ತುಮಕೂರು

ತಿಪ್ಪರಲಾಗ ಹಾಕಿದರೂ ಬಿಜೆಪಿ ಅಧಿಕ ಸ್ಥಾನ ಗೆಲ್ಲುವುದಿಲ್ಲ

Published On :

ಕುಣಿಗಲ್: ಲೋಕಸಭೆ ಚುನಾವಣೆಯಲ್ಲಿ ತಿಪ್ಪರಲಾಗ ಹಾಕಿದರೂ ಬಿಜೆಪಿ ಅಧಿಕ ಸ್ಥಾನ ಗೆಲ್ಲುವುದೂ ಇಲ್ಲ, ರಾಜ್ಯದಲ್ಲಿ ಅಧಿಕಾರ ಗದ್ದುಗೆ ಹಿಡಿಯುವುದು ಇಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.
ಬುಧವಾರ, ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್  ವಿಧಾನಸಭೆ ಚುನಾವಣೆಗಳಲ್ಲಿ ಜನತೆಗೆ ನೀಡಿದ್ದ ಭರವಸೆಗಳನ್ನು ಪ್ರಾಮಾಣಿಕವಾಗಿ ಈಡೇರಿಸುವ ಮೂಲಕ ನುಡಿದಂತೆ ನಡೆಯುವ ಪಕ್ಷವಾಗಿದೆ.
ಆದರೆ, ಬಿಜೆಪಿ, ಜೆಡಿಎಸ್ ಕೇವಲ ಅಧಿಕಾರಿದಲ್ಲಿದ್ದಾಗ ಮಾತ್ರ ಅಭಿವೃದ್ಧಿ ಬಗ್ಗೆ ಮಾತನಾಡಿ ನಂತರ ರಾಜ್ಯದ ಅಭಿವೃದ್ಧಿ ಮರೆತು ಸ್ವಾರ್ಥ ಚಿಂತನೆಯಲ್ಲಿ ಮುಳುಗುತ್ತಿವೆ. ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಮಾತ್ರ ಬಡಜನತೆ, ರೈತರ ಬಗ್ಗೆ ಮಾತನಾಡಿ, ಅಧಿಕಾರಕ್ಕೆ ಬಂದಾಗ ಏನನ್ನೂ ಮಾಡದೆ, ಕ್ಷೇತ್ರದ ಕಡೆಗೆ ತಿರುಗಿ ಸಹ ನೋಡದೆ ಹೋದವರು.
ಇದೇ ಬೆ.ಗ್ರಾ. ಲೋಕಸಭೆ ಕ್ಷೇತ್ರವನ್ನು ಪ್ರತಿನಿಧಿಸಿ ಅದೇ ಕಾಯಕ ಮಾಡಿದವರು, ಈಗ ಇನ್ನಾವ ಮುಖ ಇಟ್ಟುಕೊಂಡು ಲೋಕಸಭೆ ಚುನಾವಣೆಗೆ ನಿಲ್ಲಲು ಸಿದ್ಧತೆ ನಡೆಸುತ್ತಿದ್ದಾರೆ .ನಿಜಕ್ಕೂ ಮತದಾರರ ಮುಂದೆ ನಿಂತು ಮತಕೇಳುವ ಹಕ್ಕನ್ನು ಕಳೆದುಕೊಂಡಿರುವ ಜೆಡಿಎಸ್ ನಾಯಕರಿಗೆ ಮತದಾರರು ತಕ್ಕ ಪಾಠ ಕಲಿಸುವಂತೆ ಕರೆ ನೀಡಿದರು.
ಬೆಂ.ಗ್ರಾ.ಲೋಕಸಭೆ ಕ್ಷೇತ್ರದ ಸಾಮಾನ್ಯ ಜನತೆಗೆ ಉತ್ತಮ ದರ್ಜೆಯ ಶುದ್ಧ ಕುಡಿಯುವ ನೀರನ್ನು ಅತ್ಯಲ್ಪ ದರದಲ್ಲಿ ನೀಡಲು ಸಂಸದ ಡಿ.ಕೆ. ಸುರೇಶ್ ಕೈಗೊಂಡ ಕ್ರಮವನ್ನು ಎಐಸಿಸಿ ಉಪಾಧ್ಯಕ್ಷ ರಾಹುಲ್‌ಗಾಂಧಿ ಮುಕ್ತಕಂಠದಿಂದ ಪ್ರಶಂಸಿದ್ದಾರೆ ಎಂದು ತಿಳಿಸಿದರು.
ಇಂಧನ ಸಚಿವರಾಗಿ ತಾವು ಅಧಿಕಾರ ವಹಿಸಿಕೊಂಡಾಗಿನಿಂದ ರಾಜ್ಯದ ಜನತೆಗೆ ಬೇಸಿಗೆಯಲ್ಲಿ ಯಾವುದೇ ತೊಂದರೆಯಾಗದಂತೆ ನಿರಂತರ ವಿದ್ಯುತ್ ಪೂರೈಸಲು ಕ್ರಮ ಕೈಗೊಂಡು, ರೈತರಿಗೆ ಹಲವು ಯೋಜನೆಗಳನ್ನು ಘೋಶಿಸಿದ್ದು, ಜನಪರ ಆಡಳಿತ ನೀಡುತ್ತಿರುವ ಕಾಂಗ್ರೆಸ್‌ನ್ನು ಲೋಕಸಭೆ ಚುನಾವಣೆಗಳಲ್ಲಿ ಬೆಂಬಲಿಸುವಂತೆ ಮನವಿ ಮಾಡಿದರು. ಸಂಸದ ಡಿ.ಕೆ.ಸುರೇಶ್, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರವನ್ನು ಈ ಹಿಂದೆ ಪ್ರತಿನಿಧಿಸಿದ್ದ ಸಂಸದರ ಕಾರ್ಯವೈಖರಿಯಿಂದ ಬೇಸತ್ತಿದ್ದ ಜನತೆ,ಮತದಾರರಿಗೆ ಏನಾದರೂ ಬದಲಾವಣೆ ತೋರಿಸಬೇಕೆಂಬ ಸಂಕಲ್ಪದಿಂದ ಅತ್ಯಲ್ಪಅವಧಿಗೆ ಸಂಸದನಾಗಿ ಆಯ್ಕೆಯಾಗಿದ್ದು, ಐದೂವರೆ ತಿಂಗಳಲ್ಲಿ ತಮ್ಮ ಸಾಧನೆ ತೃಪ್ತಿ ತಂದಿದೆ ಎಂದರು.
ಮಾಜಿ ಶಾಸಕ ಬಿ.ಬಿ.ರಾಮಸ್ವಾಮಿಗೌಡ, ಎಸ್.ಪಿ. ಮುದ್ದಹನುಮೇಗೌಡ ಮಾತನಾಡಿದರು. ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗಾಯಿತ್ರಿರಾಜು, ಮುಖಂಡರಾದ ಅನಸೂಯಮ್ಮ, ಗೀತಾ, ರುದ್ರಯ್ಯ, ಶಶಿಕಿರಣ ಡಾ.ರಂಗನಾಥ್, ಶಂಕರ, ಶಿವಣ್ಣಗೌಡ, ರಾಮಣ್ಣ, ರೆಹಮಾನ್‌ಶರೀಫ್, ಲೀಲಾವತಿ, ಪುರಸಭೆ ಸದಸ್ಯ ರಂಗಸ್ವಾಮಿ, ಜಗದೀಶ, ಅರುಣಕುಮಾರ ಉಪಸ್ಥಿತರಿದ್ದರು.
ಕಾರ್ಯಕ್ರಮದ ಮುನ್ನ ಪಟ್ಟಣದ ತಾಲೂಕು ಕಚೇರಿ ಸಮೀಪ ಸ್ಥಾಪಿಸಲಾಗಿರುವ ಶುದ್ಧ ಕುಡಿಯುವ ನೀರು ಘಟಕವನ್ನು ಮಾಜಿ ಶಾಸಕ ಬಿ.ಬಿ.ರಾಮಸ್ವಾಮಿಗೌಡ ಉದ್ಘಾಟಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.