ತುಮಕೂರು

ಕುಣಿಗಲ್‌ನಲ್ಲಿ ಆಚರಣೆ

Published On :

ಕುಣಿಗಲ್: ಪಟ್ಟಣದಲ್ಲಿ ತಾಲೂಕು ಆಡಳಿತದ ವತಿಯಿಂದ ಗುರುವಾರ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಿಸಲಾಯಿತು. ಪಟ್ಟಣದ ಹುಚ್ಚ ಮಾಸ್ತಿಗೌಡವೃತ್ತದಲ್ಲಿ ನ್ಯಾಯಾಧೀಶ ಆರ್.ಶಾರದಾ ಮಕ್ಕಳ ಜಾಥಾಕ್ಕೆ ಚಾಲನೆ ನೀಡಿ ಮಕ್ಕಳೊಂದಿಗೆ ಸಂವಾದ ನಡೆಸಿದರು. ತಾಲೂಕು ಕಚೇರಿವರೆಗೂ ಮುಖ್ಯರಸ್ತೆಯಲ್ಲಿ ಬಾಲಕಾರ್ಮಿಕ ವಿರೋಧಿ ಘೋಷಣೆ ಕೂಗುತ್ತಾ ಮಕ್ಕಳು ಜಾಥ ನಡೆಸಿದರು. ಕಂದಾಯ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಉಪವಿಭಾಗಾಧಿಕಾರಿ ಆನಂದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ತಹಸೀಲ್ದಾರ್ ಶಂಭುಲಿಂಗಯ್ಯ ಅಧ್ಯಕ್ಷತೆ ವಹಿಸಿದ್ದರು. ತಾಪಂ ಇಒ ಶಂಕರಪ್ಪ, ಬಿಇಒ ಸಿದ್ದಯ್ಯ, ಪಿಎಸೈ ಗುರುಪ್ರಸಾದ್, ಸಿಡಿಪಿಒ ಅಕ್ರಂ ಅಲಿಖಾನ್, ತಾಲೂಕು ಆಡಳಿತ ಕಚೇರಿ ಸಿಬ್ಬಂದಿ, ಅಂಗನವಾಡಿಕಾರ್ಯಕರ್ತರು ಸೇರಿದಂತೆ ಆರೋಗ್ಯಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

ಚಿಕ್ಕನಾಯಕನಹಳ್ಳಿಯಲ್ಲಿ ದಿನಾಚರಣೆ

ಚಿಕ್ಕನಾಯಕನಹಳ್ಳಿ: ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಮುದಾಯದ ಸಹಕಾರದಿಂದ ಮಾತ್ರ ಯಶಸ್ಸು ಸಾಧ್ಯ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಸಾ.ಚಿ. ನಾಗೇಶ್ ಹೇಳಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯಲ್ಲಿ ಮಾತನಾಡಿ, ಈ ಬಗ್ಗೆ ಸರ್ಕಾರ ಮತ್ತು ಸಕಾರದ 11 ಇಲಾಖೆಗಳು ನಿರಂತರ ಶ್ರಮಿಸುತ್ತಿದ್ದು, ಸಂಪೂರ್ಣವಾಗಿ ತಡೆಗಟ್ಟಲು ಸಾಧ್ಯವಾಗಿಲ್ಲ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ತಹಸೀಲ್ದಾರ್ ಕಾಮಾಕ್ಷಮ್ಮ, ಈ ಅನಿಷ್ಟ ಪದ್ಧತಿಯನ್ನು ತಡೆಗಟ್ಟಲು ಸರ್ಕಾರಿ ವ್ಯವಸ್ಥೆಯಲ್ಲಿರುವ ಗ್ರಾಮಸಹಾಯಕರು, ಬಿಲ್‌ಕಲೆಕ್ಟರುಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಪರಿಣಾಮಕಾರಿಯಾಗಿ ತಡೆಗಟ್ಟಬಲ್ಲರು ಎಂದು ನುಡಿದರು. ತಾಪಂ ಕಾರ್ಯನಿರ್ವಹಣಾಧಿಕಾರಿ ಕೃಷ್ಣಾನಾಯ್ಕ್, ಖಜಾನೆ ಇಲಾಖೆಯ ನರಸಿಂಹಮೂರ್ತಿ, ಬೆಸ್ಕಾಂನ ರಾಜಶೇಖರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.