ಅಪೌಷ್ಟಿಕತೆಗೆ ಬಾಲ್ಯ ವಿವಾಹ, ಅನಕ್ಷರತೆ ಕಾರಣ
ತುರುವೇಕೆರೆ: ಬಾಲ್ಯದಲ್ಲೇ ಮದುವೆ ಮಾಡುವುದು ಹಾಗೂ ಮಕ್ಕಳ ಬೆಳವಣಿಗೆಯ ಕುರಿತು ಸೂಕ್ತ ಮಾರ್ಗದರ್ಶನ ಇಲ್ಲದೆ ಇರುವುದರಿಂದ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚಲು ಕಾರಣವಾಗಿದೆ ಎಂದು ಜೆಎಂಎಫ್ಸಿ ನ್ಯಾಯಾಧೀಶರಾದ ಪುಟ್ಟಸ್ವಾಮಿ ಹೇಳಿದರು.
ತಾಲೂಕು ಆರೋಗ್ಯ ಕೇಂದ್ರ, ಶಿಶು ಅಭಿವೃಧ್ಧಿ ಇಲಾಖೆ ಹಾಗೂ ಲಯನ್ಸ್ ಕ್ಲಬ್ ವತಿಯಿಂದ ನಡೆದ ಅಪೌಷ್ಟಿಕತೆ ಮಕ್ಕಳಿಗೆ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿ, ಮಕ್ಕಳ ಆರೋಗ್ಯ ಸುಧಾರಣೆಯಲ್ಲಿದ್ದರೆ ಮಾತ್ರ ಕುಟುಂಬ ನೆಮ್ಮದಿಯಿಂದ ಇರಲು ಸಾಧ್ಯ. ಮಗುವಿನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಯಾವುದೇ ವಸ್ತುಗಳನ್ನು ಬಳಸಬಾರದು ಎಂದರು.
ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ವೆಂಕಟೇಶ್ ಮಾತನಾಡಿ, ರಕ್ತ ಸಂಬಂಧಿಗಳಲ್ಲಿ ಮದುವೆ, ಆಹಾರಗಳ ಬಗ್ಗೆ ಸೂಕ್ತ ಮಾಹಿತಿ ಇಲ್ಲದಿರುವುದು, ಶುಚಿತ್ವದ ಕಡೆ ಗಮನ ನೀಡದೇ ಇರುವುದು ಸೇರಿದಂತೆ ಹಲವು ಕಾರಣಗಳಿಂದ ಮಕ್ಕಳಲ್ಲಿ ಅಪೌಷ್ಟಿಕತೆ ಮೂಡಲು ಕಾರಣವಾಗಿದೆ. ಮಗು ಗರ್ಭಾವಸ್ಥೆಯಲ್ಲಿರುವಾಗಲೇ ವೈದ್ಯರಿಂದ ಸೂಕ್ತ ಸಲಹೆ ಸೂಚನೆಗಳನ್ನು ಪಾಲಿಸಿದಲ್ಲಿ ಅಪೌಷ್ಟಿಕತೆಯಿಂದ ನರಳುವುದನ್ನು ತಡೆಗಟ್ಟಬಹುದು ಎಂದರು.
ಸಿಡಿಪಿಒ ರವೀಂದ್ರ, ತಾಲೂಕು ವೈದ್ಯಾಧಿಕಾರಿ ಡಾ.ತಿರುಪತಯ್ಯ, ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ದಿವಾಕರ್, ಡಾ.ಗಾಯತ್ರಿ, ತಹಸೀಲ್ದಾರ್ ಮಾರೇಗೌಡ, ತಾಲೂಕು ವಕೀಲರ ಸಂಘದ ಅಧ್ಯಕ್ಷ ದೇವರಾಜು, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವಾಳ್ವೇಕರ್, ತ್ರಿಪಾಠಿ ಮೊದಲಾದವರು ಇದ್ದರು. ಇದೇ ವೇಳೆ 2013-14ನೇ ಸಾಲಿನ 26 ಮಕ್ಕಳಿಗೆ ವೈದ್ಯಕೀಯ ಚಿಕಿತ್ಸೆಗಾಗಿ ತಲಾ 750 ಹಾಗೂ 2014-15ನೇ ಸಾಲಿನ 51 ಮಕ್ಕಳಿಗೆ ತಲಾ 750 ವಿತರಣೆ ಮಾಡಲಾಯಿತು. ಹಾಜರಿದ್ದ ಎಲ್ಲಾ ಅಪೌಷ್ಟಿಕತೆಯ ಮಕ್ಕಳಿಗೆ ಹಾಲು, ಹಣ್ಣು, ಮೊಟ್ಟೆ ವಿತರಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

