ತುಮಕೂರು

ಶಾಸಕ ಕೃಷ್ಣಪ್ಪಗೆ ಪ್ರಚಾರದ ಗೀಳು: ಮಸಾಲಾ ಜಯರಾಂ

Published On :

ತುರುವೇಕೆರೆ: ಶಾಸಕ ಎಂ.ಟಿ.ಕೃಷ್ಣಪ್ಪ ಅವರಿಗೆ ಪ್ರಚಾರದ ಗೀಳು ಹತ್ತಿಕೊಂಡಿದೆ. ಹಾಗಾಗಿ ಅವರು ಪ್ರತಿಭಟನೆಯ ನೆಪದಲ್ಲಿ ಸರ್ಕಾರಿ ಕಚೇರಿಗಳ ಮುಂದೆ ಕುಳಿತುಕೊಳ್ಳುತ್ತಾರೆ. ಮಲಗುತ್ತಾರೆ. ಹೇಗಾದರೂ ಮಾಡಿ ಪೇಪರ್, ಟಿವಿ ಗಳಲ್ಲಿ ಕಾಣಿಸಿಕೊಂಡರೆ ಸಾಕು ಎನ್ನುವ ಸ್ಥಿತಿಗೆ ಬಂದಿದ್ದಾರೆ. ಕಾರಣವೇ ಇಲ್ಲದಿದ್ದರೂ ಸಹ ಅಧಿಕಾರಿಗಳ ಮೇಲೆ ಹರಿಹಾಯ್ತಾರೆ ಎಂದು ಕಾಂಗ್ರೆಸ್ ಮುಖಂಡ ಮಸಾಲಾ ಜಯರಾಂ ಲೇವಡಿ ಮಾಡಿದರು. ಸೋಮವಾರ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಸ್ ಪುರ ಪೋಲಿಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಸಂಬಂಧ ಶಾಸಕರು ವಿನಾಕಾರಣ ತಮ್ಮ ಹೆಸರನ್ನು ಎಳೆದಿದ್ದಾರೆ. ತಮ್ಮ ಒತ್ತಡದ ಮೇರೆಗೆ ಅವರ ಬೆಂಬಲಿಗರ ಮೇಲೆ ಅತ್ಯಾಚಾರದ ಆರೋಪ ಹೊರಿಸಿ ಜೈಲಿಗೆ ಕಳಿಸಲಾಗಿದೆ ಎಂದು ಶಾಸಕರು ಆರೋಪಿಸಿದ್ದಾರೆ. ಶಾಸಕರಿಗೆ ಕಾನೂನಿನ ಅರಿವು ಇಲ್ಲ. ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಕರಣ ಅಲ್ಲಿಯ ಜೆಡಿಎಸ್ ಬೆಂಬಲಿಗನ ಮೇಲೆ ಇದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಾನೂನಿನ ಪ್ರಕಾರ ಕ್ರಮ ಕೈಗೊಂಡಿದ್ದಾರೆ. ನ್ಯಾಯಾಲಯ ಅವರಿಗೆ ಜಾಮೀನು ನೀಡಿಲ್ಲ ಹಾಗಾಗಿ ಆತ ಜೈಲಿನಲ್ಲಿದ್ದಾನೆ. ಅದರಲ್ಲಿ ವಿಶೇಷವೇನೂ ಇಲ್ಲ ಎಂದು ಹೇಳಿದರು. ಆದರೆ, ಶಾಸಕರು ಸಿಎಸ್ ಪುರ ಪೊಲೀಸರನ್ನು ಅಮಾನತು ಮಾಡಬೇಕು. ವರ್ಗಾಯಿಸಬೇಕು ಎಂದು ಒತ್ತಾಯಿಸಿರುವುದರಲ್ಲಿ ಅವರ ಸ್ವಾರ್ಥವಿದೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.