ತುಮಕೂರು

ರು. 30 ಕೋಟಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

Published On :

ಚಿಕ್ಕನಾಯಕನಹಳ್ಳಿ: ಚುನಾವಣೆ ನೀತಿಸಂಹಿತೆ ಜಾರಿಯಾಗುವ ಆತಂಕದಲ್ಲಿ ತಾಲೂಕಿನ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ತರಾತುರಿಯಲ್ಲಿ ಚಾಲನೆ ನೀಡುತ್ತಿದ್ದಾರೆ. ಈಗ್ಗೆ ಕಳೆದ ಒಂದು ವಾರದಿಂದಲೂ ಅನೇಕ ಕಾಮಗಾರಿಗಳಿಗೆ ಶಿಲಾನ್ಯಾಸ, ಗುದ್ದಲಿಪೂಜೆ, ಉದ್ಘಾಟನೆಗಳು ನಿರಂತರವಾಗಿ ನಡೆದಿವೆ. ಈ ನಿಟ್ಟಿನಲ್ಲಿ ಮಾ.3 ರಂದು 30 ಕೋಟಿ ವೆಚ್ಚದಲ್ಲಿ ರಾಮಘಟ್ಟ-ಅನಂತಪುರ 52 ಕಿ.ಮೀ.ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರ ಅಭಿವೃದ್ಧಿ ಕಾಮಗಾರಿಗಳಿಗೆ ಹೇರಳವಾಗಿ ಹಣ ಬಿಡುಗಡೆ ಮಾಡಿತ್ತು. ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದ್ದ ರಾಮಘಟ್ಟ-ಅನಂತಪುರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಇಂದು ಶುಭಗಳಿಗೆ ಕೂಡಿ ಬಂದಿದೆ. ಇದು ಹಿಂದಿನ ಬಿಜೆಪಿ ಸರ್ಕಾರದಲ್ಲಿ ಬಿಡುಗಡೆ ಮಾಡಿದ ಅನುದಾನದಿಂದ ಆದದ್ದು ಎಂದು ಹೇಳಿದರು.ಪ್ರಸಕ್ತ ಕಾಂಗ್ರೆಸ್ ಸರ್ಕಾರ ಇನ್ನು ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣ ಬಿಡುಗಡೆ ಮಾಡುವ ಮನಸ್ಸು ಮಾಡಿಲ್ಲದಿರುವುದು ಕ್ಷೇತ್ರದ ಅಭಿವೃದ್ಧಿಗೆ ಹಿನ್ನೆಡೆಯಾಗಿದೆ ಎಂದರು. ಸದರಿ ಕಾಮಗಾರಿಯನ್ನು ಬೆಂಗಳೂರು ಮೂಲದ ಬಿಎಸ್‌ಆರ್ ಕಂಪನಿ ಗುತ್ತಿಗೆ ಪಡೆದಿದೆ. ರಾಜ್ಯ ಹೆದ್ದಾರಿ ಅಭಿವೃದ್ಧಿ ನಿಗಮ ರಸ್ತೆ ಅಭಿವೃದ್ಧಿ ಪಡಿಸುತ್ತಿದೆ. ಇದರಲ್ಲಿ 13 ಕಿ.ಮೀ ಪುನರ್‌ನಿರ್ಮಾಣ, 10 ಕಿ.ಮೀ. ಬಲಪಡಿಸುವುದು, 29 ಕಿ.ಮೀ.ರಸ್ತೆಯನ್ನು ಬಲಯುತ ಪಡಿಸುವುದಲ್ಲದೆ, ಅಗಲಗೊಳಿಸುವ ಕಾರ್ಯವನ್ನು ಸಹ ಮಾಡಲಾಗುವುದು.ಇದರಲ್ಲಿ 40 ಅಡ್ಡಮೋರಿಗಳನ್ನು ನಿರ್ಮಿಸುವ ಯೋಜನೆ ಸೇರಿದೆ ಎಂದು ತಿಳಿಸಿದರು. ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಸಹಾಯಕ ಅಭಿಯಂತರ ಆನಂದ್, ಸಹಾಯಕ ಅಭಿಯಂತರ ನಾಗರಾಜು ಇದ್ದರು.

ಸಾರ್ವಜನಿಕರಿಗಾಗಿ ದೂರು ಪೆಟ್ಟಿಗೆ: ಸಹಾಯಕ ಪೊಲೀಸ್ ಅಧೀಕ್ಷಕ
ತಿಪಟೂರು
: ಪಟ್ಟಣದ ನಾಗರಿಕರಿಗಾಗಿ ಕಾಮತ್ ಹೋಟೆಲ್ ಮುಂಭಾಗ, ಸಾರಿಗೆ ಬಸ್ ನಿಲ್ದಾಣ, ರೈಲ್ವೆ ಗೇಟ್ ರಾಣಿ ಚೆನ್ನಮ್ಮ ಸರ್ಕಲ್ ಹತ್ತಿರ ಕೆ.ಆರ್.ಬಡಾವಣೆ ಪಾರ್ಕ್ ಹತ್ತಿರ ಪೊಲೀಸ್ ಸಲಹೆ ಮತ್ತು ದೂರು ಪೆಟ್ಟಿಗೆಯನ್ನು ಇರಿಸಲಾಗಿದೆ. ಈ ಪೆಟ್ಟಿಗೆಯಲ್ಲಿ ಸಾರ್ವಜನಿಕರು ತಮ್ಮ ಅಹವಾಲು, ಸಲಹೆ, ಸಮಸ್ಯೆಗಳ ಬಗ್ಗೆ ಹಾಗೂ ಕಾನೂನು ಬಾಹಿರ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಲಿಖಿತ ದೂರುಗಳ ಮೂಲಕ ಈ ಸಲಹಾ ಪೆಟ್ಟಿಗೆಗೆ ಹಾಕಬಹುದೆಂದು ಸಹಾಯಕ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ. ಈ ಸಲಹಾ ಪೆಟ್ಟಿಗೆಗೆ ಹಾಕಿದ ದೂರುಗಳನ್ನು  ಪ್ರತಿದಿನ ಕಚೇರಿಗೆ ತರಿಸಿಕೊಂಡು ಸಹಾಯಕ ಪೊಲೀಸ್ ಅಧೀಕ್ಷಕರು ಪರಿಶೀಲಿಸಿ ನಿಮ್ಮ ಸಲಹೆ ಮತ್ತು ಸಮಸ್ಯೆಗಳಿಗೆ ಸ್ಪಂದಿಸಿ ಸೂಕ್ತ ಕ್ರಮಕೈಗೊಳ್ಳಲಿದ್ದಾರೆ. ಆದ್ದರಿಂದ ಸಾರ್ವಜನಿಕರು ತಮ್ಮ ಸಲಹೆ ಅಥವಾ ದೂರುಗಳನ್ನು ಈ ಪೆಟ್ಟಿಗೆಯಲ್ಲಿ ಹಾಕುವ ಮೂಲಕ ಸಮಾಜದಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಸಹಕರಿಸಬೇಕೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.