ಫುಟ್ಪಾತ್ ಅಂಗಡಿ ತೆರವು: ಸಂಸದರಿಗೆ ದೂರು
ತುಮಕೂರು: ತುಮಕೂರಿನ ಶಿವಕುಮಾರಸ್ವಾಮಿ ವೃತ್ತದಿಂದ ಕೋತಿತೋಪು ಮುಖ್ಯ ರಸ್ತೆವರೆಗಿನ ರಸ್ತೆ ಬದಿಯ ಸುಮಾರು ಹತ್ತಕ್ಕೂ ಹೆಚ್ಚು ಕಾಫೀ-ಟೀ ಉಪಹಾರದ ಪೆಟ್ಟಿಗೆ ಅಂಗಡಿಗಳನ್ನು ಏಕಾಏಕಿ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಜೆಸಿಬಿ ಮೂಲಕ ತೆರವುಗೊಳಿದ್ದು ತಮಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿ ಅಂಗಡಿಗಳ ಮಾಲೀಕರು, ಸಂಸದ ಎಸ್.ಪಿ. ಮುದ್ದಹನುಮೇಗೌಡ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಅಧಿಕಾರಿ ಹಡಪದ ಅವರಿಗೆ ಮನವಿ ಸಲ್ಲಿಸಿದರು.
ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಗೆ ಸಮಾಜಸೇವಕ ಹೆಚ್.ಆರ್. ನಾಗಭೂಷಣ್ ನೇತೃತ್ವದಲ್ಲಿ ತೆರಳಿದ ಅಂಗಡಿ ಮಾಲೀಕರು ಮನವಿ ಸಲ್ಲಿಸಿ ತಮಗೆ ನ್ಯಾಯದೊರಕಿಸಿಕೊಡುವಂತೆ ಮನವಿ ಮಾಡಿದರು.
ಲಕ್ಷಾಂತರ ರು. ನಷ್ಟ: ತುಮಕೂರು ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಸಿಬ್ಬಂದಿ ಜೂ. 21 ರಂದು ಬೆಳಗಿನ ಜಾವ ಪೊಲೀಸ್ ರಕ್ಷಣೆಯೊಂದಿಗೆ ಆಗಮಿಸಿ ಕಾಫೀ-ಟೀ ಅಂಗಡಿಗಳನ್ನು ಜೆಸಿಬಿ ಮೂಲಕ ಜಖಂಗೊಳಿಸಿದ್ದಾರೆ. ಇದರಿಂದ ಲಕ್ಷಾಂತರ ಮೌಲ್ಯದ ಸರಕುಗಳು ಹಾನಿಯಾಗಿವೆ. ರಸ್ತೆ ಬದಿ ಇಟ್ಟುಕೊಂಡಿದ್ದಂತಹ ಎಲ್ಲ ಅಂಗಡಿಗಳೂ ಚರಂಡಿಗಳ ಮೇಲೆ ಇಟ್ಟುಕೊಂಡಿದ್ದರಿಂದ ತಮ್ಮ ಮಳಿಗೆಗಳಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗುತ್ತಿರಲಿಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಅಂಗಡಿಗಳು ರಸ್ತೆಯಿಂದ ಸುಮಾರು 25-30 ಅಡಿಗಳಷ್ಟು ದೂರದಲ್ಲಿವೆ. ಇಷ್ಟಾದರೂ ಪಾಲಿಕೆ ಅಧಿಕಾರಿಗಳು ಯಾವುದೇ ಸೂಚನೆ ಹಾಗೂ ನೋಟಿಸ್ ನೀಡದೆ ಏಕಾಏಕಿ ಅಂಗಡಿಗಳನ್ನು ನೆಲಸಮ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಕ್ರಮದ ಭರವಸೆ: ಮನವಿ ಸ್ವೀಕರಿಸಿದ ಸಂಸದರು, ಇದೇ ಶನಿವಾರ ಪಾಲಿಕೆ ಸಭೆ ನಡೆಯಲಿದ್ದು, ಅಲ್ಲಿಗೆ ತಾವೂ ಆಗಮಿಸಿ ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ನಾಗಭೂಷಣ್ ತಿಳಿಸಿದ್ದಾರೆ. ಪೆಟ್ಟಿಗೆ ಅಂಗಡಿಗಳ ಮಾಲೀಕರಾದ ರವಿಶಂಕರ್, ರಾಧಾ, ಜಮೀರ್, ವಾಜೀದ್, ಮಕ್ಬುಲ್, ಸಾಕಮ್ಮ, ಕಲೀಲ್ ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

