ಚಾಲಕನ ಅಸಭ್ಯ ವರ್ತನೆ: ಪ್ರತಿಭಟನೆ
ಕುಣಿಗಲ್: ಸಾರಿಗೆಸಂಸ್ಥೆ ಬಸ್ ಚಾಲಕನ ಅಸಭ್ಯವರ್ತನೆಗೆ ಬೇಸತ್ತ ಪ್ರಯಾಣಿಕರು ಬಸ್ ತಡೆದು ಪ್ರತಿಭಟನೆ ನಡೆಸಿದ ಪರಿಣಾಮ ವಾಹನ ಸಂಚಾರ ವ್ಯತ್ಯಯವಾಯಿತು.
ಪೊಲೀಸರ ಸಕಾಲಿಕ ಪ್ರವೇಶದಿಂದ ಪರಿಸ್ಥಿತಿ ತಿಳಿಗೊಂಡಿತು. ಸೋಮವಾರ ರಾತ್ರಿ ಬೆಂಗಳೂರಿನಿಂದ ಸಕಲೇಶಪುರಕ್ಕೆ ತೆರಳುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಪಟ್ಟಣದ ಬಸ್ ನಿಲ್ದಾಣಕ್ಕೆ ತೆರಳದೆ ಮುಖ್ಯರಸ್ತೆಯಲ್ಲಿ ನಿಲ್ಲಿಸಿತು. ಇದರಿಂದ ಪ್ರಯಾಣಿಕರು ನಿಲ್ದಾಣಕ್ಕೆ ತೆರಳುವಂತೆ ಮನವಿ ಮಾಡಿದರು. ಆದರೆ ಚಾಲಕ ಉದ್ದಟತನದಿಂದ ವರ್ತಿಸಿದ ಪರಿಣಾಮ ಪ್ರಯಾಣಿಕರು ಬಸ್ ತಡೆದು ಪ್ರತಿಭಟನೆಗೆ ಮುಂದಾದರು.
ಚಾಲಕ ಬಸ್ನ್ನು ಪ್ರತಿಭಟನಾನಿರತರ ಮೇಲೆ ನುಗ್ಗಿಸುವುದಾಗಿ ಹೇಳಿ ಚಾಲನೆ ಮಾಡಿದ್ದು, ಸ್ಥಳದಲ್ಲಿದ್ದ ನಾಗರಿಕರು ಚಾಲಕನ ವರ್ತನೆಗೆ ಬೇಸತ್ತು ರಸ್ತೆಯಲ್ಲೆ ಬಸ್ ತಡೆದು ಪ್ರತಿಭಟನೆ ನಡೆಸಿದರು.
ಇದರಿಂದ ಮುಖ್ಯರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಯಿತು. ಪಿಎಸೈ ಹರೀಶ್ ಸಿಬ್ಬಂದಿಯೊಂದಿಗೆ ಸ್ಥಳಕ್ಕಾಗಮಿಸಿ ರಸ್ತತಡೆ ತೆರವುಗೊಳಿಸಿ ಬಸ್ಸನ್ನು ಮುಂದೆ ಹೋಗಲು ಅನುವು ಮಾಡಿಕೊಟ್ಟಾಗ ಪ್ರತಿಭಟನಾನಿರತರು ಪೊಲೀಸರೊಂದಿಗೆ ವಾಗ್ವಾದ ನಡೆಸಿ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಪೊಲೀಸರು ಸಾರಿಗೆ ಸಂಸ್ಥೆ ಬಸ್ ಸಿಬ್ಬಂದಿಮೇಲೆ ದೂರು ನೀಡಿದಲ್ಲಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಮೇಲೆ ಪ್ರತಿಭಟನೆ ಕೈಬಿಟ್ಟು ಪರಿಸ್ಥಿತಿ ತಿಳಿಗೊಂಡಿತು. ನಂತರ ಠಾಣೆಗೆ ಚಾಲಕ, ನಿರ್ವಾಹಕನನ್ನು ಕರೆಸಿ ವಿವರ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

