ಧರ್ಮಸ್ಥಳ ಯೋಜನೆ ದೇಶಕಂಡ ಅತ್ಯುತ್ತಮ ಯೋಜನೆ
ತಿಪಟೂರು: ಮನುಷ್ಯ ಮೂಲತಃ ಸಂಘಜೀವಿ. ಯಾವುದೇ ವರ್ಗ ಭೇದವಿಲ್ಲದೆ ಒಂದೇ ವೇದಿಕೆಯಲ್ಲಿ ಸೇವಾ ಮನೋಭಾವದೊಂದಿಗೆ ಒಗ್ಗೂಡಿಸುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ಶ್ಲಾಘನೀಯ ಎಂದು ವಿರಕ್ತಮಠದ ಶ್ರೀ ನಿರಂಜನಪೀಠ ಮಾಡಾಳು ಶ್ರೀ ರುದ್ರಮುನಿಸ್ವಾಮೀಜಿ ತಿಳಿಸಿದರು.
ತಾಲೂಕಿನ ಹಾಲ್ಕುರಿಕೆ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ತಿಪಟೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ವತಿಯಿಂದ ಏರ್ಪಡಿಸಿದ್ದ ಸಾಧನ ಸಮಾವೇಶದ ಸಾನಿಧ್ಯ ವಹಿಸಿ ಮಾತನಾಡಿದ ಶ್ರೀಗಳು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೇಶಕಂಡ ಅತ್ಯುತ್ತಮ ಯೋಜನೆಯಾಗಿದ್ದು, ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗುವಂತೆ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದರು.
ಮಾಜಿ ಶಾಸಕ ಬಿ.ಸಿ.ನಾಗೇಶ್ ಗ್ರಾಮೀಣ ಅಭಿವೃದ್ಧಿ ದೇಶದ ಅಭಿವೃದ್ಧಿಯ ಮೂಲವಾಗಿದ್ದು, ಸ್ವಾವಲಂಬನೆಯ ಬದುಕು ಮನುಷ್ಯನಿಗೆ ಅವಶ್ಯಕ. ಗಾಂಧೀಜಿಯವರ ಕಲ್ಪನೆಯ ರಾಮರಾಜ್ಯ ಮಹಿಳಾ ಸಬಲೀಕರಣ ಡಾ. ವೀರೇಂದ್ರ ಹೆಗ್ಗಡೆ ಕನಸಾಗಿದ್ದು, ಹೆಣ್ಣು ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಲಿದೆ ಎಂದರು.
ಯೋಜನಾಧಿಕಾರಿ ಪಿ. ಶ್ರೀನಿವಾಸ್ ಮಾತನಾಡಿ ಶ್ರೀ ಕ್ಷೇತ್ರ ಯೋಜನೆಯ 27 ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, 28 ಲಕ್ಷ ಸದಸ್ಯರನ್ನು ಹೊಂದಿದೆ. ಸಂಸ್ಥೆ ವತಿಯಿಂದ ಜೀವವಿಮೆ ರಾಷ್ಟ್ರೀಯ ಪಿಂಚಣಿ ಯೋಜನೆ ಜಾರಿಯಲ್ಲಿ ಈ ಎಲ್ಲಾ ಕಾರ್ಯಕ್ರಮಗಳ ಜೊತೆ ಅನೇಕ ಸಮಾಜಪರವಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಎಷ್ಟೆ ಬದಲಾವಣೆಗಳಾದರೂ ನಮ್ಮ ಸಂಸ್ಕೃತಿ ಅರಿವು ಅಗತ್ಯ. ಸಕಾರಾತ್ಮಕ ಬೆಳವಣಿಗೆ
ಮತ್ತು ನಡವಳಿಕೆಗಳ ಕಡೆ ಗಮನ ಹರಿಸುವುದು ಮುಖ್ಯ. ಧರ್ಮಸ್ಥಳದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಾಮೂಹಿಕ ವಿವಾಹ ನಡೆಯುತ್ತಿದ್ದು ಆಸಕ್ತರು ಸಂಸ್ಥೆಯ ಪ್ರತಿನಿಧಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬೇಕಾಗಿ ತಿಳಿಸಿದರು.
ಗ್ರಾ.ಪಂ.ಮಾಜಿ ಅಧ್ಯಕ್ಷ ಎಂ. ಉಮಾಮಹೇಶ್ ಮಾತನಾಡಿ ರಾಜ್ಯದಲ್ಲಿ ಅನೇಕ ಹಣಕಾಸಿನ ಸಂಸ್ಥೆಗಳು ಹುಟ್ಟಿಕೊಂಡು ಸಾರ್ವಜನಿಕರಿಗೆ ನಾಮಹಾಕಿದ ಉದಾಹರಣೆಗಳಿದ್ದು, ಶ್ರೀ ಕ್ಷೇತ್ರ ಯೋಜನೆಯು ಹಣಕಾಸಿನ ವ್ಯವಹಾರಗಳ ಜೊತೆ ಗ್ರಾಮೀಣಾಭಿವೃದ್ಧಿ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರ ನೀಡುತ್ತಿದ್ದು, ಸಾರ್ವಜನಿಕರು ಇದರ ಸಹಕಾರ ಪಡೆಯಬೇಕೆಂದರು.
ಗ್ರಾ.ಪಂ.ಅಧ್ಯಕ್ಷೆ ಭಾಗ್ಯ. ಎಚ್.ಸಿ.ಎಂ.ಜಿ. ಪಿ.ಯು ಕಾಲೇಜಿನ ಪ್ರಾಚಾರ್ಯ ಬಸವರಾಜು, ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕರಾದ ನಾಗರಾಜು, ವಲಯ ಒಕ್ಕೂಟದ ಅಧ್ಯಕ್ಷ ರಾಜಶೇಖರಯ್ಯ ಮತ್ತಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

