ಅರೆಬೆಂದ ಸ್ಥಿತಿಯಲ್ಲಿ ರಸ್ತೆಯಲ್ಲಿ ಓಡಾಟ!
ಕುಣಿಗಲ್: ಮಾನಸಿಕ ಅಸ್ವಸ್ಥ ಯುವತಿ ಮೈ ಮೇಲೆ ಸೀಮೆ ಎಣ್ಣೆ ಸುರಿದು, ಬೆಂಕಿ ಹಂಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಬಳಿಕ ಅರೆ ಬೆಂದ ಸ್ಥಿತಿಯಲ್ಲೇ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಸಂಚರಿಸಿ ಜನರ ಭಯಕ್ಕೆ ಕಾರಣಳಾದ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.
ಪಟ್ಟಣದ ಹೊಸಬಡಾವಣೆಯಲ್ಲಿ ವಾಸವಾಗಿರುವ ನಸ್ರೀನ್ ಅ. ಜರೀನಾತಾಜ್(25) ಆತ್ಮಹತ್ಯೆಗೆ ಯತ್ನಿಸಿದ ಯುವತಿ. ಈಕೆ ಕಳೆದ ಕೆಲವು ವರ್ಷಗಳಿಂದ ಮಾನಸಿಕ ಕಾಯಲೆಯಿಂದ ಬಳಲುತ್ತಿದ್ದಾಳೆ.
ಭಾನುವಾರ ಬೆಳಗ್ಗೆ ಸಮೀಪದ ನ್ಯಾಯ ಬೆಲೆಅಂಗಡಿಯಲ್ಲಿ ಸೀಮೆ ಎಣ್ಣೆ ಪಜೆದುಕೊಂಡು ಮನೆಗೆ ಬಂದು, ಏಕಾಏಕಿ ಮೈಮೇಲೆ ಸುರಿದುಕೊಂಡು ಬೆಂಕಿಹೊತ್ತಿಸಿಕೊಂಡಿದ್ದಾಳೆ.
ಮೈಮೇಲಿನ ಬಟ್ಟೆ, ಚರ್ಮ ಕೆಲಭಾಗ ಸುಟ್ಟು ಅರೆಬೆಂದ ಸ್ಥಿತಿಯಲ್ಲೇ, ನನ್ನ ಸಾವಿಗೆ ನಾನೇ ಕಾರಣ. ಬೇರೆ ಯಾರೂ ಅಲ್ಲ ಎಂದು ಬೊಬ್ಬೆ ಹೊಡೆಯುತ್ತಾ ಮನೆಯಿಂದ, ಮುಖ್ಯರಸ್ತೆಗೆ ಬಂದು ನೇರವಾಗಿ ಪೊಲೀಸ್ ಠಾಣೆಗೆ ತೆರಳಿದ್ದಾಳೆ.
ಗರುಡಸ್ವಾಮಿ ಉತ್ಸವ
ಶ್ರೀರಂಗಪಟ್ಟಣ: ಪಟ್ಟಣದಲ್ಲಿ ಬೆಳ್ಳಿ ಗರಡುಸ್ವಾಮಿ ಉತ್ಸವ ಸಂಭ್ರಮದಿಂದ ನಡೆಯಿತು. ಶ್ರೀಲಕ್ಷ್ಮೀನರಸಿಂಹ ದೇವಾಲಯದಲ್ಲಿರುವ ಶ್ರೀರಂಗನಾಥ ದೇವರ ವಾಹನವಾದ ಗರುಡ ಪಕ್ಷಿಯ ಬೆಳ್ಳಿ ಪತ್ರಿಮೆಯನ್ನು ಪಲ್ಲಕ್ಕಿಯಲ್ಲಿರಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
ಶ್ರೀ ವಿಷ್ಣುವಿನ ವಾಹನವಾದ ಗರುಡ ಪಕ್ಷಿಯ ಬೆಳ್ಳಿ ಪತ್ರಿಮೆಯನ್ನು ಪುಷ್ಪಾಲಂಕಾರಗಳಿಂದ ತುಂಬಿದ್ದ ಪಲ್ಲಕ್ಕಿಯ ಮೇಲಿರಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಾದ್ಯ ಮೇಳಗಳೊಂದಿಗೆ ಮೆರವಣಿಗೆ ನಡೆಸಲಾಯಿತು. ಸಾರ್ವಜನಿಕರು ಈ ಗರುಡ ಪಕ್ಷಿಗೆ ಪೂಜೆ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

