'ಪಹಣಿ ತಿದ್ದುಪಡಿ ಆಂದೋಲನ ಸದುಪಯೋಗ ಪಡಿಸಿಕೊಳ್ಳಿ'
ತಿಪಟೂರು: ಜಿಲ್ಲಾಧಿಕಾರಿಗಳ ವಿಶೇಷ ಆದ್ಯತೆ ಮೇರೆಗೆ ಜಿಲ್ಲೆಯಾದ್ಯಂತ ಪಹಣಿ ತಿದ್ದುಪಡಿ ಆಂದೋಲನ ಪ್ರಾರಂಭವಾಗಿದ್ದು, ತಾಲೂಕಿನ ಎಲ್ಲ ಹೋಬಳಿಗಳಲ್ಲಿ ಈ ಕಾರ್ಯ ನಡೆಯಲಿದ್ದು, ರೈತ ಬಾಂಧವರು ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ತಹಸೀಲ್ದಾರ್ ಮಂಜುನಾಥ್ ಮನವಿ ಮಾಡಿದ್ದಾರೆ. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಇದ್ದ ಕೈಬರಹ ಪಹಣಿ ಪದ್ದತಿಯಿಂದ ಮತ್ತು ಇತ್ತೀಚೆಗೆ ಗಣಕೀಕರಣಗೊಂಡ ಸಮಯದಲ್ಲಿ ಹಲವು ತಾಂತ್ರಿಕ ತೊಂದರೆಗಳಿಂದ ಉಂಟಾಗಿರುವ ಸಮಸ್ಯೆ, ಗೊಂದಲ ಹಾಗೂ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಈ ಆಂದೋಲನ ನಡೆಸಲಾಗುತ್ತಿದೆ. ಪ್ರಥಮ ಹಂತವಾಗಿ ಕಿಬ್ಬನಹಳ್ಳಿ ಹೋಬಳಿಯಿಂದ ಆರಂಭಿಸಿ ತಾಲೂಕಿನ ಎಲ್ಲಾ ಹೋಬಳಿಗಳಲ್ಲಿ ರೈತರ ಮನೆ ಬಾಗಿಲಿಗೆ ಗ್ರಾಮ ಲೆಕ್ಕಿಗರು ಹಾಗೂ ಕಂದಾಯಾಧಿಕಾರಿಗಳೊಂದಿಗೆ ಕಂದಾಯ ಇಲಾಖೆಯೇ ತೆರಳಿ ಸ್ಥಳದಲ್ಲೇ ತಿದ್ದುಪಡಿ ಮಾಡಿಕೊಡುವ ಯೋಜನೆಯಾಗಿದೆ ಎಂದರು. ಪಹಣಿ ಸೇರಿದಂತೆ ಇತರ ದಾಖಲಾತಿಗಳ ಲೋಪ-ದೋಷದಿಂದ ರೈತರಿಗೆ ಸಾಕಷ್ಟು ಸಮಸ್ಯೆ ಉಂಟಾಗಿದ್ದು, ಸಾಲ ಪಡೆಯಲು ಮತ್ತು ಜಮೀನು ಮಾರಾಟ, ಖರೀದಿ ಪ್ರಕ್ರಿಯೆಗಳಲ್ಲಿ ಪೂರ್ವಿಕರ ಹೆಸರಿನಲ್ಲಿ ದಾಖಲೆ ಇದ್ದು, ಆಗಬಹುದಾದ ತೊಂದರೆ ತಪ್ಪಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರೈತರಲ್ಲಿ ಹೆಚ್ಚಿನ ದಾಖಲಾತಿ ಇಲ್ಲದಿದ್ದರೂ, ಕಚೇರಿಯಲ್ಲಿರುವ ದಾಖಲಾತಿಗಳ ತಾಳೆಯಿಂದ ಕಡತಗಳನ್ನು ವಿಲೇವಾರಿ ಮಾಡಲಾಗುವುದು ಎಂದರು.ರೈತರು ಜಾಗೃತರಾಗಿ ಭೂಮಿ ವಿಭಾಗದಲ್ಲಿ ಅರ್ಜಿ ಸಲ್ಲಿಸಿ ರು.35 ಪಾವತಿಸಿದರೆ 30ರಿಂದ 45ದಿನಗಳೊಳಗೆ ಸಂಬಂಧಪಟ್ಟವರಿಗೆ ಆಗತ್ಯ ಖಾತೆ ಬದಲಾವಣೆ ಲಭ್ಯವಾಗಲಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

