ತುಮಕೂರು

ಮಹಿಳೆಯರಲ್ಲಿ ಜಾಗೃತಿ ಅಗತ್ಯ

Published On :

ಗುಬ್ಬಿ: ಸಾಮಾಜಿಕ ಪಿಡುಗುಗಳಾದ ವರದಕ್ಷಿಣೆ ಕಿರುಕುಳ, ಅತ್ಯಾಚಾರ ಪ್ರಕರಣಗಳ ವಿರುದ್ಧ ಹೋರಾಟ ನಡೆಸುವ ಶಕ್ತಿ ಇದ್ದು, ಮಹಿಳೆಯರಿಗೆ ಈ ಬಗ್ಗೆ ಜಾಗೃತಿ ಮೂಡಿಸಬೇಕಿದೆ ಎಂದು ಸಾಂತ್ವನ ಕೇಂದ್ರದ ಸಮಾಲೋಚಕಿ ನಿರ್ಮಲ ತಿಳಿಸಿದರು. ಪಟ್ಟಣದ ವಿನಾಯಕನಗರ ಬಡಾವಣೆಯ ಗಣಪತಿ ದೇವಾಲಯದಲ್ಲಿ ಶ್ರೀ ವಿಷ್ಣು ಮಹಿಳಾ ಸಂಘ, ಗೋಸಲ ಚನ್ನಬಸವೇಶ್ವರಸ್ವಾಮಿ ಪ್ರಗತಿ ಬಂಧು ಸ್ವಸಹಾಯ ಸಂಘ ಹಾಗೂ ಶ್ರೀ ವೀರಭದ್ರಸ್ವಾಮಿ ವಿದ್ಯಾಸಂಸ್ಥೆ ಸಹಯೋಗದಲ್ಲಿ ನಡೆದ ಮಹಿಳಾ ಸಾಂತ್ವನ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೌಟುಂಬಿಕ ದೌರ್ಜನ್ಯ ತಡೆಯಲು ಸಜ್ಜಾದ ಸಾಂತ್ವನ ಕೇಂದ್ರ ಅಸಹಾಯಕ ಮಹಿಳೆಯರಿಗೆ ಕಾನೂನು ಅರಿವು ಹಾಗೂ ಕೌನ್ಸೆಲಿಂಗ್ ನಡೆಸುವ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡುತ್ತಿದೆ ಎಂದರು. ಇದೇ ಸಂದರ್ಭದಲ್ಲಿ ಮಹಿಳಾ ಸಂಘದ ಸದಸ್ಯರೊಂದಿಗೆ ಪರಸ್ಪರ ಮುಕ್ತ ಚರ್ಚೆಗೆ ಅವಕಾಶ ಕಲ್ಪಿಸಲಾಯಿತು. ಹಲವು ವಿಚಾರಗಳ ಪ್ರಸ್ತಾಪಿಸಿ ವಿಚಾರ ವಿನಿಮಯ ಮಾಡಲಾಯಿತು. ಸಾಂತ್ವನ ಕೇಂದ್ರದ ಸಮಾಲೋಚಕಿ ಗಂಗಾಮಣಿ, ಮಹಿಳಾ ಸಂಘದ ಪಾರ್ವತಮ್ಮ, ಲತಾ, ಪ್ರಮೀಳಾ, ಶಕುಂತಲಾ, ಲತಾಶ್ರೀ ಇತರರು ಇದ್ದರು.

ಎಸ್ಸೆಸ್ಸೆಲ್ಸಿ: ನಿಷೇಧಾಜ್ಞೆ ಜಾರಿ
ತುಮಕೂರು: ಜಿಲ್ಲೆಯಾದ್ಯಂತ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಗಳು ಜೂನ್ 24 ರವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ನಿಷೇಧಾಜ್ಞೆ ಬೆಳಿಗ್ಗೆ 9.30 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ ಜಾರಿಯಲ್ಲಿರುತ್ತದೆ. ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯುವ ದಿನಾಂಕದಲ್ಲಿ ಆಯಾ ಪರೀಕ್ಷಾ ಕೇಂದ್ರಗಳ ಸುತ್ತ ಇರುವ ಜೆರಾಕ್ಸ್, ಬೆರಳಚ್ಚು ಕೇಂದ್ರಗಳನ್ನು ಮತ್ತು ಸ್ಟೆನ್ಸಿಲ್ ಯಂತ್ರಗಳ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಮತ್ತು ನಿಷೇಧಾಜ್ಞೆ ಉಲ್ಲಂಘಿಸಿ, ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವ ಅನಧಿಕೃತ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೋಲಿಸ್ ಇಲಾಖೆಗೆ ಆದೇಶಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.