ತುಮಕೂರು

ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ: ಅಕ್ಕಿ ವಶ

Published On :

ಕುಣಿಗಲ್: ಅನ್ನಭಾಗ್ಯ ಅಕ್ಕಿಯನ್ನು ಕಾಳಸಂತೆಯಲ್ಲಿ ವಿಎಸ್‌ಎಸ್‌ಎನ್ ಕಾರ್ಯದರ್ಶಿ ಮಾರಾಟ ಮಾಡುತ್ತಿದ್ದುದನ್ನು ಪತ್ತೆಹಚ್ಚಿದ ಗ್ರಾಮಸ್ಥರು, ಅಕ್ಕಿಯನ್ನು ವಶಪಡಿಸಿಕೊಂಡು ಆರೋಪಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೊಲೀಸರ ವಶಕ್ಕೆ ನೀಡಿ, ಆಹಾರ ಇಲಾಖಾಧಿಕಾರಿಗಳ ವಿಳಂಬಧೋರಣೆ ಖಂಡಿಸಿ ಸೊಸೈಟಿ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಹುಲಿಯೂರುದುರ್ಗದಲ್ಲಿ ಶನಿವಾರ ನಡೆದಿದೆ.  ಹುಲಿಯೂರುದುರ್ಗದ ವ್ಯವಸಾಯ ಸೇವಾಸಹಕಾರ ಸಂಘದ ಆಹಾರಧಾನ್ಯ ವಿತರಣೆ ವಿಭಾಗದಲ್ಲಿ ಪಡಿತರ ಬಂದು ನಾಲ್ಕುದಿನ ಕಳೆದರೂ ಸಂಬಂಧಪಟ್ಟ ಕಾರ್ಯದರ್ಶಿ ಆಹಾರ ವಿತರಿಸದೆ, ಶನಿವಾರ ಬೆಳಗ್ಗೆ ಕಾರ್ಯದರ್ಶಿ ಅನ್ನಬಾಗ್ಯದ ಅಕ್ಕಿಯನ್ನು ಕಾಳಸಂತೆಯಲ್ಲಿ ಕ್ವಿಂಟಾಲ್‌ಗೆ 1600ರು.ನಂತೆ ವ್ಯಕ್ತಿಯೊಬ್ಬರಿಗೆ ಮಾರಾಟಮಾಡಿದ್ದು, ಮಾಲು ಸಮೇತ ಆರೋಪಿಯನ್ನು ಸ್ಥಳೀಯ ಪೊಲೀಸರ ವಶಕ್ಕೆನೀಡಿ, ಕಾರ್ಯದರ್ಶಿ ವಿರುದ್ಧ ಕ್ರಮಕ್ಕೆಆಗ್ರಹಿಸಿದರು.ಪೊಲೀಸರು, ಆಹಾರಇಲಾಖಾಧಿಕಾರಿಗಳು  ಮಹಜರುಮಾಡಿ ದೂರು ನೀಡಿದರೆ ಕ್ರಮಕೈಗೊಳ್ಳುವ ಭರವಸೆ ನೀಡಿದ ಮೇರೆಗೆ ಆಹಾರ ಇಲಾಖಾಧಿಕಾರಿಗಳಿಗೆ ವಿಷಯ ತಿಳಿಸಿದರು. ಅಧಿಕಾರಿಗಳು ಬರದಿದ್ದಲ್ಲಿ ರಸ್ತೆತಡೆ ಪ್ರತಿಭಟನೆ ನಡೆಸುವ ಬೆದರಿಕೆ ಹಾಕಿದೆ ಮೇರೆಗೆ, ಸಂಜೆ ನಾಲ್ಕು ಗಂಟೆಗೆ ಆಹಾರ ಶಿರಸ್ತೆದಾರ ರಂಗಶಾಮಯ್ಯ ಆಗಮಿಸಿ, ಪರಿಶೀಲನೆಗೆ ಮುಂದಾದಾಗ ಆಕ್ರೋಶಗೊಂಡಿದ್ದ ಗ್ರಾಮಸ್ಥರು ಶಿರಸ್ತೆದಾರ್ ಅವರೊಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಮುಂದಾದರು. ಸ್ಥಳೀಯ ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಗೊಂಡಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.