ತುಮಕೂರು

ಡಾ.ಎಂ.ಎಸ್.ರಾಮಯ್ಯ ಸ್ಮಾರಕ ಭವನ ಉದ್ಘಾಟನೆ

Published On :

ಮಧುಗಿರಿ: ದೇಶದ ಪ್ರಗತಿಗೆ ಶಿಕ್ಷಣ ಅಡಿಪಾಯ. ಸರ್ಕಾರ ಎಲ್ಲ ವರ್ಗದ ಮಕ್ಕಳಿಗೂ ಸಮಾನ ಕಡ್ಡಾಯ  ಶಿಕ್ಷಣ ಕಲ್ಪಿಸುವ ದೃಷ್ಟಿಯಿಂದ ಹತ್ತು ಹಲವು ಯೋಜನೆ ರೂಪಿಸಿದ್ದು ಪೋಷಕರು, ಮಕ್ಕಳು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಇತ್ತೀಚೆಗೆ ಪಟ್ಟಣದಲ್ಲಿ ತಾಲೂಕು ಬಲಿಜ ಸಂಘದ ವತಿಯಿಂದ ನಿರ್ಮಿಸಿರುವ  ಕರ್ಮಯೋಗಿ ಡಾ.ಎಂ.ಎಸ್.ರಾಮಯ್ಯ ಸ್ಮಾರಕ ಭವನ ಮತ್ತು ದಿ.ಗೌರಮ್ಮ ರಾಮಯ್ಯ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಎಲ್ಲ ವರ್ಗದ ಮಕ್ಕಳು ಶಿಕ್ಷಣ ಕಲಿಯಬೇಕು.ಹಾಗಾಗಿ ಸರ್ಕಾರ ಶಿಕ್ಷಣಕ್ಕಾಗಿಯೇ ಸಾಕಷ್ಟು ಯೋಜನೆ ರೂಪಿಸಿ ನೂರಾರು ಕೋಟು ವೆಚ್ಚ ಮಾಡುತ್ತಿದೆ.ಇದರ ಸದುಪಯೋಗಪಡಿಸಿ ಕೊಂಡು ದೇಶದ ಪ್ರಗತಿಗೆ ಕೈ ಜೋಡಿಸಬೇಕು ಎಂದು ಕರೆ ನೀಡಿದ ಸಿದ್ದರಾಮಯ್ಯ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಕ್ಕಳು ತಪ್ಪು ಹೆಜ್ಜೆ ಇಡದಂತೆ ಪೋಷಕರು ಎಚ್ಚರ ವಹಿಸಬೇಕು.ಸ್ಪರ್ಧೆ ಎದುರಿಸುವ ಶಕ್ತಿ,ಸಾಮರ್ಥ್ಯವನ್ನು ಮಕ್ಕಳಿಗೆ ಕೊಟ್ಟಾಗ ಮಾತ್ರ ದೇಶದ ಉತ್ತಮ ಪ್ರಜೆಗಳಾಗಿ ಹೊರ ಹೊಮ್ಮಲು ಸಾಧ್ಯ ಎಂದರು.
ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ, ವಿಧಾನ ಪರಿಷತ್ ಸದಸ್ಯ ಎಂ.ಆರ್.ಸೀತಾರಾಂ, ಶಾಸಕ ಕೆ.ಎನ್.ರಾಜಣ್ಣ, ಗೋಕುಲ ವಿದ್ಯಾ ಸಂಸ್ಥೆಯ ಎಂ.ಆರ್.ಜಯರಾಮ್, ಬಲಿಜ ಸಂಘದ ಅಧ್ಯಕ್ಷ ಎಂ.ಎಸ್.ಶಂಕರನಾರಾಯಣ್, ಕಾರ್ಯದರ್ಶಿ ಟಿ.ಎನ್.ಶ್ರೀರಾಮಯ್ಯ, ರಂಗನಾಥಬಾಬು,ಅನಂತನಾರಾಯಣಬಾಬು,ಆರ್‌ಎಲ್‌ಎಸ್ರ್‌ಮೇಶ್,ಪೂಲಾ ವೆಂಕಟೇಶ್,ಕೆ.ಪ್ರಕಾಶ್ ಅಡಿಟರ್ ರಾಮಚಂದ್ರಪ್ಪ ಪುರಸಭೆ ಅಧ್ಯಕ್ಷ ಎನ್.ಗಂಗಣ್ಣ ಹಾಗೂ ಜನಾಂಗದ ಬಂಧುಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.