ಹೃದಯಾಘಾತದಿಂದ ಗುಮಾಸ್ತ ಸಾವು
ಕೊರಟಗೆರೆ: ತಾಲೂಕಿನ ವಡ್ಡಗೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಗುಮಾಸ್ತನೊಬ್ಬ ಕುಸಿದು ಬಿದ್ದು ಹೃದಯಾಗಾತದಿಂದ ಮೃತಪಟ್ಟಿದ್ದಾನೆ.
ಕೆ.ಎಂ. ಪೈರೋಜ್ ಖಾನ್(40) ಮೃತ ದುದೈವಿ. ಕಚೇರಿ ಕೆಲಸದ ನಿಮಿತ್ತ ಬಿಇಒ ಕಚೇರಿಗೆ ಬಂದಿದ್ದ ಈತ ಕುಸಿದು ಬಿದ್ದ ನಂತರ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಗೋಪಾಲ ಕೃಷ್ಣ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೀರಕ್ಯಾತರಾಯ ಸೇರಿದಂತೆ ಇತರರು ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು.
ಖಾಲಿ ಕೊಡಗಳನ್ನು ಪ್ರದರ್ಶಿಸಿ ಪ್ರತಿಭಟನೆ
ಮಧುಗಿರಿ: ತಾಲೂಕಿನ ಬೇಡತ್ತೂರು ಗ್ರಾಮದಲ್ಲಿ ಕುಡಿವ ನೀರಿನ ಸಮಸ್ಯೆ ತಾರಕಕ್ಕೇರಿದ್ದರೂ ಪಂಚಾಯಿತಿ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ವಾಟರ್ ಮ್ಯಾನ್ ಸಕಾಲಕ್ಕೆ ನೀರು ಬಿಡುತ್ತಿಲ್ಲ. ಈ ಕುರಿತು ಮಹಿಳೆಯರು ಆರೋಪಿಸಿ, ಖಾಲಿ ಕೊಡಗಳನ್ನು ಪಂಚಾಯ್ತಿ ಕಚೇರಿ ಮುಂದೆ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.ನೀರಿದ್ದರೂ ಸಮರ್ಪಕವಾಗಿ ನೀರು ಬಿಡುತ್ತಿಲ್ಲ. ಈಗ್ಗೆ 15 ದಿನಗಳಿಂದ ಗ್ರಾಮದಲ್ಲಿ ನೀರಿನ ಸಮಸ್ಯೆ ತಾರಕಕ್ಕೇರಿದೆ. ಈ ಬಗ್ಗೆ ಸಾಕಷ್ಟು ಬಾರಿ ಅಧ್ಯಕ್ಷರು ಮತ್ತು ಅಧಿಕಾರಿಗಳ ಗಮನಕ್ಕೆ ತಂದರೂ ಏನೂ ಪ್ರಯೋಜನವಾಗಿಲ್ಲ. ಆದ್ದರಿಂದ ಬೇಸತ್ತು ಮಹಿಳೆಯರು ಮತ್ತು ಗ್ರಾಮಸ್ಥರು ಗ್ರಾ.ಪಂ. ಕಚೇರಿ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು. ಈ ಕೂಡಲೇ ನೀರು ಬಿಡಲು ಕ್ರಮ ಕೈಗೊಳ್ಳದಿದ್ದರೆ, ಮಧುಗಿರಿ-ಪಾವಗಡ ಮದ್ಯ ರಸ್ತೆ ತಡೆದು ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದರು. ಗ್ರಾ.ಪಂ.ಅಧ್ಯಕ್ಷೆ ಗಿರಿಯಮ್ಮ ಅವರ ಪುತ್ರ ಸ್ಥಳಕ್ಕೆ ಆಗಮಿಸಿ ಇನ್ನು 4-5 ದಿನಗಳ ಒಳಗಾಗಿ ಸಮರ್ಪಕವಾಗಿ ನೀರು ಸರಬರಾಜು ಮಾಡುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈ ಬಿಟ್ಟರು. ಕೆಒಎಫ್ ಮಾಜಿ ಅಧ್ಯಕ್ಷ ರಾಜೇಂದ್ರ ಪ್ರಸಾದ್, ಮುಖಂಡ ಬ್ರಹ್ಮನಾಂದ ರೆಡ್ಡಿ, ಶ್ರೀರಾಮಪ್ಪ, ಶ್ರೀನಿವಾಸ್, ವೆಂಕಟೇಶ್ ರಂಗಪ್ಪ,ನಾಗರಾಜು ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

