'ಸ್ಲಂ ಜನರನ್ನು ಒಕ್ಕಲೆಬ್ಬಿಸಬೇಡಿ'
ತುಮಕೂರು: ಬೆಂಗಳೂರಿನ ಜೈ ಭುವನೇಶ್ವರಿ ನಗರ ಸ್ಲಂ ಪ್ರದೇಶವನ್ನು ಒಕ್ಕಲೆಬಿಸುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ತುಮಕೂರಿನ ಕೊಳಗೇರಿ ಹಿತರಕ್ಷಣಾ ಸಮಿತಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು. ಬೆಂಗಳೂರಿನ ನಿಮ್ಹಾನ್ಸ್ ಹತ್ತಿರವಿರುವ ಜೈ ಭುವನೇಶ್ವರಿ ನಗರ ಕೊಳಚೆ ಪ್ರದೇಶವನ್ನು ಉಚ್ಚ ನ್ಯಾಯಾಲಯದಲ್ಲಿ ಒಕ್ಕಲೆಬ್ಬಿಸದಂತೆ ತಡೆಯಾಜ್ಞೆ ನೀಡಿದ್ದರು. ಕೊಳಗೇರಿ ಅಭಿವೃದ್ಧಿ ಮಂಡಳಿ ಮತ್ತು ಪೊಲೀಸ್ ಸಿಬ್ಬಂದಿ ಸೇರಿ ಇಲ್ಲಿನ 800 ಕುಟುಂಬಗಳನ್ನು ಬೀದಿಗೆ ತಳ್ಳಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದೆ.
ಶಾಲೆ ಪ್ರಾರಂಭವಾದ ಮೊದಲ ವಾರದಲ್ಲೇ ಸಾವಿರಾರು ಮಕ್ಕಳು ಶಾಲೆಗೆ ಹೋಗದಂತೆ ಉಚ್ಚ ನ್ಯಾಯಾಲಯದ ಆದೇಶವನ್ನು ಗಾಳಿಗೆ ತೂರಿ ದ್ವಂಸಗೊಳಿಸುವ ಕಾರ್ಯಚರಣೆ ಮಾಡಿರುವುದು ಮತ್ತು ನ್ಯಾಯ ಕೇಳಲು ಮುಂದಾದ ಸಂಘಟನೆ ಕಾರ್ಯಕರ್ತರು ಹಾಗೂ ಸ್ಲಂ ನಿವಾಸಿಗಳನ್ನು ಬಂಧಿಸಿರುವುದನ್ನು ಇಡೀ ರಾಜ್ಯದ ಕೊಳಗೇರಿ ನಿವಾಸಿಗಳು ಖಂಡಿಸಿದ್ದಾರೆ ಎಂದು ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.
ಸ್ಲಂ ನಿವಾಸಿಗಳನ್ನು ಬಂಧಿಸಿರುವುದನ್ನು ಇಡೀ ರಾಜ್ಯದ ಕೊಳಗೇರಿ ನಿವಾಸಿಗಳು ಖಂಡಿಸಿದ್ದಾರೆ ಎಂದು ತಿಳಿಸಿದ್ದಾರೆ.
ಸರ್ಕಾರ ಕೂಡಲೇ ಕೊಳಗೇರಿ ನಿವಾಸಿಗಳು ವಾಸಿಸುತ್ತಿರುವ ಜಾಗವನ್ನು ಡೀನೋಟಿಪೈ ಮಾಡಿ ಕೊಳಗೇರಿ ನಿವಾಸಿಗಳು ಸದರಿ ಜಾಗದಲ್ಲೇ ಬದುಕಲು ಅನುಕೂಲ ಕಲ್ಪಿಸಿಕೊಡಬೇಕೆಂದು ಸ್ಲಂ ಜನಾಂದೋಲನ ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ ಸರ್ಕಾರವನ್ನು ಆಗ್ರಹಿಸಿದ್ದಾರೆ. ಬೆಂಗಳೂರು ಘಟನೆ ಖಂಡಿಸಿ ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತಾರಕ್ಷಣಾ ಸಮಿತಿಯು ಅಪರ ಜಿಲ್ಲಾಧಿಕಾರಿಗಳ ಮುಖಾಂತರ ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಕೊಳಗೇರಿ ಅಭಿವೃದ್ಧಿ ಮಂಡಳಿ ಆಯುಕ್ತರಿಗೆ ಮನವಿ ಸಲ್ಲಿಸಿತು. ಸಮಿತಿ ಪದಾಧಿಕಾರಿಗಳಾದ ಶೆಟ್ಟಳಯ್ಯ, ಕಣ್ಣನ್, ಅಟ್ಟೇಕರ್, ಕಾಶಿರಾಜ್, ಮುರುಗ, ರಾಮಯ್ಯ, ಅರುಣ್, ಗೋವಿಂದಮ್ಮ, ಲತಾ ಮತ್ತು ಚಕ್ರಪಾಣಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

