ರಾಜ್ ಕುಟುಂಬ ರಾಜಕಾರಣಕ್ಕೆ ಬರಬಾರದೆಂದೇನಿಲ್ಲ: ಎ.ಕೃಷ್ಣಪ್ಪ
ಮುಂದಿನ ವರ್ಷ ರಾಜ್ಯ ವಿಧಾನಸಭೆಗೆ ಮತ್ತೆ ಚುನಾವಣೆ
ತುಮಕೂರು: ರಾಜ್‌ಕುಮಾರ್ ಕುಟುಂಬದವರು ರಾಜಕಾರಣಕ್ಕೆ ಬರಬಾರದು. ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಬಾರದು ಅಂತ ಎಲ್ಲೂ ಹೇಳಿಲ್ಲ. ಈ ಕುರಿತು ಡಾ. ರಾಜ್ ಸಹ ಶಾಸನದ ರೀತಿ ಹೇಳಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎ.ಕೃಷ್ಣಪ್ಪ ಹೇಳಿದರು.
ಅವರು ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜೆಡಿಎಸ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಒಂದು ಸೀಟೂ ಗೆಲ್ಲಲ್ಲ ಎಂಬ ಸಿದ್ದರಾಮಯ್ಯನವರ ಹೇಳಿಕೆ ದುರಹಂಕಾರದಿಂದ ಕೂಡಿದೆ. ಜೆಡಿಎಸ್ ಈ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿದರೆ ಸಿದ್ದರಾಮಯ್ಯ ರಾಜಕೀಯ ಜೀವನದಿಂದ ನಿವೃತ್ತರಾಗುತ್ತಾರಾ? ಸಾರ್ವಜನಿಕವಾಗಿ ಕ್ಷಮೆ ಕೋರಲು ಸಿದ್ಧರಿದ್ದಾರೆಯೇ ಎಂದು ಸವಾಲೆಸೆದರು.
ನರೇಂದ್ರ ಮೋದಿ ಪ್ರಧಾನಿಯಾಗುವುದು ಅಸಾಧ್ಯ. ದಾರಿಯಲ್ಲಿ ಹೋಗುವ ದಾಸಯ್ಯರೆಲ್ಲಾ ಪ್ರಧಾನಿ ಪಟ್ಟಕ್ಕೆ ಅರ್ಜಿ ಹಾಕುತ್ತಿದ್ದಾರೆ. ತೃತೀಯ ರಂಗದೊಂದಿಗೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳಲಿದೆ. ರಾಜ್ಯದಲ್ಲಿ 3 ಸ್ಥಾನಗಳನ್ನು ಕಮ್ಯುನಿಸ್ಟ್ ಪಕ್ಷಗಳಿಗೆ ಬಿಟ್ಟುಕೊಡುವ ಸಾಧ್ಯತೆಯಿದೆ. ರಾಜ್ಯದಲ್ಲಿ 18 ಸ್ಥಾನ ಲೋಕಸಭಾ ಸ್ಥಾನಗಳನ್ನು ಜೆಡಿಎಸ್ ಗೆಲ್ಲಲಿದೆ ಎಂದರು.
ಬಿಜೆಪಿಯ ಸುಷ್ಮಾ ಸ್ವರಾಜ್ ಬಿಎಸ್‌ಆರ್ ಕಾಂಗ್ರೆಸ್‌ನ್ನು ಬಿಜೆಪಿಯೊಂದಿಗೆ ಸೇರ್ಪಡೆ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೂ ರಾಮುಲು ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಬೇಡ ಎಂದರೂ ಮೇಲೆ ಬಿದ್ದು ಹೋಗುತ್ತಿರುವ ರಾಮುಲುಗೆ ನಾಚಿಕೆಯಾಗಬೇಕು ಎಂದರು.
ವಿಧಾನಸಭೆಗೆ ಮತ್ತೆ ಚುನಾವಣೆ: ಮುಂದಿನ ವರ್ಷ ರಾಜ್ಯ ವಿಧಾನಸಭೆಗೆ ಮತ್ತೆ ಚುನಾವಣೆ ನಡೆಯಲಿದೆ. ಸಿದ್ದರಾಮಯ್ಯ 5 ವರ್ಷ ಅಧಿಕಾರ ನಡೆಸೋಲ್ಲ. ಮುಂದಿನ ವರ್ಷ ಅಧಿಕಾರ ಕಳೆದುಕೊಳ್ಳುತ್ತಾರೆ. ಈಗ ಲೋಕಸಭೆ ಚುನಾವಣೆಗೆ ಮತ ಚಲಾಯಿಸಲು ಮತದಾರರಿಗೆ ಅವಕಾಶ ಸಿಕ್ಕಿದೆ. ಬದಲಾವಣೆ ಮಾಡೋದಕ್ಕೆ ಬುಲೆಟ್ ಬೇಕಿಲ್ಲ. ಬ್ಯಾಲೆಟ್ ಸಾಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

