ಶಿವನಗೆರೆಯಲ್ಲಿ ನಾಟಕ ಇಂದು
ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನ ದೊಡ್ಡೇರಿ ಹೊಬಳಿಯ ಶಿವನಗೆರೆ ಗ್ರಾಮದಲ್ಲಿ ಮಾ.12 ರಂದು ರಾತ್ರಿ 8 ಗಂಟೆಗೆ ಕುರುಕ್ಷೇತ್ರ ಅಥವಾ ಛಲದೋಳ್ ಧುರ್ಯೋಧನ ಎಂಬ ಪೌರಾಣಿಕ ನಾಟಕ ನಡೆಯಲಿದೆ. ಗ್ರಾಮದ ಶ್ರೀ ಮದ್ವೀರಾಂಜನೇಯಸ್ವಾಮಿ ಕೃಪಾ ಪೋಷಿತ ನಾಟಕ ಮಂಡಳಿ ವತಿಯಿಂದ ಈ ನಾಟಕ ಹಮ್ಮಿಕೊಳ್ಳಲಾಗಿದ್ದು, ಮನಮೋಹಕ ದೃಶ್ಯಗಳು ನಾಟಕದಲ್ಲಿದೆ. ಗ್ರಾಮದ ಮಕ್ಕಳು, ಯುವಕರು ಮತ್ತು ರೈತರು ನಾಟಕದಲ್ಲಿ ಅಭಿನಹಿಸುತ್ತಿದ್ದಾರೆ. ಚಿತ್ರ ನಟ ಅರ್ಜುನ್ ಸರ್ಜಾ ಅವರ ತಾಯಿ ಮತ್ತು ಜಿ.ಪಂ. ಮಾಜಿ ಸದಸ್ಯರಾದ ಲಕ್ಷ್ಮೀದೇವಿ ಶಕ್ತಿಪ್ರಸಾದ್ ನಾಟಕ ಉದ್ಘಾಟಿಸಲಿದ್ದಾರೆ. ಶಾಸಕ ಕೆ.ಎನ್. ರಾಜಣ್ಣ ಅಧ್ಯಕ್ಷತೆ ವಹಿಸಲಿದ್ದು, ಚಿತ್ರ ನಟ ಅರ್ಜುನ್ ಸರ್ಜಾ, ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ತಾ.ಪಂ. ಸದಸ್ಯ ಎಂ. ರಾಮಕೃಷ್ಣಪ್ಪ ಅವರು ತಿಳಿಸಿದ್ದಾರೆ. ಜಗ-ಜಗಿಸುವ ವಿದ್ಯುತ್ ದೀಪಗಳಿಂದಲೂ, ಅಲಂಕೃತವಾದ ಭವ್ಯ ರಂಗಮಂದಿರವನ್ನು ಶಿವನಗೆರೆ ಗ್ರಾಮದಲ್ಲಿ ನಿರ್ಮಿಸಲಾಗಿದೆ.
16ರ ವರೆಗೂ ಅವಕಾಶ
ಕೊರಟಗೆರೆ: ಕೊರಟಗೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆ ಸಂಬಂಧಪಟ್ಟಂತೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುತ್ತಿದ್ದು ಮಾ.16 ರವರೆಗೂ ಅವಕಾಶವಿದೆ. ಕ್ಷೇತ್ರದ ಎಲ್ಲಾ ಮತಗಟ್ಟೆಗಳಲ್ಲಿ ಬಿಎಒ ಗಳ ಮೂಲಕ ವಿಶೇಷ ಶಿಬಿರಗಳನ್ನು ಏರ್ಪಡಿಸಿ ಮತದಾರರ ಹೆಸರು ಸೇರ್ಪಡೆ ಅಥವಾ ಕೈಬಿಡುವ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

