ತುಮಕೂರು

ರೈಲು ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ

Published On :

ತುಮಕೂರು: ರೈಲ್ವೆ ಪ್ರಯಾಣದರ ಹೆಚ್ಚಳ ವಿರೋಧಿಸಿ, ಭಾರತ ಕಮ್ಯೂನಿಸ್ಟ್ ಪಕ್ಷದ ತುಮಕೂರು ಜಿಲ್ಲಾ ಘಟಕದ ವತಿಯಿಂದ ಸೋಮವಾರ ರೈಲ್ವೆ ಸ್ಟೇಷನ್ ಎದುರು ಪ್ರತಿಭಟನೆ ನಡೆಸಲಾಯಿತು.
ತುಮಕೂರು ಟೌನ್‌ಹಾಲ್ ವೃತ್ತದಿಂದ ರೈಲ್ವೆ ನಿಲ್ದಾಣದವರೆವಿಗೆ ಪ್ರತಿಭಟನೆ ನಡೆಸಿದ ನಂತರ ಮಾತನಾಡಿದ ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಎನ್. ಶಿವಣ್ಣ ರೈಲ್ವೆ ಪ್ರಯಾಣಿಕರ ದರ ಹಾಗೂ ಸರಕು ಸಾಗಾಣೆ ಹೆಚ್ಚಳವನ್ನು ಜಾರಿ ಮಾಡದೆ ಹಿಂಪಡೆಯುವಂತೆ ಒತ್ತಾಯಿಸಿದರು. ಬಿಜೆಪಿ ಚುನಾವಣೆ ಸಂದರ್ಭದಲ್ಲಿ ಬೆಲೆ ಏರಿಕೆಯನ್ನು ತಡೆಗಟ್ಟುವ, ಕ್ರಮಬದ್ಧ ಆಹಾರ ಸರಬರಾಜು ಮಾಡುವ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸುವ ಸುಳ್ಳು ಆಶ್ವಾಸನೆ ನೀಡಿ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಆದರೆ ಅಧಿಕಾರ ಹಿಡಿದು ಕೇವಲ 1 ತಿಂಗಳಲ್ಲೇ ಬಹುತೇಕ ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ನಿಜವಾದ ಬಣ್ಣ ಏನು ಎಂಬುದನ್ನು ಬಯಲು ಮಾಡಿದ್ದಾರೆ ಎಂದು ಅವರು ಆರೋಪಿಸಿದರು.
ಈಗಾಗಲೇ ಪೆಟ್ರೋಲ್, ಡೀಸೆಲ್, ಬೆಲೆ ಏರಿಕೆ ಆಗಿದೆ. ಹಾಗೂ ಅಡುಗೆ ಅನಿಲ ಬೆಲೆಯನ್ನು ಪ್ರತಿ ತಿಂಗಳು 10 ರು. ರೂ ಹೆಚ್ಚಳ ಮಾಡುವ ಪ್ರಸ್ತಾಪ ಮುಂದಿಟ್ಟಿದೆ. ಇದೂ ಸಾಲದೆಂಬಂತೆ ರೈಲ್ವೆ ಪ್ರಯಾಣಿಕರ ಮೇಲೆ, ಸರಕು ಸಾಗಾಣೆಯ ಮೇಲೆ ದರ ಹೆಚ್ಚಳ ಮಾಡುವುದರ ಮೂಲಕ ಜನ ಸಾಮಾನ್ಯರ ಮೇಲೆ ಗದಾಪ್ರಹಾರ ಮಾಡಿದೆ ಎಂದು ದೂರಿದರು.ಪಕ್ಷದ ಜಿಲ್ಲಾ ಕಾರ್ಯದರ್ಶಿ ಕಂಬೇಗೌಡ ಮಾತನಾಡಿ, ಸಿಪಿಐ ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸುವ ಜೊತೆಗೆ ಮುಂದಿನ ದಿನಗಳಲ್ಲಿ ರೈಲು ತಡೆ, ಜೈಲ್ ಭರೋಭರೋ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು. ಪಕ್ಷದ ಸಹ ಕಾರ್ಯದರ್ಶಿ ಗಿರೀಶ್, ಸಿಪಿಐ ಜಿಲ್ಲಾ ಖಜಾಂಚಿ ವಿ. ಚಿನ್ನಪ್ಪ ಇತರರು ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.