ಬಾಲಕಾರ್ಮಿಕರ ವಿರೋಧಿ ದಿನಾಚರಣೆ
ತುಮಕೂರು: ಇಲ್ಲಿನ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಇದೇ ತಿಂಗಳ 12 ರಂದು ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಶ್ವ ಬಾಲಕಾರ್ಮಿಕರ ವಿರೋಧಿ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಧೀಶರಾದ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎನ್.ಕೆ. ಸುಧೀಂದ್ರರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರಾದ ಸಿದ್ದಲಿಂಗಪ್ರಭು, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರಮಣಗುಪ್ತ, ಸಿಇಒ ಗೋವಿಂದರಾಜು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೊಡ್ಡಮನೆ ಗೋಪಾಲಗೌಡ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಕಣ್ಣಿನ ತಪಾಸಣಾ ಉಚಿತ ಶಿಬಿರ ನಾಳೆ
ಕೊರಟಗೆರೆ: ಧಾನ್ ಫೌಂಡೇಶನ್ ಮತ್ತು ಶಂಕರ ಐ ಆಸ್ಪತ್ರೆ ಬೆಂಗಳೂರು, ಸ್ಟೇಟ್ಬ್ಯಾಂಕ್ ಆಫ್ ಮೈಸೂರು ಆಶ್ರಯದಲ್ಲಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಭಿರವನ್ನು ಹಮ್ಮಿಕೊಳ್ಳಲಾಗಿದೆ. ಚಿಕಿತ್ಸೆಗೆ ಬರುವವರು ಕಡ್ಡಾಯವಾಗಿ ರೇಷನ್ ಕಾರ್ಡ್ ತರಬೇಕಿದ್ದು ವಯಸ್ಸಿನ ಅಂತರವಿಲ್ಲದೇ ಎಲ್ಲರೂ ಭಾಗವಹಿಸಬಹುದಾಗಿದೆ. ಮಾಹಿತಿಗಾಗಿ 9480014440, ಸಂಪರ್ಕಿಸಲು ಕೋರಲಾಗಿದೆ.
ಕೊಳವೆಬಾವಿಗಳ
ಸುರಕ್ಷತೆ ಮಾಲೀಕರದ್ದು
ತುಮಕೂರು: ಜಿಲ್ಲೆಯಲ್ಲಿ ಕೊರೆದ ಕೊಳವೆಬಾವಿಗಳನ್ನು ಸುರಕ್ಷತೆ ಇಲ್ಲದೆ ಹಾಗೆಯೇ ಬಿಡುವುದರಿಂದ ಮುಂದಾಗುವ ಅಪಾಯಗಳಿಗೆ ಭೂಮಾಲೀಕರು ಮತ್ತು ಡ್ರಿಲ್ಲಿಂಗ್ ಏಜೆನ್ಸಿಯವರೇ ನೇರ ಹೊಣೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿಗಳು ತಿಳಿಸಿದ್ದಾರೆ. ಸಫಲ, ವಿಫಲ, ಅರ್ಧಕೊರೆದ, ಪೂರ್ಣಪ್ರಮಾಣದಲ್ಲಿ ಕೊರೆಯಲಾಗದ ಕೊಳವೆ ಬಾವಿಗಳನ್ನು ಸುರಕ್ಷಿತವಾಗಿ ಮುಚ್ಚಿಸುವುದು ಅನುಷ್ಠಾನ ಮಾಡುವ ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ ಎಂದು ತಿಳಿಸಿದ್ದಾರೆ.
ವಸತಿ ಶಾಲೆ ಪ್ರವೇಶಕ್ಕೆ
ಅರ್ಜಿ ಆಹ್ವಾನ
ಶಿರಾ ಹಾಗೂ ಕುಣಿಗಲ್ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ 6 ನೇ ತರಗತಿಗಳಲ್ಲಿ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 5ನೇ ತರಗತಿ ತೇರ್ಗಡೆ ಹೊಂದಿರುವ ವಾರ್ಷಿಕ 44,500 ರು. ಗಳಿಗಿಂತ ಕಡಿಮೆ ಆದಾಯ ಹೊಂದಿದ ಕುಟುಂಬ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ತುಮಕೂರು ಇಲ್ಲಿ ಪಡೆದು ಜೂನ್ 13 ರೊಳಗಾಗಿ ಸಲ್ಲಿಸಬಹುದು.
ಬಿಆರ್ಪಿ, ಸಿಆರ್ಪಿ
ಹುದ್ದೆಗೆ ಅರ್ಜಿ
ಜಿಲ್ಲೆಯಲ್ಲಿ ಖಾಲಿ ಇರುವ ಬಿಆರ್ಪಿ, ಸಿಆರ್ಪಿ ಹುದ್ದೆಗೆ ಆಸಕ್ತ ಅರ್ಹ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 29 ರಂದು ಜಿಲ್ಲಾ ಹಂತದಲ್ಲಿ ಲಿಖಿತ ಪರೀಕ್ಷೆ ನಡೆಯಲಿದ್ದು, ಆಸಕ್ತ ಶಿಕ್ಷಕರು ತಮ್ಮ ಬ್ಲಾಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಜೂನ್ 16 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಪೊಲೀಸ್ ವರ್ಗಾವಣೆ
ತುಮಕೂರು: ಜಿಲ್ಲೆಯ 2014 ರ ಸಾರ್ವತ್ರಿಕ ವರ್ಗಾವಣೆಗೆ ಸಂಬಂಧಪಟ್ಟಂತೆ ಜೂನ್ 30 ಕ್ಕೆ ಕೊನೆಗೊಳ್ಳುವಂತೆ 185 ಸಿವಿಲ್ ಪೊಲೀಸ್ ಕಾನ್ಸ್ಸ್ಟೇಬಲ್, ಮಹಿಳಾ ಪೊಲೀಸ್ ಕಾನ್ಸ್ಸ್ಟೇಬಲ್, 26 ಸಿವಿಲ್ ಹೆಡ್ ಕಾನ್ಸ್ಸ್ಟೇಬಲ್, ಮಹಿಳಾ ಹೆಡ್ ಕಾನ್ಸ್ಸ್ಟೇಬಲ್ ಮತ್ತು 11 ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ಗಳನ್ನು ಪೊಲೀಸ್ ಸಿಬ್ಬಂದಿ ಮಂಡಳಿ ಸಮ್ಮುಖದಲ್ಲಿ ಕೌನ್ಸೆಲಿಂಗ್ ಮೂಲಕ ಪಾರದರ್ಶಕತೆಯಿಂದ ಅವರು ಕೋರಿದ ಸ್ಥಳಗಳಿಗೆ ವರ್ಗಾವಣೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

