ಮೇಲ್ಮನೆ ಗೆಲವು ವಿಶ್ವಾಸ
ಮಧುಗಿರಿ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಹಾಗೇ ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲವು ಸಾಧಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಭವಿಷ್ಯ ನುಡಿದರು.
ಶನಿವಾರ ಇಲ್ಲಿನ ರೋಟರಿ ಭವನದಲ್ಲಿ ಶಿಕ್ಷಕರ ಸಮಸ್ಯೆಗಳ ಸಮಾಲೋಚನಾ ಸಭೆಯಲ್ಲಿ ಮಾತನಾಡಿ, ದೇಶದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಅತ್ಯಧಿಕ ಸ್ಥಾನ ಗೆಲ್ಲುವ ಮೂಲಕ ನಮೋ ಪ್ರಧಾನಿಯಾಗಿ ಈ ದೇಶಕ್ಕೆ ಹೊಸ ಆಯಾಮ ತರಲು ಹೊರಟಿದ್ದಾರೆ. ಅದೇ ರೀತಿ ಬರುವ ವಿಧಾನ
ಪರಿಷತ್ ಚುನಾವಣೆಯಲ್ಲಿ ಪದವೀಧರರು, ಶಿಕ್ಷಕರು ಹಾಗೂ ಉಪನ್ಯಾಸಕರು ಮತ ಹಾಕುವುದರಿಂದ ಬಿಜೆಪಿ ಅಭ್ಯರ್ಥಿ ಗೆಲ್ಲುವ ವಿಶ್ವಾಸ ನನಗಿದೆ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಜೆಡಿಎಸ್ ಸೋತ
ನಂತರ ಆ ಪಕ್ಷದ 2ನೇ ಹಂತದ ನಾಯಕರು ಗುಡ್ ಬೈ ಹೇಳಿ ಬಿಜೆಪಿಗೆ ವಲಸೆ ಬರುತ್ತಿದ್ದಾರೆ.
ಅಲ್ಲದೆ ಎಂಪಿ ಚುನಾವಣೆಯಲ್ಲಿ ರಾಜ್ಯದಾದ್ಯಂತ ಮತಗಳಿಕೆ ಅವಲೋಕಿಸಿದಾಗ 138 ಕ್ಷೇತ್ರಗಳಲ್ಲಿ ಬಿಜೆಪಿ, 67 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ 16 ಕ್ಷೇತ್ರಗಳಲ್ಲಿ ಜೆಡಿಎಸ್ ಮುನ್ನಡೆ ಸಾಧಿಸಿದೆ. ಇದನ್ನು ಗಮನಿಸಿದಾಗ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಸ್ಪರ್ಧೆಯಿದ್ದು ಜೆಡಿಎಸ್ ನಗಣ್ಯವಾಗಲಿದೆ. ಹಾಗಾಗಿ ಜೆಡಿಎಸ್ನಿಂದ ಸ್ಪರ್ಧಿಸುವ ಅಭ್ಯರ್ಥಿ ಸೋಲು ಖಚಿತ ಎಂದರು. ಎಂ. ವೆಂಕಟರಾಮು, ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ಹನುಮಂತರಾಯಪ್ಪ, ಸದಾನಂದಾಸ್, ಶಿವಕುಮಾರ್, ಕೊರಟಗೆರೆ ತಾ.ಅಧ್ಯಕ್ಷ ರಮೇಶ್, ಕೆ.ರಂಗನಾಥ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

