ದೇಗುಲ ಆಭರಣ ಕಳವು: ಆರೋಪಿಗಳ ಸೆರೆ
ಮಳವಳ್ಳಿ: ತಾಲೂಕಿನ ಕಿರುಗಾವಲು ಹೋಬಳಿ ಕಲ್ಕುಣಿ ಗ್ರಾಮದ ಇತಿಹಾಸ ಪ್ರಸಿದ್ದ ವಿಜಯನಗರೇಶ್ವರಿ ದೇವಸ್ಥಾನದ ಬಾಗಿಲು ಒಡೆದು ಚಿನ್ನಾಭರಣ ದೋಚಿದ್ದ ಇಬ್ಬರು ದುಷ್ಕರ್ಮಿಗಳನ್ನು ಮಾಲು ಸಮೇತ ಬಂಧಿಸುವಲ್ಲಿ ಇಲ್ಲಿನ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಲ್ಕುಣಿ ಗ್ರಾಮದ ವಿಜಯನಗರೇಶ್ವರ ದೇವಸ್ಥಾನದಲ್ಲಿ ರಾತ್ರಿ ವೇಳೆಯಲ್ಲಿ ಇತ್ತೀಚೆಗೆ ಕಳ್ಳರು ಬಾಗಿಲು ಒಡೆದು ವಿಗ್ರಹದ ಮೇಲೆ ಹಾಕಿದ್ದ ಚಿನ್ನ ಹಾಗೂ ಬೆಳ್ಳಿ ಒಡವೆಗಳನ್ನು ಮತ್ತು ಹುಂಡಿಯನ್ನು ಕಳ್ಳತನ ಮಾಡಿಕೊಂಡು ಹೋಗಿದ್ದ ಬಗ್ಗೆ ಕಿರಗಾವಲು ಪೊಲೀಸ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಆರೋಪಿಗಳನ್ನ ಪತ್ತೆ ಹಚ್ಚುವಲ್ಲಿ ಜಿಲ್ಲೆಯ ವಿವಿಧೆಡೆ ಸೇರಿದಂತೆ ನೆರೆ ಜಿಲ್ಲೆಗಳಲ್ಲಿ ಈ ಬಗ್ಗೆ ಗಮನ ಹರಿಸಿದ ಪೊಲೀಸರಿಗೆ ಸಿಕ್ಕ ಮಾಹಿತಿ ಅನ್ವಯ ಮಳವಳ್ಳಿ ಪಟ್ಟಣದ ಹೊರವಲಯದ ಮಾಗನೂರು ಗ್ರಾಮದ ಬಸವರಾಜು ಮತ್ತು ಮೈಸೂರು ಜಿಲ್ಲೆಯ ಹಾರೋಹಳ್ಳಿ ಗ್ರಾಮದ ಲೋಕೇಶ ಉರುಫ್ ಲೋಕಿ ಎಂಬವರನ್ನು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಈ ಇಬ್ಬರ ಜೊತೆಗೆ, ಮತ್ತೊಬ್ಬ ಸೇರಿಕೊಂಡು ಕಳ್ಳತನ ಮಾಡಿದ 70 ಗ್ರಾಂ ಚಿನ್ನ ಹಾಗೂ 300 ಗ್ರಾಂ ತೂಕದ ಬೆಳ್ಳಿಯ ಒಡವೆಗಳನ್ನು ಮಂಡ್ಯದ ಅಶೋಕ್ ಎಂಬುವರಿಗೆ ಮಾರಾಟ ಮಾಡಿದ್ದರು ಎಂದು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರು.1,75,000 ಮೌಲ್ಯದ ಒಡವೆ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

