ಇಂದು ಮತದಾರರ ಪಟ್ಟಿ ಸೇರ್ಪಡೆಗೆ ವಿಶೇಷ ಶಿಬಿರ
ತುಮಕೂರು: ಲೋಕಸಭಾ ಚುನಾವಣೆಯ ಸಂಬಂಧ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳಲು ಮಾ.9 ರಂದು ತುಮಕೂರು ನಗರ ಮತ್ತು ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರಗಳ 426 ಮತಗಟ್ಟೆಗಳಲ್ಲಿ ವಿಶೇಷ ಶಿಬಿರಗಳನ್ನು ಏರ್ಪಡಿಸಲಾಗಿದೆ ಎಂದು ಉಪವಿಭಾಗಾಧಿಕಾರಿ ಸಿ.ಎಲ್. ಆನಂದ್ ತಿಳಿಸಿದರು.
ಅವರು ಮಹಾನಗರಪಾಲಿಕೆ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಚುನಾವಣೆಯ ಸಂದರ್ಭದಲ್ಲಿ ಮತದಾರರು ಮತ ಚಲಾಯಿಸಲು ಬಂದಾಗ ತಮ್ಮ ಹೆಸರು ಕೈಬಿಟ್ಟಿದೆ. ಹೆಸರು ತಪ್ಪಾಗಿದೆ. ಫೋಟೋ ಬಂದಿಲ್ಲ ಎಂದು ನೋಡಿಕೊಳ್ಳುವ ಬದಲು ಎಲ್ಲಾ ಮತಕೇಂದ್ರಗಳಲ್ಲಿ ಮಾ.9 ರಂದು ಮತದಾರರ ಪಟ್ಟಿಯನ್ನು ಪ್ರಕಟಿಸಲಿದೆ. ಈ ಪಟ್ಟಿಗಳನ್ನು ಪರಿಶೀಲಿಸಿಕೊಂಡು ಹೆಸರುಗಳು ಕೈ ಬಿಟ್ಟಿದ್ದಲ್ಲಿ, ಅರ್ಹ ಮತದಾರರು ತಮ್ಮ ಹೆಸರು ಸೇರ್ಪಡೆಯಾಗದಿದ್ದಲ್ಲಿ, ಸೇರ್ಪಡೆ ಮಾಡಿಕೊಳ್ಳಲು ಈ ವಿಶೇಷ ಶಿಬಿರ ಹಮ್ಮಿಕೊಂಡಿರುವುದಾಗಿ ಹೇಳಿದರು.ಇದಲ್ಲದೆ ಬಿಎಲ್‌ಒಗಳಿಗೆ ಹಾಗೂ ತಾಲೂಕು ಕಚೇರಿ, ಮಹಾನಗರಪಾಲಿಕೆ ಕಚೇರಿಗಳಲ್ಲೂ ಈ ಸಂಬಂಧವಾಗಿ ಅರ್ಜಿ ಸಲ್ಲಿಸಲು ಮಾ.16 ವರೆಗೆ ಅವಕಾಶವಿದೆ. ಮತದಾರರು ಇದನ್ನು ಸದುಪಯೋಗಪಡಿಸಿಕೊಳ್ಳಬಹುದು ಇದರ ಜೊತೆಗೆ ಮತದಾರರು ತಮ್ಮ ಹೆಸರುಗಳನ್ನು ಮುಖ್ಯ ಚುನಾವಣಾಧಿಕಾರಿಗಳ ವೆಬ್ ಸೈಟ್ ನಲ್ಲೂ ಪರಿಶೀಲಿಸಿಕೊಳ್ಳಬಹುದಾಗಿದೆ ಎಂದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದೆ. ರಾಜ್ಯ ಸರ್ಕಾರಿ ಕಚೇರಿ, ಸರ್ಕಾರಿ ಆವರಣ, ಯಾವುದೇ ಗೋಡೆ ಬರಹ, ಬಿತ್ತಿ ಚಿತ್ರ, ಬ್ಯಾನರ್, ಬಂಟಿಂಗ್ ಮುಂತಾದುವುಗಳನ್ನು ನಿಷೇಧಿಸಲಾಗಿದೆ. ಪ್ರಚಾರಗಳನ್ನು ಕೈಗೊಳ್ಳಲು ಎಲ್ಲಾ ರಾಜಕೀಯ ಪಕ್ಷಗಳಿಗೂ ಸಮಾನ ಅವಕಾಶಗಳನ್ನು ಸದರಿ ಸ್ಥಳಗಳಲ್ಲಿ ಕಲ್ಪಿಸಲಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

