ರು. 49 ಲಕ್ಷ ವೆಚ್ಚದ ವಿದ್ಯಾರ್ಥಿ ನಿಲಯದ ಕೊಠಡಿ ನಿರ್ಮಾಣಕ್ಕೆ ಶಂಕುಸ್ಥಾಪನೆ
ಪಾವಗಡ: ವಿದ್ಯಾರ್ಥಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಿ ಎಂದು ಶಾಸಕ ಕೆ.ಎಂ.ತಿಮ್ಮರಾಯಪ್ಪ ಗುತ್ತಿಗೆದಾರರಿಗೆ ಸಲಹೆ ನೀಡಿದರು.
ಪಟ್ಟಣದ ವೆಂಕಟೇಶ್ವರ ಬಡಾವಣೆಯಲ್ಲಿ ತಾ. ಸಮಾಜ ಕಲ್ಯಾಣ ಇಲಾಖೆ 49 ಲಕ್ಷ ರು. ವೆಚ್ಚದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ತಾಲೂಕಿನ ಅಭಿವೃದ್ಧಿಗೆ ಆದ್ಯತೆ ಕಲ್ಪಿಸಿದ್ದು, ಹಾಸ್ಟಲ್ಗಳ ಕಟ್ಟಡ ನಿರ್ಮಾಣ ಸೇರಿದಂತೆ ಇತರೆ ಕಾಮಗಾರಿಗಳ ನಿರ್ವಹಣೆಯಲ್ಲಿ ಕಳಪೆಗೆ ಅವಕಾಶ ನೀಡದೇ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಗಮನ ನೀಡಿ ಗುತ್ತಿಗೆದಾರರಿಗೆ ಸಲಹೆ ನೀಡಿದರು.
ವಿದ್ಯಾರ್ಥಿನಿಲಯ ಮತ್ತು ಅಂಗನವಾಡಿ ಹಾಗೂ ಇತರೆ ಸರ್ಕಾರಿ ಕಟ್ಟಡಗಳ ನಿರ್ಮಾಣದ ಗುತ್ತಿಗೆ ಭೂ ಸೇನಾ ನಿಗಮಕ್ಕೆ ವಹಿಸಿದ್ದು ಕಾಮಗಾರಿಗಳ ಗುಣಮಟ್ಟ, ಕಾಮಗಾರಿಗಳ ನಿರ್ವಹಣೆಯಲ್ಲಿ ಭೂ ಸೇನಾ ನಿಗಮದ ಅಧಿಕಾರಿ ಹನುಮಂತರಾಯಪ್ಪ ಉತ್ತಮ ರೀತಿಯ ಕಾರ್ಯ ನಿರ್ವಹಿಸುತ್ತಿದ್ದಾರೆಂದು ಅವರನ್ನು ಶ್ಲಾಘಿಸಿದರು. ವಿದ್ಯಾರ್ಥಿ ನಿಲಯಕ್ಕೆ ಸಮರ್ಪಕ ಕುಡಿಯುವ ನೀರು, ವಿದ್ಯುತ್ ಹಾಗೂ ಶೌಚಾಲಯ ಇತರೆ ಅಗತ್ಯ ಮೂಲಭೂತ ಸೌಲಭ್ಯಗಳೊಂದಿಗೆ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿ ಎಂದು ತಿಳಿಸಿದರು.
ತಾ.ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ವೈ.ಆರ್.ಚೌಧರಿ ತಾಪಂ ಅಧ್ಯಕ್ಷೆ ರಾಧರಾಜ್ಗೋಪಾಲ್,ಪುರಸಭೆ ಸದಸ್ಯ ವಸಂತ್ಕುಮಾರ್, ವಿನೋದ ರಾಮಾಂಜಿನಪ್ಪ, ತಾಪಂ ಸದಸ್ಯೆ ನರಸಮ್ಮ ಓಬಳಪತಿ,ಗುಂಡ್ಲಹಳ್ಳಿ ರಾಮಾಂಜಿನಪ್ಪ,ಸರವಾಟಪುರ ಮಂಜುನಾಥ್ ಹಾಗೂ ನಿಲಯ ಪಾಲಕರಾದ ಶಿವಪ್ಪ,ನಾರಾಯಣಸ್ವಾಮಿ ಹನುಮಂತರಾಯಪ್ಪ,ಸೌಕತ್ ಇತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

