ಓವರ್‌ಲೋಡ್‌ಗೆ ಮಾಫಿಯಾ ಕುಮ್ಮಕ್ಕು
ಕನ್ನಡಪ್ರಭ ವಾರ್ತೆ, ತುಮಕೂರು,ಜೂ.29
ತುಮಕೂರು ಜಿಲ್ಲೆಯಲ್ಲಿ ಓವರ್ ಲೋಡ್ ಸರಕು ಸಾಗಣಿಕೆಗೆ ಆರ್‌ಟಿಓ ಅಧಿಕಾರಿಗಳ ಟೋಕನ್ ಮಾಫಿಯಾ ಕುಮ್ಮಕ್ಕು ನೀಡುತ್ತಿದೆ ಎಂದು ಫೆಡರೇಷನ್ ಆಫ್ ಕರ್ನಾಟಕ ಲಾರಿ ಓನರ್ಸ್ ಅಸೋಸಿಯೇಷನ್‌ನ ಜಿಲ್ಲಾ ಕಾರ್ಯದರ್ಶಿ ಕೆ. ಕೃಷ್ಣಮೂರ್ತಿ ಆರೋಪಿಸಿದರು.
ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರಾಜ್ಯದಲ್ಲಿ ಟೋಕನ್ ಮಾಫಿಯಾ ಹೆಚ್ಚಾಗಿದ್ದು, ಪ್ರಭಾವಿಗಳ ಒತ್ತಡದ ಜೊತೆಗೆ ಆರ್‌ಟಿಓ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ದೂರಿದರು.
ಜಿಲ್ಲೆಯಲ್ಲಿ ಸುಮಾರು 300 ಮಂದಿ ಲಾರಿ ಮಾಲೀಕರಿದ್ದು, 1 ಸಾವಿರ ಲಾರಿಗಳಿವೆ. ಓವರ್ ಲೋಡ್ ಸಾಗಣಿಕೆ ಮಾಡಲು ಪ್ರತಿಯೊಂದು ಚೆಕ್‌ಪೋಸ್ಟ್‌ಗೆ ಪ್ರತಿ ತಿಂಗಳಿಗೆ 10 ಚಕ್ರದ 2200 ರು. 6 ಚಕ್ರದ ಲಾರಿಗೆ 1300 ರೂ ಟೋಕನ್ ಹಣ ಕೊಡಬೇಕಾಗಿದೆ. ಇದನ್ನು ಅಧಿಕಾರಿಗಳು ಮುಂಗಡವಾಗಿ ಏಜೆಂಟರ ಮೂಲಕ ವಸೂಲಿ ಮಾಡುತ್ತಿದ್ದಾರೆ. ಅಧಿಕಾರಿಗಳು ಅನೇಕ ವರ್ಷಗಳಿಂದ ಈ ದಂಧೆಯಲ್ಲಿ ತೊಡಗಿದ್ದಾರೆ. ಇದರಿಂದ ಅಮಾಯಕರಿಗೆ ಅನ್ಯಾಯವಾಗುತ್ತಿದೆ ಎಂದು ಕೃಷ್ಣಮೂರ್ತಿ ವಾಗ್ದಾಳಿ ನಡೆಸಿದರು.
ಫೆಡರೇಷನ್ ಆಫ್ ಕರ್ನಾಟಕ ಲಾರಿ ಓನರ್ಸ್ ಅಸೋಸಿಯೇಷನ್ ರಾಜ್ಯ ಘಟಕದ ವತಿಯಿಂದ ರಾಜ್ಯದಲ್ಲಿ ಜುಲೈ 1ರಿಂದ ಓವರೆಲೋಡ್ ಬಂದ್ ಮಾಡಲು ತೀರ್ಮಾನಿಸಿದ್ದು, ತುಮಕೂರು ನಗರ ಹಾಗೂ ತಾಲೂಕುಗಳ ಲಾರಿ ಮಾಲೀಕರ ಸಂಘ ಸಂಪೂರ್ಣ ಬೆಂಬಲ ಸೂಚಿಸಿದೆ. ಓವರ್ ಲೋಡ್ ಸಾಗಾಣಿಕೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಮತ್ತು ನ್ಯಾಯಾಲಯದ ಆದೇಶವನ್ನು ಸರ್ಕಾರ ಮತ್ತು ಸಂಬಂಧ ಪಟ್ಟ ಇಲಾಖೆಗಳು ಪಾಲಿಸಬೇಕು ಎಂದು ಅಸೋಸಿಯೇಷನ್ ಒತ್ತಾಯಿಸಿದೆ. ಓವರ್ ಲೋಡ್ ಹಾಕುವುದರಿಂದ ರಸ್ತೆ ಹಾಳಾಗುತ್ತಿದೆ. ಅಪಘಾತಗಳು ಹೆಚ್ಚಾಗುತ್ತಿವೆ. ಲಾರಿಗಳು ಸಹ ಹಾಳಾಗುತ್ತಿವೆ. ಒಂದು ವೇಳೆ ಸಾರಿಗೆ ಇಲಾಖೆ ಕ್ರಮ ಕೈಗೊಳ್ಳದಿದ್ದರೆ ಲೋಕಾಯುಕ್ತ ನ್ಯಾಯಾಲಯದ ಮೊರೆ ಹೋಗುವುದಾಗಿ ಕೃಷ್ಣಮೂರ್ತಿ ಎಚ್ಚರಿಸಿದ್ದಾರೆ. ಸರ್ಕಾರ ಮತ್ತು ಅಧಿಕಾರಿಗಳು ಪ್ರಭಾವಿಗಳ ಒತ್ತಡಕ್ಕೆ ಮಣಿಯಬಾರದು. ತಕ್ಷಣವೇ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ಸಂಘದ ನಗರಾಧ್ಯಕ್ಷ ಅಬ್ದುಲ್ ಖಾದರ್, ಉಪಾಧ್ಯಕ್ಷ ಬಾಬುಜಾನ್, ಖಜಾಂಚಿ ಎಂ.ಡಿ.ಅಲ್ತಾಫ್, ಪದಾಧಿಕಾರಿಗಳಾದ ಅನಿಲ್ ಕುಮಾರ್. ಬಿ.ಜಿ, ಶರವಣನ್, ನಯಾಜ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

