಇಲಾಖೆ ಅಧಿಕಾರಿಗಳು ರೈತರಿಗೆ ವಿಷಯ ತಿಳಿಸಿದರು.
ವಿಶೇಷ ಆಹ್ವಾನಿತರಾಗಿ ನಿಜಾನಂದಮೂರ್ತಿ, ಸಹಾಯಕ ಕೃಷಿ ನಿರ್ದೇಶಕರು, ಹಾಲು ಉತ್ಪಾದಕ ಸಂಘದ ನಿರ್ದೇಶಕರು, ಅಧ್ಯಕ್ಷರು, ಕಾರ್ಯದರ್ಶಿ ಮುಂತಾದವರು ಹಾಜರಿದ್ದರು. ರೈತರ ಅನುವುಗಾರ ಶ್ರೀಧರ್ ಕಾರ್ಯಕ್ರಮ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

