ಶೈಕ್ಷಣಿಕ ಗುಣಮಟ್ಟ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ಅಪಾರ: ಕಾಳೇಗೌಡ
ಮಳವಳ್ಳಿ: ರಾಜ್ಯ ಲೋಕ ಶಿಕ್ಷಣ ನಿರ್ದೇಶನಾಲಯ ಸಾದರ ಪಡಿಸುತ್ತಿರುವ ಸಾಕ್ಷರತ ಶಿಕ್ಷಣದ ಗುಣಮಟ್ಟ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದೆ ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾದ ತಾಲೂಕಿನ ಶೆಟ್ಟಹಳ್ಳಿ ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆ ಮುಖ್ಯ ಶಿಕ್ಷಕರು ಹಾಗೂ ಸಾಕ್ಷರತ ಸಿಬ್ಬಂದಿ ಕೊಡುಗೆ ಅಪಾರ ಎಂದು ಜಿಲ್ಲಾ ಲೋಕ ಶಿಕ್ಷಣ ಅಧಿಕಾರಿ ಕಾಳೇಗೌಡ ಅಭಿಪ್ರಾಯಪಟ್ಟರು.
ಇಲ್ಲಿನ ಶೆಟ್ಟಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಮೂಲ ಸಾಕ್ಷರತ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ ಪರೀಕ್ಷೆ ಬರೆಯುತ್ತಿದ್ದ ಪ್ರಶಿಕ್ಷಣಾರ್ಥಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಮುಖ್ಯ ಶಿಕ್ಷಕ ನಟರಾಜ್ ಎಂ.ಪಿ. ಪರೀಕ್ಷ ಕೇಂದ್ರದ ಸಂಪೂರ್ಣ ಮಾಹಿತಿ ಒದಗಿಸಿದರು. ಲೋಕ ಶಿಕ್ಷಣ ನಿರ್ದೇಶನಾಲಯ ರಾಜ್ಯ ಉಪ ನಿರ್ದೇಶಕಿ ಸುಮತಿ, ತಾಲೂಕು ಲೋಕ ಶಿಕ್ಷಣ ಅಧಿಕಾರಿ ಪ್ರಕಾಶ್‌ಸಿದ್ದೇಗೌಡ, ಮಹೇಂದ್ರ ಹಾಗೂ ಕಾವೇರಿ ವಿದ್ಯಾಪೀಠದ ಪ್ರಾಂಶುಪಾಲ ಶಂಕರ್, ಮಂಡ್ಯ ಜಿಲ್ಲಾ ಲೋಕ ಶಿಕ್ಷಣ ಸಂಯೋಜಕರಾದ ಯೋಗೀಶ್ ಪರೀಕ್ಷಾ ಕೇಂದ್ರವನ್ನು ಪರಿಶೀಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

