ಪರಿಸರ ರಕ್ಷಣೆ ಎಲ್ಲರ ಹೊಣೆ: ಚಂದ್ರಶೇಖರ ಆರಾಧ್ಯ
ತುಮಕೂರು: ಮರಗಳ ನಾಶದಿಂದ ಮಳೆ ಹಾಗೂ ಅಂತರ್ಜಲ ಪ್ರಮಾಣ ಕಡಿಮೆಯಾಗಿ ಪ್ರಕೃತಿಯ ಸಮ ತೂಕ ಆಯ ತಪ್ಪುತ್ತಿದ್ದು ನಾವು ಪರಿಸರ ಮಾಲಿನ್ಯ ಸಂಭವಿಸದಂತೆ ಜಾಗರೂಕರಾಗಿರಾಬೇಕು ಎಂದು ಪ್ರಾಚಾರ್ಯ ಎಚ್.ವಿ. ಚಂದ್ರಶೇಖರ ಆರಾಧ್ಯ ತಿಳಿಸಿದರು.
ನಗರದ ವಾಸವಿ ಪ.ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ, ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಕಿರಣ ಅವರ ವಿದ್ಯಾರ್ಥಿ ದೀಪ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅರಣ್ಯಗಳ ನಾಶದಿಂದಾಗಿ ವನ್ಯಪ್ರಾಣಿಗಳ ಸಂಖ್ಯೆ ಕ್ಷೀಣಿಸತೊಡಗಿದೆ ಎರ್ದರು.
ಕಾಲೇಜಿನ ಸುತ್ತಲು ಗಿಡಗಳನ್ನು ನೆಟ್ಟು ರಕ್ಷಣೆ ಮಾಡಿದವರು ನಮ್ಮ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಅವರ ಮಾರ್ಗದರ್ಶನದಲ್ಲಿ ನೀವು ವನರಾಸಿಯನ್ನು ಬೆಳೆಸಬೇಕು ಎಂದರು.
ಸಂಸ್ಥೆಯ ಅಧ್ಯಕ್ಷ ಸಿ.ವಿ. ಸೋಮೇಶ್ವರ ಗುಪ್ತ, ಕಾಲೇಜಿನ ಹಿರಿಯ ವಿದ್ಯಾರ್ಥಿ ಕಿರಣ ಕೆ.ಟಿ. ರವರ ಪುಸ್ತಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕ ಕೈಪಿಡಿಯಾಗಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಡಾ. ಶಿವಾನಂದ ಶಿವಾಚಾರ್ಯ ಸ್ವಾಮಿಗಳು ತ್ಯಾಜ್ಯ ಸಮಸ್ಯೆಗಳಿಂದ ಬಿಡುಗಡೆಗೊಂಡು ನಾಗರಿಕಕ ದೀಕ್ಷೆ ಪಡೆಯಿರಿ ಎಂದು ಅತ್ಯುನ್ನತ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಅಭಿನಂದನೆ ಸಲ್ಲಿಸಿದರು. ಕಾರ್ಯದರ್ಶಿ ಜಿ. ಕೃಷ್ಣಮೂರ್ತಿ, ಉಪನ್ಯಾಸಕ ಬೆಂಕಿ ವಸಂತಕುಮಾರ್, ಲೇಖಕ ಕಿರಣ ಕೆ.ಟಿ., ವಿದ್ಯಾರ್ಥಿ ಸಂಸ್ಥೆ ಮುಖ್ಯಸ್ಥ ಹರೀಶ್, ಸದಾಶಿವ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

