ತುಮಕೂರು

'ಕ್ರಿಯಾಶೀಲನಾಗಿ ಕಾರ್ಯನಿರ್ವಹಿಸುವೆ'

Published On :

ಹುಳಿಯಾರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ  ನನ್ನನ್ನು ಬೆಂಬಲಿಸಿ ಜಯಗಳಿಸುವಂತೆ ಮಾಡಿದರೆ  ನಾನು ಸಾಮಾನ್ಯ ಜನಪ್ರತಿನಿಧಿಯಂತೆ ರಾಷ್ಟ್ರದ ಹಾಗೂ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುವೆ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡ ತಿಳಿಸಿದರು.
ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿಯಾಗಿ ಆಯ್ಕೆಯಾಗಿ ಚುನಾವಣಾ ಪ್ರಚಾರ ಕೈಗೊಂಡು ಇದೇ ಮೊದಲ ಬಾರಿಗೆ ಹುಳಿಯಾರಿಗೆ ಆಗಮಿಸಿದ ಅವರು ಎಪಿಎಂಸಿ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ವೈ.ಸಿ. ಸಿದ್ರಾಮಯ್ಯ ಅವರ ನಿವಾಸದಲ್ಲಿ  ಕಾರ್ಯಕರ್ತರನ್ನು ಉದ್ದೇಶಿಸಿ  ಮಾತನಾಡಿದರು.
ಈ ಬಾರಿಯ ಲೋಕಸಭಾ ಚುನಾವಣೆ ರಾಜಕೀಯ ಪಕ್ಷಗಳ ಪಾಲಿನ ಪ್ರತಿಷ್ಠೆಯ ಕಣವಾಗಿದ್ದು ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪಕ್ಷ ಕೈಗೊಂಡಿರುವಂತಹ ಯೋಜನೆಗಳು, ಅದರಿಂದಾಗಿರುವ ಅನುಕೂಲಗಳನ್ನು ಮತದಾರರಿಗೆ ತಿಳಿಸುವಲ್ಲಿ ಮುಂದಾಗಬೇಕು. ಹಾಗಾದಾಗ ಮಾತ್ರ ಗೆಲವು ಸಾಧ್ಯವೆಂದರು. ಅಂತೆಯೇ ಕೇಂದ್ರದಲ್ಲಿ ಕಾಂಗ್ರೆಸ್ ತನ್ನ ಹತ್ತು ವರ್ಷಗಳ ಅಧಿಕಾರವಧಿಯಲ್ಲಿ ದೇಶಾದ್ಯಂತ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿ, ಅವುಗಳನ್ನು ಅನುಷ್ಠಾನಗೊಳಿಸಿಕೊಂಡು ಬಂದಿರುವುದರಿಂದ  ಈ ಸಲ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರವೂ  ವಿಧಾನಸಭಾ ಚುನಾವಣೆಗೂ ಮುನ್ನ ಕೊಟ್ಟ ಭರವಸೆಗಳ ಪೈಕಿ 168 ನ್ನು ಈಗಾಗಲೇ ಈಡೇರಿಸಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.