ತುಮಕೂರು

ಅಭಿವೃದ್ಧಿಗೆ ಅನುದಾನ ಬಿಡುಗಡೆ: ಶ್ರೀನಿವಾಸ್

Published On :

ಗುಬ್ಬಿ: ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರು, ವಸತಿ ಮತ್ತು ಗ್ರಾಮೀಣ ರಸ್ತೆ ಅಭಿವೃದ್ಧಿಗೆ ವಿವಿಧ ಯೋಜನೆಯಡಿ ವಿಶೇಷ ಅನುದಾನ ಬಿಡುಗಡೆಯಾಗಿದೆ. ಮುಂಜೂರಾಗಿರುವ ಎಲ್ಲಾ ಕಾಮಗಾರಿಗಳನ್ನು ಪ್ರಾರಂಭಿಸುವುದಾಗಿ ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.  ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.
ವಿಶೇಷ ಘಟಕ ಯೋಜನೆಯಡಿ 78.53 ಲಕ್ಷ ವೆಚ್ಚದಲ್ಲಿ ಎಸ್‌ಸಿ, ಎಸ್‌ಟಿ ಕಾಲೋನಿಗಳಲ್ಲಿ ಕಾಂಕ್ರೀಟ್ ರಸ್ತೆ ಮುಂಜೂರು ಮಾಡಿಸಲಾಗಿದೆ. 96.48 ಕೋಟಿ ವೆಚ್ಚದಲ್ಲಿ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಗುಬ್ಬಿ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳ ರಸ್ತೆಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಘಟಕಯೋಜನೆಯಡಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸಲಾಗಿದೆ ಎಂದು ಅವರು ತಿಳಿಸಿದರು.ತಾಲೂಕಿನ 56 ಗ್ರಾಮಗಳಲ್ಲಿ ಕುಡಿಯುವ ನೀರಿನ ಕಾಮಗಾರಿಗಳಿಗೆ 144.45 ಲಕ್ಷ ಬಿಡುಗಡೆಯಾಗಿದ್ದು, ಸಂಬಂಧಿಸಿದ ಕಾಮಗಾರಿಯನ್ನು ಶೀಘ್ರವೇ ಪ್ರಾರಂಭಿಸಲಾಗುವುದು. ಇದೇ ವೇಳೆ, ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯನ್ನು ಆಯ್ಕೆ ಮಾಡುವಂತೆ ಮನವಿ ಮಾಡಿದರು. ಜೆಡಿಎಸ್‌ಗೆ ಗೆಲವು ಸಿಕ್ಕರೆ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ನೆನೆಗುದಿಗೆಗೆ ಬಿದ್ದಿರುವ ಯೋಜನೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಪಪಂ ಅಧ್ಯಕ್ಷ ಜಿ.ಡಿ.ಸುರೇಶ್‌ಗೌಡ, ತಾಪಂ ಅಧ್ಯಕ್ಷ ಕೆ.ಎನ್.ಬಾಲಕೃಷ್ಣ, ತಾಲೂಕು ಜೆಡಿಎಸ್ ಅಧ್ಯಕ್ಷ ಎಚ್.ಆರ್.ಗುರುರೇಣುಕರಾದ್ಯ ಮುಂತಾದವರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.