ರಾಜ್ಯಪ್ರಶಸ್ತಿ ಪುರಸ್ಕೃತ ದೈ.ಶಿಕ್ಷಕ ಅಶ್ವತ್ಥನಾರಾಯಣಸ್ವಾಮಿಗೆ ಬೀಳ್ಕೊಡುಗೆ
ದೇವನಹಳ್ಳಿ: ತಾಲೂಕು ಬೆಟ್ಟಕೋಟೆ ರಾಮಕೃಷ್ಣ ಪ್ರೌಢಶಾಲೆಯಲ್ಲಿ 1978 ರಿಂದ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದು 2013-14ನೇ ಸಾಲಿನಲ್ಲಿ ರಾಜ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದಿರುವ ಚಿಕ್ಕಬಳ್ಳಾಪುರ ಬಳಿಯ ಪಾಪಸಂದ್ರದ ಅಶ್ವತ್ಥನಾರಾಯಣಸ್ವಾಮಿ ಅವರಿಗೆ ಅಭಿನಂದನೆ ಹಾಗೂ ಬೀಳ್ಕೊಡುಗೆ ಸಮಾರಂಭವನ್ನು ಬೆಟ್ಟಕೋಟೆಯಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದವರು ಆಯೋಜಿಸಿದ್ದರು.
ಅಶ್ವತ್ಥನಾರಾಯಣಸ್ವಾಮಿ ಶಾಲೆಯಲ್ಲಿ ಕಬ್ಬಡಿ, ಬ್ಯಾಸ್ಕೆಟಟ್ಬಾಲ್ ಅಲ್ಲದೆ ಹಾಕಿ ಕ್ರೀಡೆಗಳಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಸಾವಿರಾರು ವಿದ್ಯಾರ್ಥಿಗಳು ತಾಲೂಕು, ಜಿಲ್ಲೆ ಮತ್ತು ರಾಜ್ಯಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸುವಂತೆ ಮಾಡಿದ್ದಾರೆ. ಸುಮಾರು ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿ ವಿದ್ಯಾರ್ಥಿನಿಯರು ರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸುವಂತೆ ತರಬೇತಿ ನೀಡಿ ಶಾಲೆಗೆ ಮತ್ತು ತಾಲೂಕಿಗೆ ಕೀರ್ತಿ ತಂದಿರುವ ಭಾಗ್ಯ ಇವರದಾಗಿದೆ ಎಂದು ಹಿರಿಯ ವಿದ್ಯಾರ್ಥಿಗಳ ಸಂಘದ ಎನ್.ಶ್ರೀನಿವಾಸಮೂರ್ತಿ ತಿಳಿಸಿದರು.
ರುದ್ರಪ್ಪ ಮಾತನಾಡಿ ಅಶ್ವತ್ಥನಾರಾಯಣಸ್ವಾಮಿಗೆ ಶುಭ ಹಾರೈಸಿದರು.ರಾಜ್ಯ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವಿ.ವೆಂಕಟೇಶ್ ಮಾತನಾಡಿ ಅಶ್ವತ್ಥನಾರಾಯಣಸ್ವಾಮಿ ರಾಜ್ಯದಲ್ಲಿ ದೈಹಿಕ ಶಿಕ್ಷಣ ಪಠ್ಯ ಪುಸ್ತಕ ಬರಲು ಸಹ ಕಾರಣಕರ್ತರಾಗಿದ್ದಾರೆ ಎಂದರು.
ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಡಾ. ನಿಸರ್ಗ, ಅಶ್ವತ್ಥನಾರಾಯಣಸ್ವಾಮಿ ಗುರುಗಳಾದ ಡಾ.ಎನ್.ವಾಸುದೇವಭಟ್ ನಿವೃತ್ತ ದೈ.ಶಿಕ್ಷಣ ಅಧಿಕಾರಿ ಕೆ.ಬೋರಯ್ಯ, ಆರ್.ಸಿದ್ದರಾಮಯ್ಯ ಮಾತನಾಡಿದರು.
ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಎಂ.ಎನ್.ನಾರಾಯಣಪ್ಪ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕ ಜಿ.ಎ.ಚಂದ್ರಶೇಖರ್ ಉಪಸ್ಥಿತರಿದ್ದರು. ಯಾ.ಚಿ.ದೊಡ್ಡಯ್ಯ ಸ್ವಾಗತ ಕೋರಿದರು. ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಅಗಲಕೋಟೆ ರಾಜಣ್ಣ ಅಶ್ವತ್ಥನಾರಾಯಣಸ್ವಾಮಿಗೆ ಚಿನ್ನದ ಉಂಗುರ ತೊಡಿಸಿ ಗೌರವಿಸಿದರು. ಹೊಸಹಳ್ಳಿ ವಾಸುದೇವ್ ತಂಡದವರಿಂದ ಗೀತಗಾಯನ ಆಯೋಜಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

