ತುಮಕೂರು

ಅಪಹರಣ: ಯುವಕನ ಬಂಧನ

Published On :

ತುರುವೇಕೆರೆ: ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿ ಅತ್ಯಾಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಯುವಕನೋರ್ವನನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.  ಪಟ್ಟಣದ ಸುಬ್ರಹ್ಮಣ್ಯ ಬಡಾವಣೆಯಲ್ಲಿ ಸೊಪ್ಪು, ತರಕಾರಿ ಮಾರಲು ಬರುತ್ತಿದ್ದ ಮುನಿಯೂರಿನ ಪ್ರಸಾದ್ (24) ಎಂಬ ಯುವಕ ಬಡಾವಣೆಯಲ್ಲಿದ್ದ ಅನ್ಯ ಕೋಮಿಗೆ ಸೇರಿದ 16 ವರ್ಷದ ಬಾಲಕಿಯನ್ನು ಪರಿಚಯ ಮಾಡಿಕೊಂಡಿದ್ದ. ದಿನ ಕಳೆದಂತೆ ವಿಶ್ವಾಸ ಪ್ರೀತಿಯಾದ ಪರಿಣಾಮ ಕಳೆದ ಮೇ 31 ರಂದು ಬಾಲಕಿಯನ್ನು ಪ್ರಸಾದ್ ಅಪಹರಿಸಿದ್ದ. ಪ್ರಕರಣ ಸ್ಥಳೀಯ ಠಾಣೆಯಲ್ಲಿ ದಾಖಲಾಗಿತ್ತು. ಈರ್ವರೂ ಬೇರೆ ಬೇರೆ ಕೋಮಿಗೆ ಸೇರಿದವರಾಗಿದ್ದರಿಂದ ಬಿಗುವಿನ ವಾತಾವರಣವಿತ್ತು. ಈರ್ವರ ಸುಳಿವನ್ನು ಹಿಡಿದ ಪೊಲೀಸರು ಬೆಂಗಳೂರಿನಲ್ಲಿ ಇಬ್ಬರನ್ನೂ ವಶಕ್ಕೆ ತೆಗೆದುಕೊಂಡಿದ್ದಾರೆ. ಬಾಲಕಿ ಹಾಗೂ ಯುವಕನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಯುವಕನ ವಿರುದ್ಧ  ಅಪಹರಣ ಹಾಗೂ ಅತ್ಯಾಚಾರ ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ. ಸಿಪಿಐ ನಿರಂಜನ್ ಕುಮಾರ್, ಎಸೈ ಸುರೇಶ್ ಹಾಗೂ ಸಿಬ್ಬಂದಿ  ಪತ್ತೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

 ವನ ಮಹೋತ್ಸವ ಆಚರಣೆ


ತಿಪಟೂರು: ತಾಲೂಕಿನ ಭೈರನಾಯಕನಹಳ್ಳಿ ಕ್ಲಸ್ಟರ್‌ನ ಎಚ್.ಗೊಲ್ಲರಹಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಅರಣ್ಯ ಇಲಾಖೆಯಿಂದ 25 ವಿವಿಧ ಜಾತಿಯ ಸಸಿಗಳನ್ನು ತಂದು ಶಾಲಾ ಆವರಣದಲ್ಲಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಮಕ್ಕಳಿಗೆ ಸಸಿಗಳ ಪೋಷಣೆಯ ಜವಾಬ್ದಾರಿ ವಹಿಸಿ, ದಿನಾಚರಣೆಯ ಉದ್ದೇಶ, ಪರಿಸರದ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕ ರಾಜಾನಾಯ್ಕ, ಎಸ್.ಡಿ.ಎಂ.ಸಿ ಅಧ್ಯಕ್ಷ ದಾಸೇಗೌಡ ಸೇರಿದಂತೆ ಸಹ ಶಿಕ್ಷಕಿಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ: ತಾಲೂಕು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆಯುತ್ತಿರುವ ಮೆಟ್ರಿಕ್ ನಂತರದ ಪರಿಶಿಷ್ಟಜಾತಿ, ವರ್ಗದ ಕಾಲೇಜು ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ತಿಪಟೂರು ಅಥವಾ ವಿದ್ಯಾರ್ಥಿ ನಿಲಯದ ವಾರ್ಡ್‌ನ್ ಅವರಿಂದ ಉಚಿತವಾಗಿ ಅರ್ಜಿ ಪಡೆದು ಸಲ್ಲಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.