ದಂಡಿನಶಿವರ ಬೆಸ್ಕಾಂನ ಅವ್ಯವಸ್ಥೆ: ಕ್ರಮಕ್ಕೆ ಆಗ್ರಹ
ತುರುವೇಕೆರೆ: ತಾಲೂಕಿನ ದಂಡಿನಶಿವರದ ಬೆಸ್ಕಾಂನ ಶಾಖೆ ಅವ್ಯವಸ್ಥೆಗಳ ಆಗರವಾಗಿದ್ದು ಅಲ್ಲಿನ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಸಂಪಿಗೆ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಪಟೇಲ್ ಸಿದ್ದಲಿಂಗಯ್ಯ ಬೆಸ್ಕಾಂನ ಮುಖ್ಯ ಎಂಜಿನಿಯರ್ ಅವರನ್ನು ಕೋರಿದ್ದಾರೆ. ದಂಡಿನಶಿವರ ಶಾಖಾ ಕಚೇರಿಯಲ್ಲಿ ಸೆಕ್ಷನ್ ಆಫೀಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಲೋಕೇಶ್ ಅವರು ವಿದ್ಯುತ್ ಪರಿವರ್ತಕಗಳನ್ನು ಅಳವಡಿಸ ವೇಳೆ ಅಕ್ರಮ ಎಸಗಿದ್ದಾರೆ. ಈಗ ಅವರು ಗ್ರಾಮಗಳಿಗೆ ಅಳವಡಿಸಿರುವ ವಿದ್ಯುತ್ ಪರಿವರ್ತಕಗಳ ವಿವರವನ್ನು ಮಾಹಿತಿ ಹಕ್ಕಿನಡಿ ಕೇಳಲಾಗಿದ್ದರೂ ಇದುವರೆಗೂ ಮಾಹಿತಿ ನೀಡಿರುವುದಿಲ್ಲ. ಹಲವಾರು ಪರಿವರ್ತಕಗಳು ಸುಟ್ಟುಹೋಗಿದ್ದು ಅವುಗಳನ್ನು ಬದಲಾಯಿಸಿರುವ ಬಗ್ಗೆ ಮಾಹಿತಿ ನೀಡಿಲ್ಲ. ಹೊಸದಾಗಿ ಕಂಬಗಳನ್ನು ಹಾಗೂ ಲೈನ್ಗಳನ್ನು ಅಳವಡಿಸಿರುವ ಬಗ್ಗೆ ಮಾಹಿತಿ ಕೇಳಲಾಗಿದೆ. ಆದರೂ ಆ ಸಂಗತಿಗಳ ಬಗ್ಗೆಯೂ ಮಾಹಿತಿ ನೀಡಿಲ್ಲ. ನಿರಂತರ ಜ್ಯೋತಿ ಲೈನ್ನನ್ನು ಎಳೆಯಲು ರಸ್ತೆ ಬದಿಯಲ್ಲಿರುವ ಮರಗಳನ್ನು ಕಡಿಯಲು ಅರಣ್ಯ ಇಲಾಖಾ ಅನುಮತಿ ಪಡೆದಿರುವ ಬಗ್ಗೆ ಅನುಮಾನಗಳು ಇವೆ ಎಂದು ಪಟೇಲ್ ಸಿದ್ದಲಿಂಗಯ್ಯ ಹೇಳಿದ್ದಾರೆ. ದಂಡಿನಶಿವರ ವ್ಯಾಪ್ತಿಯಲ್ಲಿ ಸುಮಾರು 350 ಕ್ಕೂ ಹೆಚ್ಚು ವಿದ್ಯುತ್ ಪರಿವರ್ತಕಗಳನ್ನು ಹೊಸದಾಗಿ ಅಳವಡಿಸಲಾಗಿದೆ. ಗ್ರಾಮಗಳಲ್ಲಿ ಅಳವಡಿಸಿರುವ ವಿದ್ಯುತ್ ಪರಿವರ್ತಕಗಳು ಸುಟ್ಟು ಹೋಗಿದ್ದಲ್ಲಿ ಅವುಗಳ ಬದಲಾವಣೆಗೆ ಶಾಖಾಧಿಕಾರಿ ಗ್ರಾಮಸ್ಥರಿಂದ ಹಣವನ್ನು ನಿರೀಕ್ಷಿಸುತ್ತಾರೆ. ನೀಡದಿದ್ದಲ್ಲಿ ಪರಿವರ್ತಕಗಳನ್ನು ಕೊಡದೇ ಕಿರುಕುಳ ನೀಡುತ್ತಾರೆ ಎಂದು ಪಟೇಲ್ ಸಿದ್ದಲಿಂಗಯ್ಯ ಮುಖ್ಯ ಎಂಜಿನಿಯರ್ಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ದಂಡಿನಶಿವರ ಬೆಸ್ಕಾಂ ಶಾಖಾ ಕಚೇರಿಯಲ್ಲಿ ರೈತರಿಗೆ ಸೂಕ್ತ ನ್ಯಾಯ ದೊರೆಯುತ್ತಿಲ್ಲ. ಈಗಾಗಲೇ ದಂಡಿನಶಿವರ ವ್ಯಾಪ್ತಿಯಲ್ಲಿ ಆಗಿರುವ ಕಾಮಗಾರಿಗಳ ಬಗ್ಗೆ ಸೂಕ್ತ ತನಿಖೆ ಕೈಗೊಂಡು ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪಟೇಲ್ ಸಿದ್ದಲಿಂಗಯ್ಯ ಆಗ್ರಹಿಸಿದ್ದಾರೆ.
ಶಾಖಾ ಕಚೇರಿಯ ಹಲವಾರು ಕಾಮಗಾರಿಗಳ ಬಗ್ಗೆ ಮಾಹಿತಿ ಹಕ್ಕಿನಲ್ಲಿ ಕೇಳಲಾಗಿದ್ದರೂ ಎರಡು ತಿಂಗಳಾದರೂ ಮಾಹಿತಿ ನೀಡದೇ ವಂಚನೆ ಮಾಡಲಾಗಿದೆ ಎಂದು ದೂರಿರುವ ಪಟೇಲ್ ಸಿದ್ದಲಿಂಗಯ್ಯ ಈ ಕುರಿತು ಲೋಕಾಯುಕ್ತರಿಗೂ ದೂರು ಸಲ್ಲಿಸುವುದಾಗಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

