ತುಮಕೂರು-ದಾವಣಗೆರೆ ರೈಲು ಮಾರ್ಗದ ಬಗ್ಗೆ ಚರ್ಚೆ
ತುಮಕೂರು: ತುಮಕೂರು-ದಾವಣಗೆರೆ ನೂತನ ರೈಲು ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ನನೆಗುದಿಗೆ ಬಿದ್ದಿರುವ ಬಗ್ಗೆ ಶಿರಾ ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಕಾರ್ಯಕಾರಿ ಸಮಿತಿ ಅಧ್ಯಕ್ಷ ಆರ್.ವಿ. ಪುಟ್ಟಕಾಮಣ್ಣ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ರಾಜ್ಯ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರವಾಗಿ ಮಾಡಿ ಭೂಮಿಯನ್ನು ರೈಲ್ವೆಗೆ ಹಸ್ತಾಂತರಿಸುವಂತೆ ಶಾಸಕರು, ಸಂಸದರು, ಹಾಗೂ ಇತರ ಜನಪ್ರತಿನಿಧಿಗಳ ಮೇಲೆ ಒತ್ತಡ ಹೇರಲು ಸಭೆ ನಿರ್ಧರಿಸಿತು. ಮುಂಬರುವ ವಿಧಾನಮಂಡಲದ ಅಧಿವೇಶನದ ಸಮಯದಲ್ಲಿ ಶಾಸಕರೂ ಸೇರಿದಂತೆ ಜನಪ್ರತಿನಿಧಿಗಳನ್ನೊಳಗೊಂಡ ಸಮಿತಿಯ ನಿಯೋಗ ರೈಲ್ವೆ ಸಚಿವರನ್ನು ಭೇಟಿ ಮಾಡಲು ನಿರ್ಧರಿಸಲಾಯಿತು.ತುಮಕೂರು-ದಾವಣಗೆರೆ ರೈಲ್ವೆ ಯೋಜನೆ ಮಂಜೂರಾಗಿ ನಾಲ್ಕೂವರೆ ವರ್ಷ ಕಳೆದರೂ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಈ ಮಾರ್ಗಕ್ಕೆ ತುಮಕೂರು ಜಿಲ್ಲೆಯಲ್ಲಿ 991.10 ಎಕರೆ ಭೂಮಿ ಸ್ವಾಧೀನವಾಗಬೇಕಾಗಿದೆ. ಈ ಪೈಕಿ 146.13 ಗುಂಟೆ ಮಾತ್ರ ಆಗಿದೆ. ವಿಶೇಷ ಭೂಸ್ವಾಧೀನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿದಾಗ ಈ ಮಾರ್ಗಕ್ಕೆ ಹಣ ಬಿಡುಗಡೆಯಾಗಿಲ್ಲ ಎಂದು ಸಭೆಗೆ ಪುಟ್ಟಕಾಮಣ್ಣ ತಿಳಿಸಿದರು. ಸಭೆಯಲ್ಲಿ ತಾಂತ್ರಿಕ ಸಲಹೆಗಾರ ತುಮಕೂರಿನ ರಘೋತ್ತಮರಾವ್, ಕಾರ್ಯದರ್ಶಿ ಪ್ರೊ.ಬುರ್ಹಾನುದ್ದೀನ್ ಅವರು ವಿಷಯ ಮಂಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

