ದೇಶದಲ್ಲಿ ಪ್ರಾದೇಶಿಕ ಪಕ್ಷಗಳಿಗೆ ಭವಿಷ್ಯವಿಲ್ಲ
ಕ.ಪ್ರ.ವಾರ್ತೆ ಕೊರಟಗೆರೆ ಜೂ.8
ದೇಶದಲ್ಲಿ ಪ್ರಾದೇಶಿಕ ಪಕ್ಷಗಳಿಗೆ ಭವಿಷ್ಯವಿಲ್ಲ. ಕೇವಲ ಬಿಜೆಪಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಪಕ್ಷಗಳೆ ಮುಂದಿನ ದಿನಗಳಲ್ಲಿ ಉಳಿಯುವುದು. ಈ ಹಿನ್ನೆಲೆಯಲ್ಲಿ ಪದದವೀಧರ ಕ್ಷೇತ್ರದಲ್ಲಿ ಪ್ರಧಾನ ಮಂತ್ರಿ ನರೇಂದ್ರಮೋದಿ ಅವರ ಕೈ ಬಲಪಡಿಸಲು ಜಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಮನವಿ ಮಾಡಿದರು.
ಅವರು ತಾಲೂಕಿನಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಎ.ಹೆಚ್. ಶಿವಯೋಗಿ ಸ್ವಾಮಿಯವರ ಪರವಾಗಿ ಮತಯಾಚನೆ ಮಾಡಿ ನಂತರ ಪಟ್ಟಣದ ಬಾಲಕೀಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಪತ್ರಿಕೆಯೊಂದಿಗೆ ಮಾತನಾಡಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಯುವಕರ ಬೆಂಬಲದಿಂದ ಪ್ರಧಾನ ಮಂತ್ರಿಯಾದ ನರೇಂದ್ರ ಮೋದಿ ಅವರು, ವಿದೇಶದಲ್ಲಿರುವ ಕಪ್ಪು ಹಣ ಭಾರತಕ್ಕೆ ತಂದು ದೇಶದ ಆರ್ಥಿಕ ಕೊರತೆ ನೀಗಿಸುವರು ಎಂದರು.
ಬಿಜೆಪಿಗೆ ಪ್ರಾಶಸ್ತ್ಯದ ಮತ ನೀಡಿ: ಈ ನಿಟ್ಟಿನಲ್ಲಿ ಇದೇ ತಿಂಗಳು 20 ರಂದು ನಡೆಯಲಿರುವ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಪ್ರಾಶಸ್ತ್ಯದ ಮತ ನೀಡುವ ಮೂಲಕ ಅವರನ್ನು ಆಯ್ಕೆಮಾಡಿ ದೇಶದಲ್ಲಿ ಉತ್ತಮ ಆಡಳಿತ ನಡೆಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕೈ ಬಲ ಪಡಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ತಿಮ್ಮಜ್ಜ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೀರಕ್ಯಾತರಾಯ, ಕಾರ್ಯದರ್ಶಿ ಎಲ್.ಕಾಮಯ್ಯ, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಪಾಂಡುರಂಗ, ಸಹ ಶಿಕ್ಷಕರ ಸಂಘದ ಅಧ್ಯಕ್ಷ ರಮೇಶ್, ಮಲ್ಲೇಶಪ್ಪ, ಸಚ್ಚಿದಾನಂದ ಸೇರಿದಂತೆ ಇನ್ನಿತರ ಸಂಘ ಸಂಸ್ಥೆಗಳ ಪದಾದಿಕಾರಿಗಳು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

