ತುಮಕೂರು

ಹುದ್ದೆ ಕಡಿತಕ್ಕೆ ಸರ್ಕಾರಿ ನೌಕರರ ವಿರೋಧ

Published On :

ತುಮಕೂರು: ಕೃಷಿ ಇಲಾಖೆ ಪುನರ್ ರಚನೆಯಿಂದ ಹುದ್ದೆಗಳನ್ನು ಕಡಿತಗೊಳಿಸಲು ಮುಂದಾಗಿರುವ ಸರ್ಕಾರದ ಕ್ರಮ ಕೈಬಿಡುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘ, ರಾಜ್ಯ ಕೃಷಿ ಪದವೀಧರ ಅಧಿಕಾರಿಗಳ ಸಂಘ, ರಾಜ್ಯ ಕೃಷಿ ಇಲಾಖಾ ಲಿಪಿಕ ನೌಕರರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಸಹಾಯಕರಿಗೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಕೃಷಿ ಮತ್ತು ಜಲಾಯನ ಇಲಾಖೆಯಲ್ಲಿ 11.800 ಹುದ್ದೆಗಳು ಇದ್ದು ಅದರಲ್ಲಿ 6 ಸಾವಿರ ಹುದ್ದೆಯಲ್ಲಿ ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಕೃಷಿ ಇಲಾಖೆ ಪುನರ್ ರಚನೆಯಿಂದಾಗಿ 11.800 ಹುದ್ದೆಗಳಲ್ಲಿ 4,200 ಹುದ್ದೆಗಳನ್ನು ಸರ್ಕಾರ ಕಡಿತಗೊಳಿಸಲು ಮುಂದಾಗಿದ್ದು. ಇದರಿಂದ ನೌಕರರ ಮೇಲೆ ಕೆಲಸದ ಒತ್ತಡ ಹೆಚ್ಚಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಎಂ. ಸಣ್ಣಮುದ್ದಯ್ಯ ತಿಳಿಸಿದರು. ಸರ್ಕಾರ ಕೃಷಿ ಇಲಾಖೆ ಪುನರ್ ರಚನೆ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಪುನರ್ ರಚನೆಯಲ್ಲಿ ಹುದ್ದೆಯನ್ನು ಕಡಿತಗೊಳಿಸುವುದಕ್ಕೆ ನಮ್ಮ ವಿರೋಧವಿದೆ. ಸರ್ಕಾರ ಜನಗಣತಿಗೆ ಅನುಗುಣವಾಗಿ ಹುದ್ದೆ ಕಡಿತಗೊಳಿಸಬಾರದು ಎಂದು ಅವರು ಒತ್ತಾಯಿಸಿದರು. ಸಂಘದ ಪದಾಧಿಕಾರಿಗಳಾದ ಅನೂಪ್, ಅಶೋಕ್, ವೀರಣ್ಣಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.