ಗ್ರಾಮಾಭಿವೃದ್ಧಿ ಯೋಜನೆ ದಾರದೀಪ: ಸಂಸದ ಬಸವರಾಜು
ಮಧುಗಿರಿ: ಗ್ರಾಮೀಣ ಕೃಷಿ ಸಂಸ್ಕೃತಿ ಮರು ಹುಟ್ಟು ಪಡೆದು ಮಹಿಳೆಯರು, ಕೃಷಿಕರು ಹಾಗೂ ಕೂಲಿ ಕಾರ್ಮಿಕರು ಸ್ವಾಭಿಮಾನದ ಜೀವನ ನಡೆಸಲಿ ಎಂಬ ದೂರ ದೃಷ್ಟಿಯಿಂದ ಧರ್ಮಸ್ಥಳದ ಡಾ.ವೀರೇಂದ್ರ ಹೆಗ್ಗಡೆ ಅವರು ರೂಪಿಸಿರುವ ಗ್ರಾಮಾಭಿವೃದ್ಧಿ ಯೋಜನೆ ದಾರದೀಪ ಎಂದು ಸಂಸದ ಜಿ.ಎಸ್.ಬಸವರಾಜು ನುಡಿದರು.
ಶನಿವಾರ ಮಧುಗಿರಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೃಷಿ ಉತ್ಸವ ವ್ಯವಸ್ಥಾಪನಾ ಸಮಿತಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಡಿ.ವಿ.ಹಳ್ಳಿ ವಲಯ, ಸ್ಥಳೀಯ ಸಂಘ ಸಂಸ್ಥೆಗಳು, ಸರ್ಕಾರಿ ಇಲಾಖೆಗಳ ಹಾಗೂ ದಾನಿಗಳ ಸಹಕಾರದೊಂದಿಗೆ ಮಧುಗಿರಿ ಸಮೀಪ ಶಿರಾ ರಸ್ತೆಯ ಕುಡೂತಿ ಶ್ರೀವೇಣುಗಾಪಾಲಸ್ವಾಮಿ ದೇವಸ್ಥಾನದ ಆವರಣದಲ್ಲಿ ನಡೆದ ಕೃಷಿ ಉತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ದೇಶಕ್ಕೆ ಮಾದರಿ: ಹಿಂದೆ ಹಳ್ಳಿಗರ ಬದುಕು ದೇಶಕ್ಕೆ ಮಾದರಿಯಗಿತ್ತು.ಹೊಸ ನಾಗರಿಕತೆ, ನಗರೀಕರಣ ಹಾಗೂ ಸರ್ಕಾರಗಳ ತಪ್ಪು ಲೋಪ ದೋಷದಿಂದಾಗಿ ಅಭಿವೃದ್ಧಿ ವಂಚಿತವಾಗಿದ್ದೇವೆ. ಆಧುನಿಕತೆಯ ಭರಾಟೆಯಲ್ಲಿ ಹಳ್ಳಿಗಳು ತನ್ನ ಮೂಲ ನೆಲೆ ಕಳೆದು ಕೊಳ್ಳುತ್ತಿರುವುದು ವಿಷಾದನೀಯ, ಇದನ್ನೆಲ್ಲಾ ಮನಗಂಡ ವೀರೇಂದ್ರ ಹೆಗ್ಗಡೆ ಅವರು ಹಳ್ಳಿಗರಿಗೆ ಆರ್ಥಿಕ ನೆರವು ನೀಡುವ ಮೂಲಕ ಕೃಷಿ ಸಂಸ್ಕೃತಿ ಮತ್ತೆ ಮರು ಜನ್ಮ ಪಡೆಯಲು ಅವಕಾಶ ಕಲ್ಪಿಸಿರುವುದನ್ನು ಸದುಪಯೋಗಪಡಿಸಿಕೊಂಡು ಹೊಸ ಬದುಕಿಗೆ ಅಡಿ ಇಡಬೇಕು ಎಂದರು. ಇದಲ್ಲಿದೆ ಗುಬ್ಬಿ ಹತ್ತಿರ 8.ಸಾವಿರ ಕೋಟಿ ರು.ವೆಚ್ಚದಲ್ಲಿ ಎಚ್‌ಎಲ್ ಹೆಲಿಕಾಪ್ಟಕ್ ಕಾರ್ಖಾನೆ ಸ್ಥಾಪಸಲಿದ್ದು ಇಲ್ಲೂ ಕೂಡ ಉದ್ಯೋಗ ದೊರೆಯಲಿವೆ ಎಂದರು. ವಸ್ತುಪ್ರದರ್ಶನ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಎಂ.ಆರ್. ಹುಲಿನಾಯ್ಕರ್ ಮಾತನಾಡಿದರು.
ತುಮುಲ್ ಅಧ್ಯಕ್ಷ ಕೊಡಂವಾಡಿ ಚಂದ್ರಶೇಖರ್ ಮಾತನಾಡಿದರು. ಸಮಾರಂಭದಲ್ಲಿ ತಾ.ಪಂ.ಅಧ್ಯಕ್ಷ ಸುನಂದಸಿದ್ದಪ್ಪ, ಸಿದ್ದಾಪುರ ಗ್ರಾ.ಪಂ.ಅಧ್ಯಕ್ಷೆ ಲಕ್ಷ್ಮಮ್ಮ, ಎಪಿಎಂಸಿ ಮಾಜಿ ಅಧ್ಯಕ್ಷ ಎಂ.ಜಿ.ಶ್ರೀನಿವಾಸಮೂರ್ತಿ, ಜಿಲ್ಲಾ ನಿರ್ದೇಶಕ ಪುರುಷೋತ್ತಮ್, ಸಂಪನ್ಮೂಲ ವ್ಯಕ್ತಿ ಡಾ.ಎಂ.ನಾರಾಯಣಸ್ವಾಮಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

